ವಿಜಯಪುರ | ರಾಮಮಂದಿರ ದೇಣಿಗೆ ಹಣದ ಸಂಪೂರ್ಣ ಲೆಕ್ಕ ಬಹಿರಂಗಪಡಿಸಿ: ಕಾಂಗ್ರೆಸ್ ವಕ್ತಾರ ಎಸ್ ಎಂ ಪಾಟೀಲ

Date:

ಅಯೋಧ್ಯೆಯ ಶ್ರೀರಾಮ ಮಂದಿರದ ಹುಂಡಿ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸಬೇಕು. ಕಳ್ಳತನ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಆರೋಪಗಳ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ವಕ್ತಾರ ಎಸ್ ಎಂ ಪಾಟೀಲ ಗಣಿಹಾರ ಆಗ್ರಹಿಸಿದರು.

- Advertisement -

ವಿಜಯಪುರ ನಗರದಲ್ಲಿ ಶನಿವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸಣ್ಣಪುಟ್ಟ ಪ್ರಕರಣಗಳಿಗೂ ಆರೋಪಿಗಳ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆಸುವ ಬಿಜೆಪಿ ಸರ್ಕಾರ, ದೇವರ ಹುಂಡಿಯಲ್ಲಿನ ಕಳ್ಳತನದ ಆರೋಪ ಎದುರಾದಾಗ ಮೌನ ವಹಿಸಿರುವುದು ಏಕೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ರಾಮಮಂದಿರ ಕೇವಲ ಹಿಂದೂಗಳದ್ದಲ್ಲ, ಇಡೀ ದೇಶದ ಜನರ ಆಸ್ತಿಯಾಗಿದೆ. ರಾಮಮಂದಿರ ದೇಣಿಗೆ ಎಲ್ಲ ಧರ್ಮದ ಜನರದ್ದೂ ಆಗಿದೆ. ಮಂದಿರ ನಿರ್ಮಾಣಕ್ಕೆ ಎಲ್ಲರೂ ದೇಣಿಗೆ ನೀಡಿದ್ದಾರೆ. ಮುಸ್ಲಿಮರು ಸೇರಿದಂತೆ ಸಮಾಜದ ವಿವಿಧ ವರ್ಗಗಳ ಜನರು ಹಣಕಾಸಿನ ಸಹಾಯ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ದೇಶದ ಜನರ ತೆರಿಗೆ ಹಣವೂ ಈ ಯೋಜನೆಗೆ ಬಳಕೆಯಾಗಿದೆ. ಹೀಗಾಗಿ ಮಂದಿರದ ಆಸ್ತಿ ಮತ್ತು ದೇಣಿಗೆ ಹಣದ ಬಗ್ಗೆ ಸಂಪೂರ್ಣ ಪಾರದರ್ಶಕತೆ ಇರಬೇಕು” ಎಂದು ಒತ್ತಾಯಿಸಿದರು.

“ಧರ್ಮ ಮತ್ತು ದೇವರ ಹೆಸರಿನಲ್ಲಿ ರಾಜಕೀಯ ಲಾಭ ಪಡೆಯುವ ಬಿಜೆಪಿ, ರಾಮಮಂದಿರದ ಹಣಕಾಸು ಅವ್ಯವಹಾರದ ಆರೋಪಗಳ ಕುರಿತು ಮೌನ ವಹಿಸುವ ಮೂಲಕ ತನ್ನ ದ್ವಂದ್ವ ನಿಲುವನ್ನು ಪ್ರದರ್ಶಿಸುತ್ತಿದೆ ಎಂದು ಟೀಕಿಸಿದ ಅವರು, ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿರುವ ಈ ಪ್ರಕರಣದ ಕುರಿತು ತಕ್ಷಣ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿ, ಕದ್ದ ಹಣವನ್ನು ವಸೂಲಿ ಮಾಡಬೇಕು” ಎಂದು ಆಗ್ರಹಿಸಿದರು.

ದೇಣಿಗೆ ಹಣದ ಲೆಕ್ಕ ನೀಡಲಿ

“ಕಳೆದ ಎರಡು ದಶಕಗಳಿಂದ ದೇಶಾದ್ಯಂತ ಸಂಗ್ರಹಿಸಲಾದ ಕೋಟ್ಯಂತರ ರೂಪಾಯಿ ದೇಣಿಗೆ, ಚಿನ್ನ, ಬೆಳ್ಳಿ ಹಾಗೂ ಇತರ ಆಸ್ತಿಗಳ ಲೆಕ್ಕವನ್ನು ಸರ್ಕಾರ ಸಾರ್ವಜನಿಕರ ಮುಂದೆ ಇಡಬೇಕು. ಟ್ರಸ್ಟ್‌ನ ಹಣಕಾಸು ವ್ಯವಹಾರಗಳ ಕುರಿತು ಪಾರದರ್ಶಕ ಮಾಹಿತಿ ನೀಡಬೇಕು. ಟ್ರಸ್ಟ್ ಅಧ್ಯಕ್ಷ ನೃತ್ಯಗೋಪಾಲ್ ದಾಸ್ ಹಾಗೂ ಕಾರ್ಯದರ್ಶಿ ಚಂಪತ್ ರಾಯ್ ವಿರುದ್ಧ ಸೂಕ್ತ ತನಿಖೆ ನಡೆಸಿ ಅಗತ್ಯವಿದ್ದರೆ ಎಫ್‌ಐಆರ್ ದಾಖಲಿಸಬೇಕು” ಎಂದು ಒತ್ತಾಯಿಸಿದರು.

“ವಕ್ಫ್ ಮಾದರಿಯಲ್ಲೇ ಹಿಂದೂ ಟ್ರಸ್ಟ್‌ಗಳಲ್ಲೂ ಅವಕಾಶ ನೀಡಿ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸದಸ್ಯರನ್ನಾಗಿ ಮಾಡುವ ಕುರಿತು ಸರ್ಕಾರ ಕಾನೂನು ತರಲು ಮುಂದಾಗಿದ್ದರೆ, ಅದೇ ಮಾದರಿಯಲ್ಲಿ ಹಿಂದೂ ದೇವಸ್ಥಾನ ಹಾಗೂ ಟ್ರಸ್ಟ್‌ಗಳಲ್ಲೂ ಮುಸ್ಲಿಮರಿಗೆ ಸದಸ್ಯತ್ವ ನೀಡಬೇಕು. ಇದರಿಂದ ಪರಸ್ಪರ ಮೇಲ್ವಿಚಾರಣೆ ಸಾಧ್ಯವಾಗಿ ಪಾರದರ್ಶಕತೆ ಹೆಚ್ಚುತ್ತದೆ” ಎಂದು ಸಲಹೆ ನೀಡಿದರು.

ಇದನ್ನೂ ಓದಿದ್ದೀರಾ? ವಿಜಯಪುರ | ಎಸ್‌ಸಿ/ಎಸ್‌ಟಿ ಬಾಲಕಿಯರ ವಸತಿ ನಿಲಯದಲ್ಲಿ ದೈಹಿಕ, ಮಾನಸಿಕ ಕಿರುಕುಳ ಆರೋಪ

“ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡುವುದು ಸರಿಯಲ್ಲ. ಅಂದಿನ ಪ್ರಧಾನಿ ರಾಜೀವ್ ಗಾಂಧಿಯವರ ಅವಧಿಯಲ್ಲೇ ಪೂಜೆಗೆ ಅವಕಾಶ ಕಲ್ಪಿಸಲಾಗಿತ್ತು” ಎಂದರು.

ಈ ಸಂದರ್ಭದಲ್ಲಿ ಮುಖಂಡ ಫಯಾಜ್ ಕಲಾದಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನಕ್ಕಾಗಿ ಸಮತಾ ಸೈನಿಕ ದಳ ಆಗ್ರಹ

ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ...

ವಿಜಯಪುರ | 22ನೇ ಶರಣ ತತ್ವ ಕಮ್ಮಟಕ್ಕೆ ಸಚಿವ ಎಂ.ಬಿ ಪಾಟೀಲರಿಗೆ ಆಹ್ವಾನ

ವಿಜಯಪುರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ...

ಬೀಳಗಿ | ಛಾಯಾಗ್ರಾಹಕರಿಗಾಗಿ ಆಕಾಡೆಮಿ ಸ್ಥಾಪಿಸಲು ವಿಠ್ಠಲ ಹಿರೇಮಠ ಆಗ್ರಹ

ಛಾಯಾಗ್ರಾಹಕರ ವೃತ್ತಿ ಭದ್ರತೆ, ಕುಟುಂಬದ ಕಲ್ಯಾಣ ಹಾಗೂ ಸರಕಾರದ ಸೌಲಭ್ಯಗಳನ್ನು ಒದಗಿಸಲು...

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...