ವಿಜಯಪುರ | ಕಸ ವಿಲೇವಾರಿ ಘಟಕವನ್ನು ಹಸಿರು ಪರಿಸರದ ಮಾದರಿಯಾಗಿಸಿ: ಜಿಲ್ಲಾಧಿಕಾರಿ ಆನಂದ ಕೆ

Date:

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಇವಣಗಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಭೇಟಿ ನೀಡಿ, ಘಟಕದ ಕಾರ್ಯನಿರ್ವಹಣೆ ಹಾಗೂ ಸ್ವಚ್ಛತಾ ವ್ಯವಸ್ಥೆಯನ್ನು ಪರಿಶೀಲಿಸಿದರು.

- Advertisement -

ಘಟಕದಲ್ಲಿ ಉತ್ಪಾದಿಸಲಾಗುತ್ತಿರುವ ಎರೆಹುಳು ಗೊಬ್ಬರ ತಯಾರಿಕಾ ಪ್ರಕ್ರಿಯೆಯನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಗುಣಮಟ್ಟದ ಗೊಬ್ಬರವನ್ನು ರೈತರಿಗೆ ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಉತ್ಪಾದನೆ ಮತ್ತು ಮಾರಾಟಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಗೊಬ್ಬರವನ್ನು ಕೃಷಿ ಚಟುವಟಿಕೆಗಳಲ್ಲಿ ಪರಿಣಾಮಕಾರಿಯಾಗಿ ಬಳಸುವ ಕುರಿತು ರೈತರಿಗೆ ಸೂಕ್ತ ಮಾಹಿತಿ ಮತ್ತು ಅರಿವು ಮೂಡಿಸಬೇಕು. ಇದರಿಂದ ಸಾವಯವ ಕೃಷಿಗೆ ಉತ್ತೇಜನ ನೀಡುವುದರ ಜತೆಗೆ ಘಟಕದ ಉತ್ಪಾದನೆಗೂ ಬೇಡಿಕೆ ಹೆಚ್ಚಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

Advertisements

ಒಣತ್ಯಾಜ್ಯ ವೈಜ್ಞಾನಿಕ ವಿಂಗಡಣೆಗೆ ಸೂಚನೆ

ಘಟಕದಲ್ಲಿ ಸಂಗ್ರಹವಾಗುವ ಒಣತ್ಯಾಜ್ಯವನ್ನು ವೈಜ್ಞಾನಿಕವಾಗಿ ಪ್ರತ್ಯೇಕಿಸಿ, ವ್ಯವಸ್ಥಿತವಾಗಿ ವಿಂಗಡಿಸಬೇಕು. ಮರುಬಳಕೆಗೆ ಯೋಗ್ಯವಾದ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಹೆಚ್ಚಿನ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಘಟಕದ ಆವರಣವನ್ನು ಸ್ವಚ್ಛವಾಗಿಟ್ಟುಕೊಂಡು ವಿವಿಧ ಗಿಡಮರಗಳನ್ನು ಬೆಳೆಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಲಭ್ಯವಿರುವ ಜಾಗದಲ್ಲಿ ಹಣ್ಣಿನ ಹಾಗೂ ಹೂವಿನ ಗಿಡಗಳನ್ನು ಬೆಳೆಸಿ ಉದ್ಯಾನವನದ ಮಾದರಿಯಲ್ಲಿ ಹಸಿರು ಪರಿಸರ ನಿರ್ಮಿಸಿರುವ ಕಾರ್ಯವನ್ನು ಶ್ಲಾಘಿಸಿದರು.

ಇದೇ ಮಾದರಿಯಲ್ಲಿ ಘಟಕದ ಉಳಿದ ಪ್ರದೇಶವನ್ನೂ ಅಭಿವೃದ್ಧಿಪಡಿಸಿ, ಸ್ವಚ್ಛತೆ ಹಾಗೂ ಹಸಿರು ಪರಿಸರಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.

ಮನೆಮನೆಗೆ ಪ್ರತಿದಿನ ಕಸ ಸಂಗ್ರಹಣೆ ಕಡ್ಡಾಯ

ಮನೆಮನೆಗೆ ತೆರಳಿ ಕಸ ಸಂಗ್ರಹಿಸುವ ಸಂದರ್ಭದಲ್ಲಿ ಹಸಿ ಮತ್ತು ಒಣತ್ಯಾಜ್ಯವನ್ನು ಮೂಲದಲ್ಲಿಯೇ ಪ್ರತ್ಯೇಕಿಸುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ಪ್ರತಿಯೊಂದು ಮನೆಗೂ ಪ್ರತಿದಿನ ಕಸ ಸಂಗ್ರಹಣಾ ವಾಹನ ತೆರಳುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಟ್ಟಣದ ರಸ್ತೆಬದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸಂಗ್ರಹವಾಗದಂತೆ ನಿರಂತರ ನಿಗಾ ವಹಿಸಬೇಕು. ಕಸದ ರಾಶಿಗಳು ನಿರ್ಮಾಣವಾಗುವ ಬ್ಲ್ಯಾಕ್ ಸ್ಪಾಟ್‌ಗಳನ್ನು ಗುರುತಿಸಿ, ಅವುಗಳ ನಿರ್ಮೂಲನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪಟ್ಟಣದ ಸ್ವಚ್ಛತೆ ಕಾಪಾಡುವಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ವಿಜಯಪುರ ವಿಭಾಗಾಧಿಕಾರಿ ಜುಫಿಶಾನ್ ಹಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ಪುರಸಭೆ ಮುಖ್ಯಾಧಿಕಾರಿ ಶಬ್ಬಿರ್ ರೇವೂರಕರ, ಆರೋಗ್ಯ ನಿರೀಕ್ಷಕರಾದ ವಂದಲ್ ಹಾಗೂ ಹಿರೇಮಠ, ಕಿರಿಯ ಅಭಿಯಂತರರಾದ ಸಂತೋಷ್ ಮತ್ತು ಜಂಬಗಿ ಮಹಾದೇವ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ: ಗಜಾನನ ಬಾಲೆ

ಕ್ರೀಡಾ ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವುದು ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ...

‘ನಮ್ಮ ಶಾಲೆ ನಮ್ಮ ಜವಾಬ್ದಾರಿ’; ಗ್ರಾಮೀಣ ಶಾಲೆ ದತ್ತು ಪಡೆಯಲು ಡಿ.ಕೆ ಶಿವಕುಮಾರ್ ಕರೆ!

ರಾಜ್ಯದ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟ...

ಅನಿಲ್ ಅಂಬಾನಿಯ ₹23,100 ಕೋಟಿ ಆಸ್ತಿ ಜಪ್ತಿ ಮಾಡಿದ ಇಡಿ!

ಸಾಲದ ಸುಳಿಗೆ ಸಿಲುಕಿ ವಿವಾದಗಳ ಕೇಂದ್ರಬಿಂದುವಾಗಿರುವ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್...

ಭಾರತ-ನ್ಯೂಜಿಲೆಂಡ್‌ ODI: ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್‌; ಭಾರತಕ್ಕೆ 5 ವಿಕೆಟ್‌ಗಳ ಭರ್ಜರಿ ಜಯ!

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯದಲ್ಲಿ...