ವಿಜಯಪುರ | ಜನಗಣತಿ-2027 ನಿಖರವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

Date:

ಮುಂದಿನ ಹತ್ತು ವರ್ಷಗಳ ಅಭಿವೃದ್ಧಿ ಯೋಜನೆ, ಬಜೆಟ್ ಹಂಚಿಕೆ, ಎಸ್‌ಸಿಪಿ-ಟಿಎಸ್‌ಪಿ ಅನುದಾನ ಹಾಗೂ ಕ್ಷೇತ್ರಗಳ ಪುನರ್ವಿಂಗಡಣೆಗೆ ಜನಗಣತಿಯ ಮಾಹಿತಿ ಆಧಾರವಾಗಲಿದೆ. ಹೀಗಾಗಿ ಜನಗಣತಿ-2027ರ ಮನೆಗಳ ಪಟ್ಟಿ ಮತ್ತು ಜನಸಂಖ್ಯಾ ಗಣತಿ ಕಾರ್ಯವನ್ನು ನಿಖರವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಸೂಚಿಸಿದರು.

- Advertisement -

ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜನಗಣತಿ-2027ರ ಎರಡನೇ ಹಂತದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಯಾವುದೇ ಮನೆ ಅಥವಾ ವ್ಯಕ್ತಿ ಗಣತಿಯಿಂದ ಹೊರಗುಳಿಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಜನವರಿ 10ರಿಂದ 24ರವರೆಗೆ ಸ್ವಯಂ ಗಣತಿ ಹಾಗೂ ಜನವರಿ 25ರಿಂದ ಫೆಬ್ರವರಿ 28ರವರೆಗೆ ಮನೆಗಳ ಪಟ್ಟಿ ಮತ್ತು ಜನಗಣತಿ ಕಾರ್ಯ ನಡೆಯಲಿದೆ. ಗಣತಿದಾರರು ಸಿಎಂಎಂಎಸ್ ಮೊಬೈಲ್ ಆ್ಯಪ್ ಮೂಲಕ ಮಾಹಿತಿ ಸಂಗ್ರಹಿಸಿ, ಗೌಪ್ಯತೆ ಕಾಪಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಹಸಿವು, ಹಕ್ಕು ಮತ್ತು ‘ದೇವರ ಹೆಣ’

ಹಸಿದವನಿಗೆ ಮಾಂಸವನ್ನು ನಿರಾಕರಿಸುವುದು ಕೇವಲ ದ್ವೇಷವಲ್ಲ, ಅದು ತನ್ನ ಜಾತಿಯ ಪಾವಿತ್ರ್ಯವನ್ನು ಹಸಿದ ಹೊಟ್ಟೆಯ ಮೇಲೆ ಹೇರುವ ಕ್ರೌರ್ಯ. ಇಂದಿನ ಗೋರಕ್ಷಣೆಯ ರಾಜಕಾರಣ ಹಿನ್ನೆಲೆಯಲ್ಲಿ ಈ 'ದೇವರ ಹೆಣ' ಕಥೆಯ ಒಳನೋಟ ಇನ್ನಷ್ಟು...

ವಸತಿಯೇತರ ಕಟ್ಟಡಗಳು, ಮನೆ ಇಲ್ಲದವರು, ಹಾಸ್ಟೆಲ್‌ಗಳು, ಪಿಜಿಗಳು ಹಾಗೂ ವಿವಿಧ ವಸತಿ ಸಂಸ್ಥೆಗಳನ್ನೂ ಗಣತಿ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ಆನಂದ ಪ್ರಕಾಶ ಮೀನಾ ಮಾತನಾಡಿ, “ಗಣತಿ ಕಾರ್ಯದಲ್ಲಿ ನಿಖರತೆ ಮತ್ತು ಜವಾಬ್ದಾರಿ ಮುಖ್ಯವಾಗಿದ್ದು, ತರಬೇತಿಯ ಸೂಚನೆಗಳನ್ನು ಪಾಲಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸಬೇಕು” ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ, ಉಪವಿಭಾಗಾಧಿಕಾರಿ ಜುಫಿಶಾನ್ ಹಕ್, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಹಾಲು,ಮೊಸರು ದರ ಏರಿಕೆ ಅವೈಜ್ಞಾನಿಕ: ಬೆಲೆ ಇಳಿಕೆಗೆ ಸಿಪಿಐ ಆಗ್ರಹ

ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಏರಿಸಿರುವ ಹಾಲು ಮತ್ತು ಮೊಸರಿನ ಬೆಲೆಯನ್ನು ಕೂಡಲೇ...

ಹೈಕೋರ್ಟ್ ತೀರ್ಪು ಬರುವವರೆಗೆ ಸೋನಮ್ ವಾಂಗ್‌ಚುಕ್ ಶಾಲೆಯ ಚಟುವಟಿಕೆ ತಡೆಗೆ ಲಡಾಖ್ ಆಡಳಿತ ಆದೇಶ

ಪರಿಸರ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರ 'ಹಿಮಾಲಯನ್...

ಚಿಕ್ಕಮಗಳೂರು | ಸಚಿವ ಯತೀಂದ್ರ ಸಿದ್ದರಾಮಯ್ಯ ರಾಜಮನೆತನಕ್ಕೆ ಅವಹೇಳನಕಾರಿ ಹೇಳಿಕೆ; ಅರಸು ಸಂಘ ಖಂಡನೆ 

ಮೈಸೂರಿನ ಉಸ್ತುವಾರಿ ಸಚಿವರಾದ ಶ್ರೀ ಯತೀಂದ್ರ ಸಿದ್ದರಾಮಯ್ಯ ನವರು ಮೈಸೂರಿನ ರಾಜಮನೆತನದ...

ನಾಲ್ಕು ವರ್ಷವಾದರೂ ಪೂರ್ಣಗೊಳ್ಳದ ಸ್ಲಂ ಬೋರ್ಡ್ ಮನೆಗಳು; ತಾಳಿಕೋಟೆಯಲ್ಲಿ ಮೌನ ಧರಣಿ

ವಿಜಯಪುರ ಜಿಲ್ಲೆ ತಾಳಿಕೋಟೆ ಪಟ್ಟಣದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ (ಸ್ಲಂ ಬೋರ್ಡ್)...