ವಿಜಯಪುರ | ವಿಶೇಷ ಚೇತನರ 5% ಮೀಸಲು ಅನುದಾನ ಸಮರ್ಪಕ ಬಳಕೆಗೆ ನಿರ್ದೇಶನ

Date:

ಸರ್ಕಾರಿ ಹಾಗೂ ಅರೆ ಸರ್ಕಾರಿ ಕಚೇರಿಗಳಲ್ಲಿ ವಿಶೇಷ ಚೇತನರಿಗೆ ಯಾವುದೇ ಅನಾನುಕೂಲ ಉಂಟಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ವಿಶೇಷ ಚೇತನರಿಗಾಗಿ ಮೀಸಲಿರುವ ಶೇ.5ರಷ್ಟು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಚೇತನರ ಕುಂದು-ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ವಿಶೇಷ ಚೇತನರಿಗೆ ವಿವಿಧ ಇಲಾಖೆಗಳ ಮೂಲಕ ದೊರೆಯುವ ಸೌಲಭ್ಯಗಳು ಮತ್ತು ಯೋಜನೆಗಳ ಅನುಷ್ಠಾನದ ಕುರಿತು ಪರಿಶೀಲನೆ ನಡೆಸಿದ ಅವರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ನೀಡಲಾಗುವ ವಿಶೇಷ ಚೇತನರ ಬಸ್‌ಪಾಸ್ ವಿತರಣೆಯನ್ನು ಮತ್ತಷ್ಟು ಸರಳೀಕರಿಸಬೇಕು” ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

“ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಎಲ್ಲಾ ಇಲಾಖೆಗಳ ಕಚೇರಿಗಳ ಸೂಚನಾ ಫಲಕಗಳಲ್ಲಿ ವಿಶೇಷ ಚೇತನರಿಗಾಗಿ ಮೀಸಲಿರುವ ಶೇ.5ರ ಅನುದಾನ ಹಾಗೂ ಸೌಲಭ್ಯಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಗೋಚರಿಸುವಂತೆ ಪ್ರದರ್ಶಿಸಬೇಕು” ಎಂದು ಸೂಚಿಸಿದರು.

ಮಾಸಾಶನ (ಪಿಂಚಣಿ) ಸಂಬಂಧಿತ ಬಾಕಿ ಪ್ರಕರಣಗಳನ್ನು ಮುಂಬರುವ ಒಂದು ವಾರದೊಳಗೆ ವಿಲೇವಾರಿ ಮಾಡಿ ಅರ್ಹರಿಗೆ ಸೌಲಭ್ಯ ತಲುಪುವಂತೆ ಕ್ರಮವಹಿಸಬೇಕು. ಸರ್ಕಾರಿ ಬಸ್‌ಗಳಲ್ಲಿ ವಿಶೇಷ ಚೇತನರಿಗೆ ಒದಗಿಸಲಾಗುವ ಪ್ರಯಾಣ ಸೌಲಭ್ಯಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ತಿಳಿಸಿದ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ವಿಶೇಷ ಚೇತನರ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸೂಚನೆ ನೀಡಿದರು.

ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಆಧಾರ್ ಕಾರ್ಡ್‌ಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ, ವಿಶೇಷ ಚೇತನರಿಗೆ ಅಗತ್ಯ ಸೇವೆಗಳು ಸುಲಭವಾಗಿ ದೊರೆಯುವಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಬಳಕೆಗೆ ಅನುಕೂಲವಾಗುವ ವಿಶೇಷ ಚೇತನ ಸ್ನೇಹಿ ಶೌಚಾಲಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಕೆ.. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತ್ ಗುಣಾರಿ, ಮಹಾನಗರ ಪಾಲಿಕೆಯ ಮಹಾವೀರ ಬೋರಣ್ಣನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಎ. ಉಪ್ಪಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ನಿರ್ಮಲ ಸುರಪುರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ,ಸಿಬ್ಬಂದಿಗಳು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿಶೇಷ ಚೇತನರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪೆರಂಪಳ್ಳಿ ಚರ್ಚ್ ವೃತ್ತದಲ್ಲಿ ಅಪಘಾತ ತಡೆಗೆ 6 ಬ್ಯಾರಿಕೇಡ್ ಅಳವಡಿಕೆ

ಪೆರಂಪಳ್ಳಿ ಚರ್ಚ್ ವೃತ್ತದ ಬಳಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ...

ದೀಪಾವಳಿ ಸಂಭ್ರಮದ ನಡುವೆ ಅಂದರ್-ಬಾಹರ್ ಜೂಜಾಟ: ಹೊನ್ನಾವರ, ಹಳಿಯಾಳದಲ್ಲಿ 10 ಮಂದಿ ವಶಕ್ಕೆ

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಜಿಲ್ಲೆಯ ಹೊನ್ನಾವರ ಮತ್ತು ಹಳಿಯಾಳ ತಾಲೂಕುಗಳಲ್ಲಿ...

ಮೋದಿ, ಶಾ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ: ಪ್ರಧಾನಿಯ ‘ವೈಚಾರಿಕ ನಕ್ಸಲರು’ ಹೇಳಿಕೆಗೆ ಬಘೇಲ್ ತಿರುಗೇಟು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ವಿರುದ್ಧ...

ಹಾಸನ | ಸಚಿವ ಎಚ್‌.ಡಿ ಕುಮಾರಸ್ವಾಮಿ ಸುಳ್ಳು ಆರೋಪ ಮಾಡಿದ್ದಾರೆ; ಡಿಸಿ ಲತಾ ಕುಮಾರಿ

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾಟ್ಸ್‌ಆಯಪ್‌ ಚಾಟ್‌ಗಳನ್ನು ಕೇಂದ್ರ ಸಚಿವರು ಮಾಧ್ಯಮಗಳ...