ವಿಜಯಪುರ | ರೋಟರಿ ಸಂಸ್ಥೆಯಿಂದ ವೈದ್ಯರ ದಿನಾಚರಣೆ: 14 ವೈದ್ಯರಿಗೆ ಸನ್ಮಾನ

Date:

ವಿಜಯಪುರ ನಗರದ ರೋಟರಿ ಸಂಸ್ಥೆ ಮತ್ತು ಆರ್‌ಕೆಎಂ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಆರ್‌ಕೆಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ 14 ಮಂದಿ ವೈದ್ಯರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

- Advertisement -

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರೋಟರಿ ಸಂಸ್ಥೆಯ ಅಧ್ಯಕ್ಷ ರಾಕೇಶ್ ಜೋಶಿ, “ವೈದ್ಯರನ್ನು ದೇವರ ಸಮಾನರೆಂದು ಪರಿಗಣಿಸಲಾಗುತ್ತದೆ. ಏಕೆಂದರೆ ಪ್ರತಿಯೊಬ್ಬರ ಜೀವವನ್ನು ಕಾಪಾಡುವ ಮಹತ್ತರ ಹೊಣೆಗಾರಿಕೆ ವೈದ್ಯರ ಮೇಲಿದೆ. ಅಂತಹ ವೈದ್ಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯವನ್ನು ರೋಟರಿ ಸಂಸ್ಥೆ ನಡೆಸುತ್ತಿರುವುದು ಹೆಮ್ಮೆಯ ಸಂಗತಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ...

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ, ಅಂದಿನ ಕಾಲದ ಕಲಾವಿದರು ತಮ್ಮ ಗೀತೆಗಳ ಸಾಲುಗಳ ಮೂಲಕ ಮುಂದಿನ ಜಗತ್ತು ಹೀಗೇ ಇದ್ದೀತೆಂದು ಖಚಿತವಾಗಿ ಹೇಳಿದ್ದರು. ಮಾನವಕುಲವು ಮುಂದೆ...

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ...

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿಯಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ ಪುರಾಣ...

ಆರ್‌ಕೆಎಂ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎನ್.ಎಂ. ರುದ್ರಗೌಡರ ಮಾತನಾಡಿ, “ಆಯುರ್ವೇದ ವೈದ್ಯಕೀಯ ಕ್ಷೇತ್ರವು ಆಧುನಿಕ ತಂತ್ರಜ್ಞಾನಗಳೊಂದಿಗೆ ಬೆಳೆಯುತ್ತಿದ್ದು, ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಸಮಾಜಮುಖಿ ಕಾರ್ಯಕ್ರಮಗಳಲ್ಲಿ ರೋಟರಿ ಸಂಸ್ಥೆಯೊಂದಿಗೆ ಮಹಾವಿದ್ಯಾಲಯ ಸದಾ ಕೈಜೋಡಿಸಲಿದೆ” ಎಂದು ತಿಳಿಸಿದರು.

ರೋಟರಿ ಸಂಸ್ಥೆಯ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಡಾ. ಎಸ್.ಎಸ್. ನಾಗಠಾಣ ಮಾತನಾಡಿ, “ಆರೋಗ್ಯವೇ ಭಾಗ್ಯ” ಎಂಬ ಮಾತಿನಂತೆ ವೈದ್ಯರು ಹಗಲಿರುಳು ಶ್ರಮಿಸಿ ಸಮಾಜದ ಆರೋಗ್ಯ ಕಾಪಾಡುತ್ತಿದ್ದಾರೆ. ಅವರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ವೈದ್ಯರ ದಿನಾಚರಣೆಯನ್ನು ಆಚರಿಸಿ ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು.

ಆರ್‌ಕೆಎಂ ಸಂಸ್ಥೆಯ ಅಧ್ಯಕ್ಷ ಶ್ರೀ ಶಂಭುಲಿಂಗಯ್ಯ ಕರ್ಪೂರಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಡಾ. ಮೃಣಾಲ್ ರುದ್ರಗೌಡರ, ಡಾ. ಎಂ.ಎಸ್. ಯಲಗೋಡ, ಡಾ. ಸೌಭಾಗ್ಯ ಸೇರಿದಂತೆ 14 ಮಂದಿ ವೈದ್ಯರನ್ನು ರೋಟರಿ ಸಂಸ್ಥೆಯ ವತಿಯಿಂದ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ಗೋಪಾಲ ಕುಲಕರ್ಣಿ, ಇಮಾಮಸಾಬ ಹುಲ್ಲೂರ್, ಪ್ರಕಾಶ ಮಠ ಹಾಗೂ ಡಾ. ರವೀಂದ್ರ ಬೆಳ್ಳಿ ಮಾತನಾಡಿ, ವೈದ್ಯರ ದಿನಾಚರಣೆಯು ಖ್ಯಾತ ವೈದ್ಯ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಡಾ. ಬಿ.ಸಿ. ರಾಯ್ ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಆಚರಿಸಲಾಗುತ್ತದೆ. ಅವರು ವೈದ್ಯಕೀಯ ಕ್ಷೇತ್ರಕ್ಕೆ ಸಲ್ಲಿಸಿದ ಅಪಾರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ರೋಟರಿ ಸಂಸ್ಥೆ ಪ್ರತಿವರ್ಷ ಒಂದು ಸಂಸ್ಥೆಯನ್ನು ಆಯ್ಕೆ ಮಾಡಿಕೊಂಡು ವೈದ್ಯರನ್ನು ಗೌರವಿಸುವ ಪರಂಪರೆಯನ್ನು ಮುಂದುವರಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ರಾಜಯೋಗಿನಿ ಸುವರ್ಣ ಅಕ್ಕ, ಬೆಂಡಿಗೇರಿ, ಚಂದ್ರಶೇಖರ ಸಿಂಧೂರ, ನೀರಜ ರುಣವಾಲ, ಭೋಗಶೆಟ್ಟಿ, ಪ್ರಕಾಶ ಮಠ, ಕಲ್ಲಪ್ಪ ಮೇತ್ರಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಆರ್‌ಕೆಎಂ ಆಯುರ್ವೇದ ಮಹಾವಿದ್ಯಾಲಯದ ಸಿಬ್ಬಂದಿ,ದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ರೋಟರಿ ಸಂಸ್ಥೆಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ ಗೀತೆಗಳಿವು!

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ,...

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನ ಸುಪ್ರೀಂ ತಡೆ

ಕೊಚ್ಚಿನ್ ಮಿನರಲ್ಸ್ ಅಂಡ್ ರುಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಮತ್ತು ಎಕ್ಸಾಲಾಜಿಕ್ ಕಂಪನಿ...