ವಿಜಯಪುರ | ಡಾ. ವಿಜಯಕುಮಾರ್ ಅಜೂರ್ ಮಹಿಳಾ ವಿವಿ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕಾರ

Date:

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ವಿಜಯಕುಮಾರ್ ಅಜೂರ್ ಸೋಮವಾರ ಅಧಿಕಾರ ಸ್ವೀಕರಿಸಿದರು.

- Advertisement -

ನಿರ್ಗಮಿತ ಕುಲಸಚಿವ ಶಂಕರಗೌಡ ಸೋಮನಾಳ ಅವರು ನೂತನ ಕುಲಸಚಿವರಿಗೆ ಅಧಿಕೃತವಾಗಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್. ಲಕ್ಕಣ್ಣವರ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಡಾ. ಅಜೂರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ನೂತನ ಹೊಣೆಗಾರಿಕೆಯಲ್ಲಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿಶ್ವವಿದ್ಯಾಲಯದ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವಲ್ಲಿ ಡಾ. ಅಜೂರ್ ಯಶಸ್ವಿಯಾಗಲಿ ಎಂದು ಪ್ರೊ. ಪಿ.ಜಿ. ತಡಸದ, ಪ್ರೊ. ಓಂಕಾರ ಕಾಕಡೆ, ಪ್ರೊ. ಜಿ.ಜಿ. ರಜಪೂತ, ಪ್ರೊ. ನಾಮದೇವಗೌಡ ಹಾಗೂ ಪ್ರೊ. ಸಕ್ಪಾಲ್ ಹೂವಣ್ಣ ಹಾರೈಸಿದರು.

ಇದೇ ವೇಳೆ ನಿರ್ಗಮಿತ ಕುಲಸಚಿವ ಶಂಕರಗೌಡ ಸೋಮನಾಳ ಅವರನ್ನು ಕುಲಪತಿ, ಮೌಲ್ಯಮಾಪನ ಕುಲಸಚಿವರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿ, ವಿಶ್ವವಿದ್ಯಾಲಯದ ಸೇವೆಗೆ ನೀಡಿದ ಕೊಡುಗೆಗಾಗಿ ಕೃತಜ್ಞತೆ ಸಲ್ಲಿಸಿದರು. ಅವರ ಮುಂದಿನ ಸೇವಾ ಪಯಣ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಪರಿಚಯ: 2014ರ ಬ್ಯಾಚ್‌ನ ಕೆಎಎಸ್ ಅಧಿಕಾರಿಯಾಗಿರುವ ಡಾ. ವಿಜಯಕುಮಾರ್ ಬಿ. ಅಜೂರ್ ಅವರು ಇಂಡಿ ಹಾಗೂ ಶಿರಸಿ ತಾಲೂಕು ಪಂಚಾಯಿತಿಗಳ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ವಿಜಯಪುರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ವಿಜಯಪುರ ಜಿಲ್ಲಾ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹಾಗೂ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...