ವಿಜಯಪುರ | ವ್ಯಸನಮುಕ್ತ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಎಡಿಸಿ ಡಾ. ಔದ್ರಾಮ ಸೂಚನೆ

Date:

ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ 1ರಂದು ನಗರದ ಗಾಂಧಿ ವೃತ್ತದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆಯಲಿರುವ ವ್ಯಸನಮುಕ್ತ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿ, ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

“ಡಾ. ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ಸಮಾಜ ನಿರ್ಮಾಣದ ಕನಸು ಹೊತ್ತು, ಮನೆ-ಮನೆಗೆ ಹೋಗಿ ದುರ್ವ್ಯಸನ ಹಾಗೂ ದುಶ್ಚಟಗಳ ದಾಸ್ಯದಿಂದ ಜನಸಾಮಾನ್ಯರನ್ನು ಹೊರತರಲು ಅವಿರತ ಶ್ರಮಿಸಿದ್ದರು. ಹಲವಾರು ಸಮಾಜ ಸುಧಾರಣೆ ಕಾರ್ಯಗಳೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿಯೂ ತಮ್ಮನ್ನು ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ತೊಡಗಿಸಿಕೊಂಡಿದ್ದ ಡಾ. ಮಹಾಂತ ಶಿವಯೋಗಿಗಳು ಸಮಾಜ ಸುಧಾರಣೆಯ ಮೊದಲ ಹಾಗೂ ಅತಿಮುಖ್ಯ ಹೆಜ್ಜೆ ಮನಃಪರಿವರ್ತನೆ ಎಂಬುದನ್ನು ಅರಿತಿದ್ದರು. ವ್ಯಸನದಿಂದ ಮುಕ್ತರಾಗಲು ಮೊದಲು ಮನಸ್ಸನ್ನು ಈ ಪಿಡುಗಿನಿಂದ ಮುಕ್ತಗೊಳಿಸಬೇಕು ಎಂದು ನಂಬಿದ್ದರು. ಅವರ ಆದರ್ಶಗಳು ನಮಗೆ ಜೀವನ ಪಾಠವಾಗಬೇಕು” ಎಂದು ಸಲಹೆ ನೀಡಿದರು.

ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರರು ಆಗಸ್ಟ್ 1ರಂದು ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಿ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯ ಮೆಕ್ಕಳಕಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸೇರಿದಂತೆ ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ಎಂ.ಆರ್. ಗುರಿಕಾರ, ಎಂ.ಸಿ. ಮುಲ್ಲಾ, ಮಹಾದೇವ ರಾವಜಿ, ಫಯಾಜ್ ಕಲಾದಗಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು (ಅ.29) ನಡೆದ ಕರ್ನಾಟಕ...

ಹಾಸನ | ಆನ್‌ಲೈನ್ : ದೇವಿ ದರ್ಶನಕ್ಕೆ ಟಿಕೆಟ್ ಹಾಗೂ ಪ್ರಸಾದ ಲಭ್ಯವಿದೆ 

₹300 ಮತ್ತು ₹1,000 ವಿಶೇಷ ದರ್ಶನ ಟಿಕೆಟ್ಭ ಕ್ತರಿಗೆ ತ್ವರಿತ ಹಾಗೂ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳ: ನವೆಂಬರ್ 1ರಿಂದಲೇ ಜಾರಿ

ರಾಜ್ಯದ ಹಾಲು ಗ್ರಾಹಕರಿಗೆ ರಾಜ್ಯ ಸರ್ಕಾರವು ಬೆಲೆ ಏರಿಕೆಯ ಹೊರ ಹೇರಿದೆ....