ವಿಜಯಪುರ | ಶಿಕ್ಷಕರ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆಗೆ ಆಗ್ರಹ

Date:

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಕಟಿಸಿರುವ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ, ರಾಜ್ಯ ಸರ್ಕಾರ ಘೋಷಿಸಿರುವಂತೆ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಬೇಕು. 11 ವರ್ಷಗಳ ಬಳಿಕ ಕರೆಯಲಾದ 4,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಖಾಲಿ ಇರುವ ಎಲ್ಲ ವಿಷಯಗಳ ಹುದ್ದೆಗಳನ್ನು ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ (ಜೆಎಎಸ್‌ಸಿ) ಮತ್ತು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ ಪಾಟೀಲ ಅವರಿಗೆ ಮನವಿ ಸಲ್ಲಿಸಿದವು.

- Advertisement -

ವಿಜಯಪುರದಲ್ಲಿ ಭಾನುವಾರ ಬೆಳಿಗ್ಗೆ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದ ನಿಯೋಗ, ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಉದ್ಯೋಗಾಕಾಂಕ್ಷಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ರಾಜ್ಯ ಸರ್ಕಾರವು 2026ರ ಜನವರಿ 29ರಂದು ಹೊರಡಿಸಿರುವ ರಾಜ್ಯಪತ್ರದಲ್ಲಿ, 2027ರ ಡಿಸೆಂಬರ್ 31ರವರೆಗೆ ರಾಜ್ಯ ಸರ್ಕಾರ ನಡೆಸುವ ಎಲ್ಲ ನೇರ ನೇಮಕಾತಿಗಳಲ್ಲಿ ಐದು ವರ್ಷ ವಯೋಮಿತಿ ಸಡಿಲಿಕೆ ನೀಡಲು ಆದೇಶಿಸಿದೆ. ಆದರೆ, 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಈ ಸಡಿಲಿಕೆ ನೀಡಿಲ್ಲ. ಸರ್ಕಾರದ ಆದೇಶದಂತೆ ಶಿಕ್ಷಕರ ನೇಮಕಾತಿಯಲ್ಲಿಯೂ ಐದು ವರ್ಷ ವಯೋಮಿತಿ ಸಡಿಲಿಕೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅದೇ ರೀತಿ, 11 ವರ್ಷಗಳ ಬಳಿಕ 4,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ನಡೆಯುತ್ತಿದೆ. ಗಣಿತ ಸೇರಿದಂತೆ ವಿವಿಧ ವಿಷಯಗಳ ಶಿಕ್ಷಕರ ಹುದ್ದೆಗಳು ಸಾಕಷ್ಟು ಖಾಲಿ ಇದ್ದರೂ, ನೇಮಕಾತಿಯಲ್ಲಿ ಎಲ್ಲ ಹುದ್ದೆಗಳನ್ನು ಸೇರಿಸಿಲ್ಲ. ಇದರಿಂದ ಪದವಿ ಹಾಗೂ ಬಿ.ಎಡ್‌ನಲ್ಲಿ ಗಣಿತ ಸೇರಿದಂತೆ ವಿವಿಧ ವಿಷಯಗಳನ್ನು ಅಭ್ಯಾಸ ಮಾಡಿ ಪ್ರೌಢಶಾಲಾ ಶಿಕ್ಷಕರಾಗಲು ಕಾಯುತ್ತಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗಲಿದೆ. ಆದ್ದರಿಂದ ಖಾಲಿ ಇರುವ ಎಲ್ಲ ವಿಷಯಗಳ ಶಿಕ್ಷಕರ ಹುದ್ದೆಗಳನ್ನು ನೇಮಕಾತಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಸಚಿವ ಎಂ.ಬಿ. ಪಾಟೀಲ ಅವರು, ವಿಷಯವನ್ನು ಪರಿಶೀಲಿಸಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ಧಲಿಂಗ ಬಾಗೇವಾಡಿ ನಿಯೋಗದ ನೇತೃತ್ವ ವಹಿಸಿದ್ದರು. ಮುಖಂಡರಾದ ಸಿದ್ರಾಮಯ್ಯ ಹಿರೇಮಠ, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಮುಖಂಡರಾದ ಯಮನಪ್ಪ ಮಾದರ, ಲಾಲಾಸಾಬ್ ಅತ್ತಾರ, ಸಂಗಮೇಶ ಪಟ್ಟಣದ, ಎಸ್.ಎ. ಪೂಜಾರಿ, ಬಿ.ಕೆ. ಉಕಮನಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸಿಜೆಪಿ ಪ್ರತಿಭಟನೆ: ಗುಂಪು ಸೇರದಂತೆ ದೆಹಲಿ ಪೊಲೀಸರ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಕಾಕ್‌ರೋಚ್ ಜನತಾ...

SIR ಪೂರ್ಣಗೊಂಡ ರಾಜ್ಯಗಳಲ್ಲಿ SSR ಪ್ರಕ್ರಿಯೆ: ಕೇಂದ್ರ ಚುನಾವಣಾ ಆಯೋಗ

'ವಿಶೇಷ ಸಮಗ್ರ ಪರಿಷ್ಕರಣೆ' (SIR- Special Intensive Revision) ಪ್ರಕ್ರಿಯೆ ಪೂರ್ಣಗೊಂಡಿರುವ...

ಕಲಬುರಗಿ | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು

ಕಲಬುರಗಿ ಹೊರವಲಯದ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ...

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...