ವಿಜಯಪುರ |ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಡಾ. ಸಂಬಣ್ಣಿ ಕರೆ

Date:

ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಸೂಕ್ತ ಪ್ರೋತ್ಸಾಹ ಹಾಗೂ ಅವಕಾಶಗಳನ್ನು ಕಲ್ಪಿಸುವ ಮೂಲಕ ಕಲಾ ಕ್ಷೇತ್ರದಲ್ಲಿ ಬೆಳೆಯಲು ಪೋಷಕರು ಮತ್ತು ಇಲಾಖೆಗಳು ಸಹಕರಿಸಬೇಕು ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಎಸ್. ಸಂಬಣ್ಣಿ ಹೇಳಿದರು.

- Advertisement -

ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಜಿಲ್ಲಾಮಟ್ಟದ ಕಲಾಪ್ರತಿಭೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈಲ್ವೆ ಪ್ಲಾಟ್‌ಫಾರ್ಮ್‌ನಿಂದ ಜಾಗತಿಕ ಪಯಣ: ಸಣ್ಣ ಊರಿನ ಕನಸುಗಳಿಗೆ...

"ಧೋನಿ ಬರುವ ಮುನ್ನ ರಾಂಚಿಯ ಪೋಷಕರು ತಮ್ನ ಮಕ್ಕಳು ವೈದ್ಯರು, ಎಂಜಿನಿಯರ್ ಆಗಬೇಕೆಂದು ಬಯಸುತ್ತಿದ್ದರು. ಅವರು ಬಂದ ಮೇಲೆ ಎಲ್ಲರೂ ಧೋನಿಯಾಗಲು, ವಿಕೆಟ್‌ಕೀಪರ್ ಆಗಲು ಬಯಸಿದರು" ಎನ್ನುತ್ತಾರೆ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ....

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಸಿದ್ರಾಮಪ್ಪ ಹೊನಮೊಡೆ ಮಾತನಾಡಿ, ಇಂತಹ ಕಾರ್ಯಕ್ರಮಗಳು ಮಕ್ಕಳ ಸೃಜನಶೀಲತೆ ಮತ್ತು ಕಲಾಪ್ರತಿಭೆ ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿವೆ ಎಂದರು.

ಬಾಲಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವಪ್ರತಿಭೆ ವಿಭಾಗಗಳಲ್ಲಿ ಶಾಸ್ತ್ರೀಯ ನೃತ್ಯ, ಸಂಗೀತ, ಜನಪದ ಗೀತೆ, ವಾದ್ಯಸಂಗೀತ ಮತ್ತು ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು. ಪ್ರಥಮ ಸ್ಥಾನ ಪಡೆದವರು ಮುಂದಿನ ವಲಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಲಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದ ಸುರೇಶ ರಾಮಚಂದ್ರ ಜೋಶಿ ಹಾಗೂ ಹಿಂದಿನ ಸಾಲಿನ ಕಲಾಪ್ರತಿಭೋತ್ಸವದ ರಾಜ್ಯಮಟ್ಟದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯ ವಿಜೇತ ಕಾಶೀನಾಥ ಭೋಸ್ಲೆ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಅಕಾಡೆಮಿಗಳ ಸದಸ್ಯರು, ಕಲಾವಿದರು, ಅಧಿಕಾರಿಗಳು, ತೀರ್ಪುಗಾರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ.30 ರಂದು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ: ಸಚಿವ ಯುಟಿ‌ ಖಾದರ್

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ...

ಪೆಟ್ರೋಲ್‌ನಲ್ಲಿ ಶೇ 31.2ರವರೆಗೆ ಎಥೆನಾಲ್ ಮಿಶ್ರಣ: ಕೇಂದ್ರಕ್ಕೆ ರಾಜ್ಯದ ಪತ್ರ

ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಯೋಜನೆಯ ಅನುಷ್ಠಾನದ ಬಗ್ಗೆ...

ವಿಜಯಪುರ |ನ.23ರಂದು ಪಟ್ಟಣಕ್ಕೆ ಆರೋಗ್ಯ ಸಚಿವ ಯು.ಟಿ.ಖಾದರ್ ಭೇಟಿ

ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ನ.23ರಂದು ಪಟ್ಟಣಕ್ಕೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ...

ಬೆಂಗಳೂರು ಟೆಕ್ ಸಮಿಟ್-2026; ಸ್ಟಾರ್ಟ್‌ಅಪ್‌ಗಳಿಗೆ ಸರ್ಕಾರವೇ ಮೊದಲ ಗ್ರಾಹಕ: ಸಚಿವ ಪ್ರಿಯಾಂಕ್ ಖರ್ಗೆ

ನವೋದ್ಯಮಗಳು ರೂಪಿಸುವ ನವೀನ ಆವಿಷ್ಕಾರಗಳನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳುವ ಮೂಲಕ, ದೇಶದಲ್ಲೇ ಮೊದಲ...