ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

Date:

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಚಲವಾದಿ ಸಮಾಜದ ರುದ್ರ ಭೂಮಿ ಸೇವಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಪ್ರದೀಪ ಚಲವಾದಿ ಮಾತನಾಡಿ, “ಸ್ಮಶಾನ ಭೂಮಿಗೆ ಸೂಕ್ತ ಮೂಲಸೌಕರ್ಯಗಳಿಲ್ಲದೆ ಸಮಾಜದ ಜನರು ಹಲವು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಸ್ಮಶಾನದ ಸುತ್ತಲೂ ಕಂಪೌಂಡ್ ನಿರ್ಮಾಣ, ರಸ್ತೆ ಹಾಗೂ ಗೇಟ್ ವ್ಯವಸ್ಥೆ, ವಿದ್ಯುತ್ ದೀಪ ಅಳವಡಿಕೆ, ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತಕ್ಷಣ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಅಲ್ಲದೆ, ಸ್ಮಶಾನದಲ್ಲಿ ಎರಡು ಕೊಠಡಿಗಳನ್ನು ನಿರ್ಮಿಸಿ, ಪೇಟಿಂಗ್ ಸೇರಿದಂತೆ ಇತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಈ ಕುರಿತು ಈಗಾಗಲೇ ಐದು ವರ್ಷಗಳ ಹಿಂದೆಯೇ ಮನವಿ ಸಲ್ಲಿಸಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕರು ಯಾವುದೇ ರೀತಿಯ ಇಚ್ಛಾಶಕ್ತಿ ತೋರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜನರ ಅಂತಿಮ ಸಂಸ್ಕಾರಕ್ಕೆ ಸಂಬಂಧಿಸಿದ ಸ್ಥಳವೊಂದಕ್ಕೆ ಕನಿಷ್ಠ ಮೂಲಸೌಕರ್ಯ ಒದಗಿಸುವುದು ಆಡಳಿತದ ಜವಾಬ್ದಾರಿಯಾಗಿದೆ. ಹೀಗಾಗಿ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಚೆನ್ನು ಕಟ್ಟಿಮನಿ,ಶಂಕರ ಚಲವಾದಿ, ರಮೇಶ ಬೋರಗಿ, ಯಮನಪ್ಪ ಸಿದ್ದರಡ್ಡಿ, ಚಂದ್ರು ಕಳ್ಳಿಮನಿ, ನಾಗರಾಜ ನಿಂಗದಳ್ಳಿ, ಸಂತೋಷ ಗಡೇದ, ಶಿವರಾಜ ಚಿಕ್ಕಲಕಿ, ವಿನೋದ ತಳಕೇರಿ, ಸದಾಶಿವ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ ಪುನಃ ಭುಗಿಲೆಬ್ಬಿಸಿದ ವಿವಾದ

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ...

ಕೊಡಗು ವಿವಿ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ್‌ಗೆ ಪ್ರತಿಷ್ಠಿತ ‘ದಿ AGRI100-2026’ ಪ್ರಶಸ್ತಿ

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ್ ಸಂಗಪ್ಪ ಅಲೂರ್ ಅವರು ಭಾರತದ...

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...