ವಿದ್ಯಾರ್ಥಿಗಳ ಸಾಧನೆ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶಗಳ ವಿದ್ಯಾರ್ಥಿಗಳು ಸಮಾನವಾಗಿ ಉತ್ತಮ ಫಲಿತಾಂಶ ತಂದುಕೊಟ್ಟಿರುವುದು ಶಿಕ್ಷಣದ ಗುಣಮಟ್ಟ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿದೆ” ಎಂದು ವಿಜಯಪುರ ಜಿಲ್ಲಾಧಿಕಾರಿ ಕೆ ಆನಂದ್ ಹೇಳಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
“ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಗಿದೆ. ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇದೇ ಉತ್ಸಾಹ ಮತ್ತು ಶಿಸ್ತು ಮುಂದುವರೆಯಲಿ” ಎಂದು ವಿದ್ಯಾರ್ಥಿಗಳಿಗೆ ಹಾರೈಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಮಾತನಾಡಿ, “ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಪ್ರಮುಖ ಹಂತವಾಗಿದ್ದು, ಈ ಹಂತದಲ್ಲಿ ಸಾಧನೆ ಮಾಡಿದವರು ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಉತ್ತಮ ಸಾಧನೆ ಮಾಡಬಹುದು” ಎಂದರು ತಿಳಿಸಿದರು.
ಇದನ್ನೂ ಓದಿ ವಿಜಯಪುರ | 176 ಕೋಟಿ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಕಾರ್ಯ: ಉಸ್ತುವಾರಿ ಸಚಿವ ಎಂ ಬಿ ಪಾಟೀಲ್
ಕಾರ್ಯಕ್ರಮದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು, ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಪೋಷಕರು ಇದ್ದರು.





