ವಿಜಯಪುರ | ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹ

Date:

ಮುಂಗಾರು ಮಳೆ ಆಗದೆ ಬೆಳೆಗಳು ವಿನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಂಡು ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಅಧ್ಯಕ್ಷ ಶಂಕರಗೌಡ ಹಿರೇಗೌಡರ್ ಆಗ್ರಹಿಸಿದರು.

- Advertisement -

ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕಬ್ಬು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಬೇಕು. ಬಾಕಿ ಉಳಿದಿರುವ ಕಬ್ಬಿನ ಬಿಲ್ಲನ್ನು ತುರ್ತಾಗಿ ಮಂಜೂರು ಮಾಡಬೇಕು. ಕಬ್ಬು ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಬೇಕು. ಕನಿಷ್ಠ ಬೆಂಬಲ ಬೆಲೆ ಪ್ರತಿ ಟನ್ನಿಗೆ ₹5,000 ನಿಗದಿಗೊಳಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬರ ನಿರ್ವಹಣೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ; ರೈತ ಸಂಘ ಆಗ್ರಹ

“ಕೃಷಿ ಸಾಲ ವಸೂಲಾತಿ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಗುಣಾತ್ಮಕ ತ್ರೀ ಫೇಸ್ ವಿದ್ಯುತ್ ಶಕ್ತಿಯನ್ನು ಕನಿಷ್ಠ ಏಳು ಗಂಟೆಗಳ ಕಾಲ ನಿರಂತರ ಸರಬರಾಜು ಮಾಡಬೇಕು. ಒಣ ದ್ರಾಕ್ಷಿ ಬೆಲೆಯನ್ನು ಪ್ರತಿ ಕೆಜಿಗೆ ₹250-₹300 ನಿಗದಿಗೊಳಿಸಬೇಕು. ಆಲಮಟ್ಟಿಯ ಜಲಾಶಯದ ಮೂರನೇ ಹಂತದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು” ಎಂದು ಆಗ್ರಹಿಸಿದರು.

ಜಿಲ್ಲಾ ಮುಖಂಡರುಗಳಾದ, ಬಾಪುಗೌಡ ಬಿರಾದಾರ್, ಸಿದ್ದರಾಯ್ ಜಂಗಮಶೆಟ್ಟಿ, ಗುರುಗೌಡ ಬಿರಾದಾರ್, ಗಿರೀಶ್ ಹಿರೇಮಠ್, ಶಿವಶರಣ ರೆಡ್ಡಿ ಅವರಾದಿ, ವಾಣಿ ಮುಳುವಾಡ, ಸರಸ್ವತಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...