ವಿಜಯಪುರ | ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಬಳಸುವಂತೆ ಜಾಗೃತಿ ಅಭಿಯಾನ

Date:

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಹಾಗೂ ವಿವಿಧ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಉತ್ತೇಜಿಸಲು ವಿಜಯಪುರ ಜಿಲ್ಲಾಡಳಿತದ ವತಿಯಿಂದ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.

- Advertisement -

ವಿಜಯಪುರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಅಲ್ಲಿಂದ ಆರಂಭವಾದ ಅಭಿಯಾನ ಲಿಂಗದಗುಡಿಯವರೆಗೆ ಸಾಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಈ ವೇಳೆ ಅಂಗಡಿ-ಮುಂಗಟ್ಟುಗಳು, ಕೈಗಾರಿಕೆಗಳು, ಹೋಟೆಲ್‌ಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಟ್ರಸ್ಟ್‌ಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ನಾಮಫಲಕಗಳಲ್ಲಿ ಕನ್ನಡ ಭಾಷೆಯ ಬಳಕೆಯ ಮಹತ್ವದ ಕುರಿತು ಮಾಲೀಕರಿಗೆ ಅರಿವು ಮೂಡಿಸಿದರು.

ಸರ್ಕಾರದ ಆದೇಶದಂತೆ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡಬೇಕು. ನಾಡಿನ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸುವ ನಿಟ್ಟಿನಲ್ಲಿ ವ್ಯಾಪಾರಸ್ಥರು ನಿಯಮಗಳನ್ನು ಪಾಲಿಸಬೇಕು. ದೈನಂದಿನ ವ್ಯಾಪಾರ-ವಹಿವಾಟಿನಲ್ಲಿಯೂ ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡದ ಬೆಳವಣಿಗೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ತಿಳಿಸಿದರು.

ನಿಯಮಾನುಸಾರ ನಾಮಫಲಕಗಳನ್ನು ಅಳವಡಿಸದ ಕೆಲವು ಅಂಗಡಿ ಮಾಲೀಕರಿಗೆ ತಿಳಿವಳಿಕೆ ನೀಡಿ, ಅಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಲಾಯಿತು. ನಾಮಫಲಕಗಳಲ್ಲಿ ಶೇ. 60ಕ್ಕಿಂತ ಹೆಚ್ಚು ಕನ್ನಡ ಭಾಷೆ ಬಳಸಿರುವ ವ್ಯಾಪಾರಸ್ಥರನ್ನು ಅಭಿನಂದಿಸಲಾಯಿತು. ಅಭಿಯಾನಕ್ಕೆ ಅಂಗಡಿ ಮಾಲೀಕರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಫಯಾಜ ಕಲಾದಗಿ, ಸೋಮನಗೌಡ ಕಲ್ಲೂರ, ದಯಾನಂದ ಸಾವಳಗಿ, ಮನೋಹರ ತಾಜವ, ಮಹಾದೇವ ರಾವಜಿ, ಸುರೇಶ ಬಿಜಾಪುರ, ಕಸ್ತೂರಿ ನಾಗರದಿನ್ನಿ, ಜಯಶ್ರೀ ಕನಶೆಟ್ಟಿ, ಅನುರಾಧ ಕಲಾಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ 0821-2345128 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರೆಜಿಲ್ ಗಡಿ ದಾಟಿದ ಗೆಲುವು: ಜನತಂತ್ರಕ್ಕೆ ಆಶಾಕಿರಣವಾದ ಲುಲಾ, ಆದರೆ ಅಳಿಸಿಲ್ಲ ಬಲಪಂಥದ ಹೆಜ್ಜೆಗುರುತು

ಲ್ಯಾಟಿನ್ ಅಮೆರಿಕದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಬ್ರೆಜಿಲ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯು...