ವಿಜಯಪುರ | 15 ಗ್ರಾಮಗಳ ‘ಪಿಂಚಣಿ ಅದಾಲತ್’ ಅಹವಾಲುಗಳಿಗೆ ಜಿಲ್ಲಾಡಳಿತ ಸ್ಪಂದನೆ

Date:

ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳ ಪಿಂಚಣಿ ಸಂಬಂಧಿತ ಅಹವಾಲುಗಳ ಶೀಘ್ರ ವಿಲೇವಾರಿಗಾಗಿ ಜಿಲ್ಲಾಡಳಿತವು ಶುಕ್ರವಾರ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹಾಗೂ ಪಟ್ಟಣಗಳಲ್ಲಿ ‘ಪಿಂಚಣಿ ಅದಾಲತ್’ ಆಯೋಜಿಸಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ತಿಳಿಸಿದ್ದಾರೆ.

- Advertisement -

ಕಂದಾಯ ಇಲಾಖೆ ಹಾಗೂ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ಸುತ್ತೋಲೆಯನ್ವಯ ಈ ವಿಶೇಷ ಅದಾಲತ್‌ಗಳನ್ನು ಬೆಳಿಗ್ಗೆ 11 ಗಂಟೆಗೆ ನಡೆಸಲಾಗುತ್ತಿದ್ದು, ಆಯಾ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಜಿಲ್ಲೆಯ ಮುದ್ದೇಬಿಹಾಳ, ದೇವರಹಿಪ್ಪರಗಿ, ವಿಜಯಪುರ, ಬಬಲೇಶ್ವರ, ನಿಡಗುಂದಿ, ತಾಳಿಕೋಟೆ, ಇಂಡಿ, ಚಡಚಣ, ಸಿಂದಗಿ ಹಾಗೂ ಬಸವನಬಾಗೇವಾಡಿ ತಾಲೂಕುಗಳ ಆಯ್ದ ಗ್ರಾಮಗಳು ಮತ್ತು ಪಟ್ಟಣಗಳಲ್ಲಿ ದೇವಸ್ಥಾನ, ಸಮುದಾಯ ಭವನ, ಸರ್ಕಾರಿ ಶಾಲೆ ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ.

ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಇನ್ನು ಮುಂದೆ ನೇರ ಹಣ ವರ್ಗಾವಣೆ (ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ – DBT) ಮೂಲಕ ಪಿಂಚಣಿ ಪಾವತಿಸಲು ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, ಸಂಬಂಧಿತ ಬ್ಯಾಂಕ್ ಹಾಗೂ ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಪಿಂಚಣಿ ಮಂಜೂರಾತಿ, ಪಾವತಿ ವಿಳಂಬ, ದಾಖಲೆಗಳ ತಿದ್ದುಪಡಿ, ಬ್ಯಾಂಕ್ ಖಾತೆ ಜೋಡಣೆ ಸೇರಿದಂತೆ ಪಿಂಚಣಿ ಸಂಬಂಧಿತ ಯಾವುದೇ ಸಮಸ್ಯೆ ಹೊಂದಿರುವ ಸಾರ್ವಜನಿಕರು ಹಾಗೂ ಫಲಾನುಭವಿಗಳು ನಿಗದಿತ ಸಮಯದಲ್ಲಿ ತಮ್ಮ ಸಮೀಪದ ಪಿಂಚಣಿ ಅದಾಲತ್‌ಗೆ ಹಾಜರಾಗಿ ಅಹವಾಲು ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...