ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

Date:

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ ಹಾಗೂ ಸಹಾನುಭೂತಿಯಿಂದ ನಡೆದುಕೊಳ್ಳಬೇಕು. ಅರ್ಹ ಫಲಾನುಭವಿಗಳ ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ, ಸಕಾಲದಲ್ಲಿ ಸಾಲ ಸೌಲಭ್ಯ ಒದಗಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ್ ಮೀನಾ ಸೂಚಿಸಿದರು.

- Advertisement -

ವಿಜಯಪುರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಜಿಲ್ಲಾ ಅಗ್ರಗಣ್ಯ ಬ್ಯಾಂಕ್ ಆಯೋಜಿಸಿದ್ದ ತ್ರೈಮಾಸಿಕ ಜಿಲ್ಲಾ ಸಮಾಲೋಚನಾ ಸಮಿತಿ ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕ್‌ಗಳ ವಿವಿಧ ಯೋಜನೆಗಳ ಕುರಿತು ಗ್ರಾಹಕರಿಗೆ ಸೂಕ್ತ ಮಾಹಿತಿ ಮತ್ತು ಮಾರ್ಗದರ್ಶನ ನೀಡಬೇಕು. ದಾಖಲೆಗಳು ಅಪೂರ್ಣವಾಗಿದ್ದರೆ ಅಗತ್ಯ ದಾಖಲೆಗಳ ಕುರಿತು ಸ್ಪಷ್ಟವಾಗಿ ತಿಳಿಸಬೇಕು. ಅರ್ಜಿಗಳನ್ನು ಅನಗತ್ಯವಾಗಿ ಬಾಕಿ ಉಳಿಸಿಕೊಳ್ಳಬಾರದು ಎಂದು ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ...

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರತ್ಯಕ್ಷದರ್ಶಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್‌ಗೆ ಕಾನೂನು ಕುಣಿಕೆಯಿಂದ ಮುಕ್ತಿ ಸಿಗುತ್ತದೆಯೇ? ಪೊಲೀಸರು...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ...

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕನಿಷ್ಠ ಅಗತ್ಯಗಳ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ...

ಉದ್ಯೋಗಿನಿ, ಸ್ವಾವಲಂಬಿ ಸಾರಥಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಾಹನ ಸಾಲ ಯೋಜನೆಗಳು, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಯೋಜನೆಗಳು, ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ ಸೇರಿದಂತೆ ವಿವಿಧ ಸರ್ಕಾರಿ ಸಾಲ ಮತ್ತು ಸ್ವಯಂ ಉದ್ಯೋಗ ಯೋಜನೆಗಳಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ವಿಲೇವಾರಿ ಮಾಡಬೇಕು ಎಂದರು.

ವಿವಿಧ ಯೋಜನೆಗಳಡಿ ಅರ್ಜಿಗಳು ಬಾಕಿ ಉಳಿದಿರುವುದು ಗಮನಕ್ಕೆ ಬಂದಿದ್ದು, ಅವುಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ಅಥವಾ ವಿಳಂಬ ಕಂಡುಬಂದರೆ ಸಂಬಂಧಿಸಿದ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಅಗ್ರಗಣ್ಯ ಬ್ಯಾಂಕ್ ವ್ಯವಸ್ಥಾಪಕ ಬಿ. ಸಿದ್ದಯ್ಯ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ವಿಕಾಸ ರಾಠೋಡ, ಆರ್‌ಬಿಐ ಸಹಾಯಕ ಮಹಾಪ್ರಬಂಧಕ ಶರವಣನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕಟ್ಟಡ ಕಟ್ಟಿಕೊಳ್ಳಲು ಪಾಲಿಕೆಯಿಂದಲೇ ಅನುಮತಿ; ಕಾರ್ಮಿಕರು 

ಹಾಸನ ತಾಲೂಕು ಕೆ.ಆ‌ರ್. ಪುರಂ ಮೊದಲನೇ ಹಂತದಲ್ಲಿ ಫುಟ್‌ಪಾತ್ ಒತ್ತುವರಿ ಮಾಡಿಕೊಂಡು...

ರಾಯಚೂರು | ಶಿಕ್ಷಣ ಹಕ್ಕು ಕಾಯಿದೆ ಸಮಗ್ರ ಜಾರಿಗೆ ಆಗ್ರಹಿಸಿ ನ.26 ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಶಿಕ್ಷಣ ಹಕ್ಕು ಕಾಯಿದೆಯನ್ನು ಸಮಗ್ರವಾಗಿ ಜಾರಿಗೊಳಿಸುವುದು ಹಾಗೂ ಸರ್ಕಾರಿ ಶಾಲೆಗಳ ಶಾಲಾ...

ಬೈಂದೂರು | ಜಾಮಿಯಾತುಲ್ ಫಲಾಹ್‌ನಿಂದ 40 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಜಾಮಿಯಾತುಲ್ ಫಲಾಹ್ ಬೈಂದೂರು ಯೂನಿಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಮಾರೋಪ...

ಬೀದರ್‌ | ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ, ಯೋಗ ಅಗತ್ಯ: ಸಚಿವ ಈಶ್ವರ ಖಂಡ್ರೆ

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ದಿನದ 24 ಗಂಟೆಯೂ ಒತ್ತಡದ...