ವಿಜಯಪುರ | ಡಯಾಲಿಸಿಸ್‌ ರೋಗಿ ಸಾವು; ಕುಡಿದ ಮತ್ತಿನಲ್ಲಿ ಚಿಕಿತ್ಸೆ ನೀಡಿದ ಆರೋಪ

Date:

ಡಯಾಲಿಸಿಸ್‌ ಚಿಕಿತ್ಸೆ ನೀಡುವಾಗ ವೈದ್ಯರು ಮಾಡಿದ ಯಡವಟ್ಟಿನಿಂದ ರೋಗಿಯೋಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ರೋಗಿಯ ಮೃತದೇಹವನ್ನು ಇಟ್ಟುಕೊಂಡು ಮೃತನ ಕುಟುಂಬಸ್ಥರು ವೈದ್ಯರು ಮತ್ತು ಆಸ್ಪತ್ರೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ತಾಲೂಕಿನ ಮಾವಿನಹಳ್ಳಿಯ ನಿವಾಸಿ ಬಿಸ್ಮಿಲ್ಲಾ ನದಾಫ್(35) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಬಿಸ್ಮಿಲ್ಲಾ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಆಗಾಗ್ಗೆ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ವೈದ್ಯರು ಕುಡಿದ ಮತ್ತಿನಲ್ಲಿ ಚಿಕಿತ್ಸೆ ನೀಡಿದ್ದಾರೆ. ಹೀಗಾಗಿಯೇ ಅವರು ಸಾವನ್ನಪ್ಪಿದ್ದಾರೆ ಎಂದು ಬಿಸ್ಮಿಲ್ಲಾ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಂಗಳವಾರ ಬಿಸ್ಮಿಲ್ಲಾ ಅವರು ಡಯಾಲಿಸಿಸ್‌ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದಿದ್ದರು. ಆ ವೇಳೆ ಆಸ್ಪತ್ರೆ ಸಿಬ್ಬಂದಿ ಬಸವರಾಜ ಹಂಜಗಿ ಎಂಬಾತ ಮದ್ಯ ಸೇವಿಸಿ ಡಯಾಲಿಸಿಸ್ ಚಿಕಿತ್ಸೆ ನೀಡಿದ್ದಾನೆ. ವೈದ್ಯರು ಕೂಡ ನಿರ್ಲಕ್ಷ್ಯದಿಂದ ವರ್ತಿಸಿದ್ದಾರೆ. ಹೀಗಾಗಿ ಬಿಸ್ಮಿಲ್ಲಾ ಅವರು ಸಾವನ್ನಪ್ಪಿದ್ದಾರೆ ಎಂದು ಅವರು ಕುಟುಂಬಸ್ಥರು ದೂರಿದ್ದಾರೆ.

ಆಸ್ಪತ್ರೆಯ ಎದುರು ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಮುಂಭಾಗದಲ್ಲಿ ಟೈರ್​ಗೆ ಬೆಂಕಿ ಹಚ್ಚಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ರಾಜ್ಯದ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಬಿಜೆಪಿ ಹೋರಾಟ‌ ಮಾಡಲಿ: ಶಾಸಕ ಕೋನರೆಡ್ಡಿ

ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಸಮಸ್ಯೆಗಳ ಕಡೆಗೆ ಗಮನಹರಿಸದೆ ಬಿಜೆಪಿಯವರು ಒಂದು...

ಯಾದಗಿರಿ | ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ ನಿಧನ

ಯಾದಗಿರಿ ಜಿಲ್ಲೆಯ ಮಾಜಿ ಶಾಸಕ ಹಾಗೂ ವೈದ್ಯ ಡಾ. ವೀರಬಸವಂತರೆಡ್ಡಿ ಮುದ್ನಾಳ...

ಅಧಿವೇಶನ | ಕುಮ್ಕಿ ಜಮೀನು ಮಂಜೂರಾತಿ ಸಾಧ್ಯವಿಲ್ಲ, ಬಡವರ ಮನೆಗಳ ತೆರವೂ ಇಲ್ಲ: ಕೃಷ್ಣ ಬೈರೇಗೌಡ

ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ...