ವಿಜಯಪುರ | ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿಸಲು ಆಗ್ರಹ

Date:

ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವಾಗಿ ಮಾಡಿ ಆದೇಶಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಮೈಬೂಬಸಾಬ್ ಕಣ್ಣಿ ಮತ್ತು ಗ್ರಾಮಸ್ಥರು ಸ್ಥಳೀಯ ಶಾಸಕ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಕಾಂಗ್ರೆಸ್ ಮುಖಂಡ ಮೈಬೂಬಸಾಬ್ ಪತ್ರಿಕಾ ಹೇಳಿಕೆ ನೀಡಿದ್ದು, “ತಾಲೂಕಿನ ಗ್ರಾಮಗಳಾದ ಕುಳೇಕುಮಟಗಿ, ಬಗಲೂರ, ಹಾವಳಗಿ, ಕಕ್ಕಳಮೇಲಿ, ಹಂಚಿನಾಳ, ಜಾಟ್ನಳ, ಬಿಸಾನಾಳ, ಕೆರೂರ ಸೇರಿದಂತೆ ಹತ್ತು ಹಲವಾರು ಹಳ್ಳಿಗಳ ವ್ಯವಹಾರ ವಹಿವಾಟಿಗೆ, ವ್ಯಾಪಾರಕ್ಕೆ ಮೋರಟಗಿ ಗ್ರಾಮವು ಕೇಂದ್ರ ಬಿಂದುವಾಗಿದೆ. ಸ್ಥಳೀಯವಾಗಿ 14 ಸಾವಿರಕ್ಕಿಂತಲೂ ಅಧಿಕ ಜನಸಂಖ್ಯೆ ಹೊಂದಿರುವ ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಮಾಡಿ ಆದೇಶಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಸಿಂಧಗಿ ತಾಲೂಕಿಗೆ ಮೋರಟಗಿ ಗ್ರಾಮ 22 ಕಿ ಮೀ ಸಮೀಪದಲ್ಲಿತ್ತು. ಇದೀಗ 45 ಕಿ ಮೀ ದೂರದ ಆಲಮೇಲ ತಾಲೂಕಿಗೆ ಸೇರ್ಪಡೆಗೊಂಡಿದ್ದರಿಂದ ಸರ್ಕಾರಿ ಸೌಲಭ್ಯಕ್ಕೆ ಕಚೇರಿಗಳಿಗೆ ತೆರಳಲು ವೃದ್ಧರು, ಅಂಗವಿಕಲರು ಬಹಳಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರೈತರಿಗೆ, ವೃದ್ಧರಿಗೆ, ಅಂಗವಿಕಲರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೋರಟಗಿ ಗ್ರಾಮವನ್ನು ಹೋಬಳಿ ಗ್ರಾಮವನ್ನಾಗಿ ಆದೇಶಿಸಲು ಹಿಂದಿನ ಶಾಸಕರಿಗೂ, ಸಚಿವರಿಗೂ ಹತ್ತು ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ, ಆಶ್ವಾಸನೆಗಳ ಸುರಿಮಳೆಗಳು ಬಂದಿವೆಯೇ ವಿನಃ ಕಾರ್ಯರೂಪಕ್ಕೆ ಬಂದಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಹಿಳೆಯ ವಿವಸ್ತ್ರ ಪ್ರಕರಣ, ಹೆಣ್ಣು ಭ್ರೂಣ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

“ನೂತನ ಶಾಸಕರಾಗಿ ಆಯ್ಕೆಯಾದ ಅಶೋಕ ಮನಗೂಳಿ ಅವರಿಗೂ ಕೂಡಾ ಈಗಾಗಲೇ ಈ ಕುರಿತು ಮನವಿ ಮಾಡಿದ್ದೇವೆ. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿಸುವುದಾಗಿ ಭರವಸೆ ನೀಡಿದ್ದಾರೆ. ಆದಷ್ಟು ಬೇಗನೆ ಸರ್ಕಾರಕ್ಕೆ ಒತ್ತಾಯಿಸಿ ಶೀಘ್ರದಲ್ಲೇ ಕಾರ್ಯರೂಪಕ್ಕೆ ತರಬೇಕು” ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರುಗಳಾದ ಸತ್ಯನಾರಾಯಣ ತಿವಾರಿ, ವೀರನಗೌಡ ಪಾಟೀಲ, ಮುತ್ತಪ್ಪ ಸಿಂಗೆ, ಸಲೀಮ್ ಕಣ್ಣಿ ಸೇರಿದಂತೆ ಪ್ರಗತಿಪರ ರೈತರು, ಗ್ರಾಮಸ್ಥರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

ಬೆಂಗಳೂರು | 2 ವರ್ಷಗಳ ಬಳಿಕ ಪೀಣ್ಯ ಫ್ಲೈಓವರ್‌ನಲ್ಲಿ ಭಾರೀ ವಾಹನ ಸಂಚಾರ ಅವಕಾಶ; ಷರತ್ತೂ ಅನ್ವಯ

ಬೆಂಗಳೂರಿನಿಂದ ಕರ್ನಾಟಕದ ಉತ್ತರ ಭಾಗಕ್ಕೆ ಸಂಪರ್ಕ ಒದಗಿರುವ ತುಮಕೂರು ರಸ್ತೆಯಲ್ಲಿರುವ ಪೀಣ್ಯ...