ವಿಜಯಪುರ | ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಒಕ್ಕರೊಲಿನಿಂದ ಆಗ್ರಹಿಸಿ: ಶಶಿಕಾಂತ ಪಟ್ಟಣ ಕರೆ

Date:

ಜಗತ್ತು ಕಂಡ ಬಹುದೊಡ್ಡ ದಾರ್ಶನಿಕ ಬಸವಣ್ಣ. ಅವರ ಜನ್ಮ ಭೂಮಿಯಾದ ವಿಜಯಪುರದಲ್ಲಿ ಸರ್ಕಾರ ವಚನ ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಅದಕ್ಕಾಗಿ ಇಲ್ಲಿಯ ಜನತೆ ಒಕ್ಕೂರಲಿನಿಂದ ಆಗ್ರಹಿಸಬೇಕು ಎಂದು ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಶಶಿಕಾಂತ ಪಟ್ಟಣ ಹೇಳಿದರು.

- Advertisement -

ವಿಜಯಪುರ ನಗರದಲ್ಲಿ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ವಿಜಯಪುರ ಜಿಲ್ಲಾ ಘಟಕ ಆಯೋಜಿಸಿದ ಬಸವ ಜಯಂತಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಅಶೋಕ ಆಲೂರ ಮಾತನಾಡಿ “ಅಹಿಂಸೆಯ ಪರಾಕಾಷ್ಠೆ ಬೋಧಿಸಿದ್ದು ಬಸವಧರ್ಮ. ʼಅರಿವು, ಆಚಾರ ಮತ್ತು ಅನುಭವʼ ಇವು ಅದರ ಉತ್ತುಂಗದ ತತ್ವಗಳು. ಬಹುದೇವೋಪಾಸನೆಯಿಂದ ಏಕದೇವೋಪಾಸನೆಯೆಡೆಗೆ, ಜಾತಿಯಿಂದ ನೀತಿಯೆಡೆಗೆ, ಕರ್ಮ ಸಿದ್ದಾಂತದಿಂದ ಕಾಯಕ ಸಿದ್ಧಾಂತದೆಡೆಗೆ, ಮೂಢನಂಬಿಕೆಯಿಂದ ವೈಚಾರಿಕತೆಯೆಡೆಗೆ ಲಿಂಗ ಭೇದವಿಲ್ಲದ ಸಮ ಸಮಾಜದೊಳಗೆ ಕರೆದೊಯ್ದರು. ಇಂತಹ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿ ಬಸವಣ್ಣ” ಎಂದರು.

ಇದನ್ನೂ ಓದಿ> ವಿಜಯಪುರ | ಬಸವಣ್ಣ ʼಸಾಂಸ್ಕೃತಿಕ ನಾಯಕʼನೆಂಬ ಘೋಷಣೆ ಸ್ವಾಗತಾರ್ಹ: ರವಿಕುಮಾರ ಬಿರಾದಾರ

ವಿಜಯಪುರ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷ ಸುರೇಶ ದೇಸಾಯಿ ಬಳ್ಳಾರಿ, ರಾಷ್ಟ್ರೀಯ ಬಸವದಳದ ಅಧ್ಯಕ್ಷೆ ಶಾರದಮ್ಮ ಹಾಗೂ ಧಾರವಾಡದ ಮೃತ್ಯುಂಜಯ ಶೆಟ್ಟರ್ ಮಾತನಾಡಿದರು. ಈ ಸಂದರ್ಭದಲ್ಲಿ 21 ಜನ ಸಾಧಕರಿಗೆ ಕ್ರಾಂತಿ ಗಂಗೋತ್ರಿ ಅಕ್ಕನಾಗಮ್ಮ ಪ್ರಶಸ್ತಿ, ವಚನ ಗಾನಕೋಗಿಲೆ ಪ್ರಶಸ್ತಿ ಹಾಗೂ ಬಸವ ಸೇವಾ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಶಾರದಾ ಪಾಟೀಲ, ಜಿಲ್ಲಾ ಘಟಕದ ಗೌರವಧ್ಯಕ್ಷೆ ಸರಸ್ವತಿ ಪಾಟೀಲ, ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ವಿಜಯಲಕ್ಷ್ಮಿ ಹಂಗರಗಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಬಡವರನ್ನು ಸುಟ್ಟ ಬೆಲೆಯೇರಿಕೆ ಬಿಸಿ ಸರ್ಕಾರಗಳನ್ನೂ ಸುಟ್ಟೀತು

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ನೀಡಿ, ಟಿಕೆಟ್‌ ದರ ಹೆಚ್ಚಿಸುವುದು ಪುರುಷರ...

ವಿಜಯಪುರ |ಪದವಿಯೊಂದೇ ಸಾಲದು, ಪ್ರಾಯೋಗಿಕ ಕೌಶಲಗಳೂ ಅಗತ್ಯ: ಡಾ. ಅಕ್ಷಯ ಯಾರ್ದಿ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ಸಂವಹನ, ಮಾತುಗಾರಿಕೆ, ಸುದ್ದಿ ನಿರೂಪಣೆ...

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತದ ಮೂಲಕ ಆಕ್ರೋಶ ಹೊರಹಾಕಿ: ಕಾಂಗ್ರೆಸ್ ಕರೆ

ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ, ಇದರಿಂದ ಸಾಲದ ಸುಳಿಯಲ್ಲಿ ಸಿಲುಕಿ ಸಾಮಾನ್ಯ...