ವಿಜಯಪುರ | ಕೆಪಿಎಸ್‌ಸಿ ನೇಮಕಾತಿ ಅಕ್ರಮ ಖಂಡಿಸಿ ಪ್ರತಿಭಟನೆ: ಪಿಸಿ ಹೋಟಾ ಸಮಿತಿ ಜಾರಿಗೆ ಒತ್ತಾಯ

Date:

ಕೆಪಿಎಸ್‌ಸಿಯಲ್ಲಿ ಸುದ್ದಿಯಾದ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅವ್ಯವಹಾರಗಳು ಹಾಗೂ ವಿಳಂಬಗಳಿಂದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದೆ. ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಜವಾಬ್ದಾರಿಯನ್ನು ಸರ್ಕಾರ ನ್ಯಾಯಸಮ್ಮತವಾಗಿ ನಿರ್ವಹಿಸಬೇಕು. ಪಿಸಿ ಹೋಟಾ ಸಮಿತಿ ವರದಿ ಜಾರಿಗೆ ತರಬೇಕು ಎಂದು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೇವಾಡಿ ಹೇಳಿದರು.

- Advertisement -

ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆಪಿಎಸ್‌ಸಿಯನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು ಹಾಗೂ ಅರ್ಹರಿಗೆ ನ್ಯಾಯ ಒದಗಿಸಲು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಎಐಡಿವೈಓ ಯುವಜನ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಲಕ್ಷಾಂತರ ಯುವಜನರ ಕನಸುಗಳಿಗೆ ಬೆಳಕಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಇಂದು ಒಂದರ ಹಿಂದೆ ಒಂದರಂತೆ ಹೊರಬರುತ್ತಿರುವ ಅಕ್ರಮಗಳಿಂದ ಪ್ರಶ್ನಾರ್ಹವಾಗಿದೆ. ಪ್ರತಿ ಹಗರಣವೂ ಸಾವಿರಾರು ಯುವಜನರ ಶ್ರಮ, ಸಮಯ ಮತ್ತು ಭವಿಷ್ಯದ ಮೇಲೆ ಹೊಡೆತ ನೀಡಿದೆ. ಅರ್ಹತೆಗಿಂತ ಹಣ, ಪ್ರಭಾವ ಮತ್ತು ಲಂಚ ನೀಡಿದವರಿಗೆ ಉದ್ಯೋಗಾವಕಾಶ ಸಿಗುತ್ತಿದೆ ಎಂಬ ಭಾವನೆ ಸಮಾಜದಲ್ಲಿ ಬೇರೂರಿದೆ. ಕೆಪಿಎಸ್‌ಸಿಯಲ್ಲಿನ ಭ್ರಷ್ಟಾಚಾರ ಮತ್ತು ಅಕ್ರಮಗಳು ಕೇವಲ ಕೆಲವೇ ಅಭ್ಯರ್ಥಿಗಳ ಸಮಸ್ಯೆಯಲ್ಲ; ಅದು ರಾಜ್ಯದ ಲಕ್ಷಾಂತರ ಯುವಜನರ ಭವಿಷ್ಯದ ಪ್ರಶ್ನೆಯಾಗಿದೆ.

ಈ ಪರಿಸ್ಥಿತಿಗೆ ತೆರೆ ಬೀಳಬೇಕು. ಭ್ರಷ್ಟಾಚಾರದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಪಿ.ಸಿ. ಹೋಟಾ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತಂದು, ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕ, ತಂತ್ರಜ್ಞಾನ ಆಧಾರಿತ ಹಾಗೂ ಜನರ ವಿಶ್ವಾಸ ಗಳಿಸುವ ರೀತಿಯಲ್ಲಿ ರೂಪಿಸಬೇಕು. ಆದ್ದರಿಂದ ಕೆಪಿಎಸ್‌ಸಿಯನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು ಹಾಗೂ ಅರ್ಹರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಉದ್ಯೋಗಾಕಾಂಕ್ಷಿಗಳಾದ ನವೀನ ಹಾಗೂ ಭಾಗ್ಯಶ್ರೀ ಅವರು ಮಾತನಾಡಿ, “ಸರ್ಕಾರ ಭ್ರಷ್ಟಾಚಾರ ತಡೆಗಟ್ಟದಿದ್ದರೆ, ಪ್ರತಿ ಹುದ್ದೆಗೆ ಇಂತಿಷ್ಟು ಎಂದು ದರವನ್ನು ನಿಗದಿ ಮಾಡಲಿ. ಆಗ ನಾವು ಕಷ್ಟಪಟ್ಟು ಓದುವುದೂ ತಪ್ಪುತ್ತದೆ. ಅವರ ಅಯೋಗ್ಯತೆಯು ಬಹಿರಂಗವಾಗುತ್ತದೆ. ನಮ್ಮ ಅರ್ಹತೆಗೆ ತಕ್ಕ ಒಂದು ಉದ್ಯೋಗ ಕೊಡಲು ಆಗದವರಿಗೆ ಮಂತ್ರಿಗಳಾಗಲು ಯಾವ ಅರ್ಹತೆ ಇದೆ?” ಎಂದು ಪ್ರಶ್ನಿಸಿದರು.

ಎಐಡಿವೈಓನ ಜಿಲ್ಲಾಧ್ಯಕ್ಷರಾದ ಶ್ರೀಕಾಂತ ಕೊಂಡಗೂಳಿ, ಜಂಟಿ ಕಾರ್ಯದರ್ಶಿ ಆಶೋಕ ದೇಸಾಯಿ ಹಾಗೂ ಉದ್ಯೋಗಾಕಾಂಕ್ಷಿಗಳಾದ ಕಲ್ಯಾಣಿ, ಐಶ್ವರ್ಯ, ಭಾಗ್ಯಾ, ಸೃಷ್ಟಿ, ಕೋಮಲ, ರೋಹನ್, ಮುತ್ತು, ಮಲ್ಲು, ಮೇಘರಾಜ ಅವರು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...

ಬೀದರ್‌ | ವರ್ಷ ಕಳೆದರೂ ಸಿಗದ ರೈತ ಆತ್ಮಹತ್ಯೆ ಪರಿಹಾರ: ಸಂಕಷ್ಟದಲ್ಲಿ ಸಂತ್ರಸ್ತ ಕುಟುಂಬಗಳು!

ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...