ವಿಜಯಪುರ ಜಿಲ್ಲೆಯಲ್ಲಿ 2026-27ನೇ ಸಾಲಿನಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವ ಹಿನ್ನೆಲೆಯಲ್ಲಿ, ವಿಜಯಪುರ ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ಬರಗಾಲ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಡೆಯುತ್ತಿರುವ ಹೋರಾಟ ಮಂಗಳವಾರ 6ನೇ ದಿನಕ್ಕೆ ಕಾಲಿಟ್ಟಿದೆ.
ಜಿಲ್ಲೆಯಲ್ಲಿನ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ಪರಿಶೀಲಿಸದೇ, ಕೇವಲ ಮೂರು ತಾಲೂಕುಗಳನ್ನು ಪೂರ್ಣ ಬರಗಾಲ ಹಾಗೂ ಇನ್ನೂ ಮೂರು ತಾಲೂಕುಗಳನ್ನು ಮಧ್ಯಮ ಬರಗಾಲವೆಂದು ಪರಿಗಣಿಸಲಾಗಿದೆ. ಉಳಿದ 7 ತಾಲೂಕುಗಳನ್ನು ಬರಗಾಲ ಪಟ್ಟಿಯಿಂದ ಕೈಬಿಡಲಾಗಿದೆ. ಇದು ರೈತರಿಗೆ ಅನ್ಯಾಯವಾಗಿದ್ದು, ಕೂಡಲೇ ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ಬರಗಾಲ ಪ್ರದೇಶವೆಂದು ಘೋಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
“ಮಳೆ ಕೊರತೆಯಿಂದಾಗಿ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬೆಳೆಗಳು ಒಣಗುವ ಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಬರ ಪರಿಸ್ಥಿತಿಯ ಸಮಗ್ರ ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ಬೆಳೆ ಪರಿಹಾರ ಸೇರಿದಂತೆ ಅಗತ್ಯ ನೆರವು ನೀಡಬೇಕು” ಎಂದು ಆಗ್ರಹಿಸಿದರು.
ಹೋರಾಟದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಮಹಾದೇವ ಬನಸೋಡೆ, ತಾಲೂಕು ಅಧ್ಯಕ್ಷ ಅನಮೇಶ ಜಮಖಂಡಿ, ಭೀಮು ಹೊನವಾಡ, ಅಮರೇಶ ಭೈರಗೊಂಡ, ಶಿವರಾಜ ಮೆಂಡೇಗಾರ, ಶೌಕತಲಿ ನದಾಪ, ಮುತ್ತು ಹಿರೇಗೋಳ, ಸಂತೋಷ ಬಿರಾದಾರ, ರಾಮನಗೌಡ ಪಾಟೀಲ ಗುಣಕಿ, ಗುರುಲಿಂಗಪ್ಪಗೌಡ ಬಿರಾದಾರ, ಸಿದ್ದಣ್ಣ ಬಾಳಿಗೇರಿ, ಅಶೋಕ ಜಂಬಗಿ, ಯಲ್ಲಾಲಿಂಗ ಮಣ್ಣಾಗೋಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಜಯಪುರ ಜಿಲ್ಲೆಯಲ್ಲಿ 2026-27ನೇ ಸಾಲಿನಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲ 13 ತಾಲೂಕುಗಳನ್ನು ಬರಗಾಲ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಡೆಯುತ್ತಿರುವ ಹೋರಾಟ ಮಂಗಳವಾರ 6ನೇ ದಿನಕ್ಕೆ ಕಾಲಿಟ್ಟಿದೆ.
ಜಿಲ್ಲೆಯಲ್ಲಿನ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ಪರಿಶೀಲಿಸದೇ ಕೇವಲ ಮೂರು ತಾಲೂಕುಗಳನ್ನು ಪೂರ್ಣ ಬರಗಾಲ ಹಾಗೂ ಇನ್ನು ಮೂರು ತಾಲೂಕುಗಳನ್ನು ಮಧ್ಯಮ ಬರಗಾಲವೆಂದು ಪರಿಗಣಿಸಲಾಗಿದೆ. ಉಳಿದ 7 ತಾಲೂಕುಗಳನ್ನು ಬರಗಾಲ ಪಟ್ಟಿಯಿಂದ ಕೈಬಿಡಲಾಗಿದೆ. ಇದು ರೈತರಿಗೆ ಅನ್ಯಾಯವಾಗಿದ್ದು, ಕೂಡಲೇ ಜಿಲ್ಲೆಯ ಎಲ್ಲ 13 ತಾಲೂಕುಗಳನ್ನು ಬರಗಾಲ ಪ್ರದೇಶವೆಂದು ಘೋಷಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
“ಮಳೆ ಕೊರತೆಯಿಂದಾಗಿ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಬೆಳೆಗಳು ಒಣಗುವ ಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಬರ ಪರಿಸ್ಥಿತಿಯ ಸಮಗ್ರ ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ಬೆಳೆ ಪರಿಹಾರ ಸೇರಿದಂತೆ ಅಗತ್ಯ ನೆರವು ನೀಡಬೇಕು” ಎಂದು ಆಗ್ರಹಿಸಿದರು.
ಹೋರಾಟದಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಮಹಾದೇವ ಬನಸೋಡೆ, ತಾಲೂಕು ಅಧ್ಯಕ್ಷ ಅನಮೇಶ ಜಮಖಂಡಿ, ಭೀಮು ಹೊನವಾಡ, ಅಮರೇಶ ಭೈರಗೊಂಡ, ಶಿವರಾಜ ಮೆಂಡೇಗಾರ, ಶೌಕತಲಿ ನದಾಪ, ಮುತ್ತು ಹಿರೇಗೋಳ, ಸಂತೋಷ ಬಿರಾದಾರ, ರಾಮನಗೌಡ ಪಾಟೀಲ ಗುಣಕಿ, ಗುರುಲಿಂಗಪ್ಪಗೌಡ ಬಿರಾದಾರ, ಸಿದ್ದಣ್ಣ ಬಾಳಿಗೇರಿ, ಅಶೋಕ ಜಂಬಗಿ, ಯಲ್ಲಾಲಿಂಗ ಮಣ್ಣಾಗೋಳ ಸೇರಿದಂತೆ ಹಲವರು ಇದ್ದರು.





