ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ

Date:

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ ಹಿಂದಿನ ವರ್ಷದ ಕಬ್ಬಿನ ಬಿಲ್ ಮತ್ತು ಬಾಕಿ ಇರುವ ರೂ.50 ಸಂಪೂರ್ಣ ಪಾವತಿಸುವವರೆಗೆ ಜಿಲ್ಲೆಯ ಯಾವುದೇ ಸಕ್ಕರೆ ಕಾರ್ಖಾನೆ ಆರಂಭಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿ ಡಾ. ಕೆ. ಆನಂದ್ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ 10 ಸಕ್ಕರೆ ಕಾರ್ಖಾನೆಗಳು ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕು. ಕಬ್ಬಿನ ದರ ನಿಗದಿಪಡಿಸುವುದು, ಹಿಂದಿನ ಬಾಕಿ ಪಾವತಿ ಸೇರಿದಂತೆ ರೈತರ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಿದ ಬಳಿಕವೇ ಕಾರ್ಖಾನೆಗಳ ಕಾರ್ಯಾರಂಭಕ್ಕೆ ಅವಕಾಶ ನೀಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಅಕ್ಟೋಬರ್ ಮೊದಲ ವಾರದಲ್ಲಿ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಮಾಲೀಕರು, ರೈತ ಮುಖಂಡರು ಹಾಗೂ ಸಂಬಂಧಿಸಿದ ಅಧಿಕಾರಿಗಳ ಸಭೆ ಕರೆಯಬೇಕು. ಸಭೆಯಲ್ಲಿ ಕಬ್ಬಿನ ದರ, 14 ದಿನಗಳೊಳಗೆ ಕಬ್ಬಿನ ಬಿಲ್ ಪಾವತಿ, ಕಬ್ಬಿನ ತೂಕದಲ್ಲಿ ಪಾರದರ್ಶಕತೆ ಹಾಗೂ ರೈತರೊಂದಿಗೆ ಕಾರ್ಖಾನೆ ಆಡಳಿತ ಮಂಡಳಿಗಳು ಸೌಜನ್ಯದಿಂದ ವರ್ತಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಮುಕ್ತವಾಗಿ ಚರ್ಚಿಸಿ, ಕಾರ್ಖಾನೆಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಹಿಂದಿನ ವರ್ಷದ ಕಬ್ಬಿನ ಬಿಲ್‌ಗಳನ್ನು ಸಂಪೂರ್ಣವಾಗಿ ಪಾವತಿಸದೆ ಯಾವುದೇ ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು. ರೈತರ ಕಬ್ಬಿಗೆ ನ್ಯಾಯಯುತ ದರ ನಿಗದಿಪಡಿಸುವುದರ ಜೊತೆಗೆ ಬಾಕಿ ಹಣವನ್ನು ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ, ರಾಜ್ಯ ಉಪಾಧ್ಯಕ್ಷ ಕಲ್ಲು ಸೋನ್ನದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷರಾದ ಮಹಾದೇವ ಬನಸೋಡೆ, ಕಲ್ಲಪ್ಪ ಪಾರಶೇಟ್ಟಿ, ಅಮರೇಶ ಬೈರಗೊಂಡ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೆ.25ಕ್ಕೆ ಚುನಾವಣಾ ಕಚೇರಿಗಳಿಗೆ ಕಾಂಗ್ರೆಸ್ ಮುತ್ತಿಗೆ: ಸಿಇಸಿ ಗ್ಯಾನೇಶ್ ಕುಮಾರ್ ಬಂಧನ, ವಜಾಕ್ಕೆ ಆಗ್ರಹ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ತಕ್ಷಣವೇ ಬಂಧಿಸಬೇಕು,...

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬೀದರ್‌ | ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಣಕು ಶವಯಾತ್ರೆ

ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಹಾಗೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ...