ವಿಜಯಪುರ | ದೇವದಾಸಿ ತಾಯಂದಿರು ಸಾಮಾಜಿಕ ನ್ಯಾಯ ಪಡೆಯಲು ಮುಂದಾಗಬೇಕು: ಫಾ. ತಿಯೋಳ ಮಾಚ್ಯಾದ

Date:

ಶತಮಾನಗಳಿಂದ ಹಲವಾರು ರೀತಿಯ ಶೋಷಣೆ ದೌರ್ಜನ್ಯ ಅಸಮಾನತೆಗಳಿಂದ ದೇವದಾಸಿ ಸಮುದಾಯ ಸಮಾಜದಲ್ಲಿ ಕಟ್ಟ ಕಡೆಯ ಹಿಂದುಳಿದ ಸಮುದಾಯವಾಗಿ ಉಳಿದಿದೆ. ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನವಾಗಿ ಗೌರವ ಘನತೆಯಿಂದ ಬದುಕುವುದು ಮೂಲಭೂತ ಹಕ್ಕು ಎಂದು ಫಾದರ್‌ ತಿಯೋಳ ಮಾಚ್ಯಾದ ಹೇಳಿದರು.

- Advertisement -

ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆ, ಜೀವನ ಜ್ಯೋತಿ ಮಾಜಿ ದೇವದಾಸಿ ಮಹಿಳೆಯರ ಜಿಲ್ಲಾ ಒಕ್ಕೂಟ ಇವರ ಸಹಯೋಗದಲ್ಲಿ ಮಾಜಿ ದೇವದಾಸಿ ಮಹಿಳೆಯರ ಜಿಲ್ಲಾ ಒಕ್ಕೂಟದ ಪದಾಧಿಕಾರಿಗಳಿಗೆ ಸಂಘಟನೆ ಮತ್ತು ನಾಯಕತ್ವ ಕುರಿತು ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

“ಸಾಮಾಜಿಕ ನ್ಯಾಯ ಪಡೆಯಲು ಮಾಜಿ ದೇವದಾಸಿ ತಾಯಂದಿರು ಮುಂದಾಗಬೇಕು, ಸಂಘಟಿತರಾಗಬೇಕು. ಜೊತೆಗೆ ಸಾಮೂಹಿಕ ನಾಯಕತ್ವದೊಂದಿಗೆ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ನಮ್ಮ ಉದ್ದಾರ ನಮ್ಮಿಂದಲೇ ಆಗಬೇಕಾದರೆ ಎಲ್ಲ ದೇವದಾಸಿ ತಾಯಂದಿರು ಸಾಮೂಹಿಕ ನಾಯಕತ್ವಕ ವಹಿಸಬೇಕು. ಸಂಘಟಿತರಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆಯಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಪ್ರಗತಿ ಹೊಂದಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಅಂತೋನಿ ಸಿ ಮಾತನಾಡಿ, “ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮುಖ್ಯವಾದ ಮೂರು ಸೂತ್ರಗಳಾದ ಶಿಕ್ಷಣ, ಸಂಘಟನೆ ಹಾಗೂ ಪರಿವರ್ತನೆಯ ನಮ್ಮ ಮೂಲ ಮಂತ್ರವಾಗಬೇಕು. ಆ ನಿಟ್ಟಿನಲ್ಲಿ ಪ್ರತಿ ಮಾಜಿ ದೇವದಾಸಿ ತಾಯಂದಿರು ತಮಗಾದ ಅನ್ಯಾಯವನ್ನು ಎದುರಿಸಲು ನಾಯಕಿಯರಾಗಿ ಬೆಳೆಯಬೇಕು. ಆ ಮೂಲಕ ಸಾಮಾಜಿಕ ಸಮಾನತೆ ಕಂಡುಕೊಳ್ಳಬೇಕು” ಎಂದು ಹೇಳಿದರು.

ಹಲವು ಚಟುವಟಿಕೆ ಮುಖಾಂತರ ತರಬೇತಿ ನಡೆಸಿದರು. ನಂತರ ಜೀವನ ಜ್ಯೋತಿ ಮಾಜಿ ದೇವದಾಸಿ ಮಹಿಳೆಯರ ಎಲ್ಲ ಒಕ್ಕೂಟದ ಆಯ್ಕೆಯ ಪ್ರಜಾಪ್ರಭುತ್ವದ ನಿಟ್ಟಿನಲ್ಲಿ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ನೂತನ ಸಮಿತಿ ಆಯ್ಕೆ ಮಾಡಿದರು. ಅಧ್ಯಕ್ಷರಾಗಿ ರೇಣುಕಾ ಎಂಟಮಾನ, ಉಪಾಧ್ಯಕ್ಷರಾಗಿ ಮಲ್ಲಮ್ಮ ಕಟ್ಟಿಮನಿ, ಕಾರ್ಯದರ್ಶಿಯಾಗಿ ರೇಣುಕಾ ಕಾಂಬಳೆ ಹಾಗೂ ಖಜಂಚಿಯಾಗಿ ಚಂದಾಬಾಯಿ ಮಾದರ್ ಅವರನ್ನು ಆಯ್ಕೆ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ |‌ ಸಾಮಾಜಿಕ ಅಸಮಾನತೆ ನಿವಾರಣೆಗೆ ಅಂಬೇಡ್ಕರ್‌ ಕೊಡುಗೆ ಅಪಾರ : ಪ್ರೇಮಸಾಗರ ದಾಂಡೇಕರ್

ಕಾರ್ಯಕ್ರಮದಲ್ಲಿ ಎಲ್ಲ ತಾಲೂಕುಗಳಿಂದ ಸುಮಾರು 65 ಮಾಜಿ ದೇವದಾಸಿ ಮುಖಂಡರು ಭಾಗವಹಿಸಿದ್ದರು. ಸಿಸ್ಟರ್ ಜಯ, ಅನುಸೂಯ ಮಾಶಾಳ, ಭಾರತಿ ಹಾಗೂ ಮಂಜುಳಾ, ಸುನಿತಾ ಮೋರೆ, ದೇವಕಿ, ಮೀನಾಕ್ಷಿ ಸಿಂದೇ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...