ವಿಜಯಪುರ | ಹಾಲುಮತ ಸಮಾಜವನ್ನು ರಾಜಕೀಯಕ್ಕೆ ಎಳೆದು ತರುವುದು ಖಂಡನೀಯ: ಸಂಗೀತಾ ದಿನ್ನಿ

Date:

ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಅವರಿಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡು ಹಾಲುಮತ ಸಮಾಜವನ್ನು ರಾಜಕೀಯಕ್ಕೆ ಎಳೆದು ತರುತ್ತಿರುವುದು ತೀವ್ರವಾಗಿ ಖಂಡನೀಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಂಗೀತಾ ದಿನ್ನಿ ಹೇಳಿದರು.

- Advertisement -

ವಿಜಯಪುರ ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಧರ್ಮಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಹಾಲುಮತ ಸಮಾಜದ ಮಹಿಳೆಯನ್ನು ಆಯ್ಕೆ ಮಾಡುವ ಕುರಿತು ಎಂ.ಬಿ ಪಾಟೀಲ ಹಾಗೂ ಶಿವಾನಂದ ಪಾಟೀಲ ಅವರು ಚರ್ಚಿಸಿ ನಿರ್ಧರಿಸಿದ್ದರು. ಅದರಂತೆ ತಮಗೆ ಪ್ರಥಮ ಹಾಲುಮತ ಸಮಾಜದ ಮಹಿಳಾ ಅಭ್ಯರ್ಥಿಯಾಗಿ ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಹಾಲುಮತ ಸಮಾಜದವರನ್ನು ಆಯ್ಕೆ ಮಾಡುವಲ್ಲಿ ಎಂ.ಬಿ. ಪಾಟೀಲ ಅವರ ಪಾತ್ರವಿದೆ. ನಾಡಗೌಡರನ್ನು ಬೆಂಬಲಿಸಿದ್ದ ಮುದ್ದೇಬಿಹಾಳದ ಕೆಂಚಪ್ಪ ಬಿರಾದಾರ, ತಿಕೋಟಾದ ತಮ್ಮಣ್ಣ ಹಂಗರಗಿ ಹಾಗೂ ಸಿಂದಗಿಯ ಮಲ್ಲಣ್ಣ ಸಾಲಿ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡುವಲ್ಲಿಯೂ ಪಾಟೀಲರ ಪಾತ್ರವಿದೆ ಎಂದರು.

ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಮಾತನಾಡಿ, “ವಿಜಯಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಹಾಲುಮತ ಸಮಾಜದ ನೀಲಮ್ಮ ಮೇಟಿ ಹಾಗೂ ತಮ್ಮ ಪತ್ನಿ ಸುಜಾತಾ ಕಳ್ಳಿಮನಿ ಅವರನ್ನು ಅಧ್ಯಕ್ಷರನ್ನಾಗಿ ಮಾಡುವ ಸಂದರ್ಭದಲ್ಲಿ ಬಹುಮತ ಇರಲಿಲ್ಲ. ಪಕ್ಷದ ಕೆಲವರೇ ಪಕ್ಷಾಂತರ ಮಾಡಿದ್ದರು. ಈ ಸಂದರ್ಭದಲ್ಲಿ ಸವಾಲಾಗಿ ಸ್ವೀಕರಿಸಿದ ಎಂ.ಬಿ ಪಾಟೀಲರು ಬಿಜೆಪಿ ಆಡಳಿತದಲ್ಲಿದ್ದರೂ ತನು, ಮನ, ಧನದಿಂದ ಬೆಂಬಲಿಸಿ ಅಧ್ಯಕ್ಷ ಸ್ಥಾನ ದೊರಕಿಸಿಕೊಟ್ಟಿದ್ದರು” ಎಂದು ಹೇಳಿದರು.

“ಹಾಲುಮತ ಸಮಾಜದ ಮಹಿಳೆಯರನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಕೂರಿಸಲು ಎಂ.ಬಿ ಪಾಟೀಲ್ ಕಾರಣರಾಗಿದ್ದಾರೆ. ಹೀಗಿರುವಾಗ ಸಿ.ಎಸ್ ನಾಡಗೌಡರು ಹಾಲುಮತದವರನ್ನು ಅಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಸರ್ಕಸ್ ಮಾಡಬೇಕಾಯಿತು ಎಂಬರ್ಥದಲ್ಲಿ ಹೇಳಿಕೆ ನೀಡಿರುವುದು ಸರಿಯಲ್ಲ” ಎಂದರು.

ಸಂಗೀತಾ ದಿನ್ನಿ, ನೀಲಮ್ಮ ಮೇಟಿ ಹಾಗೂ ಸುಜಾತಾ ಕಳ್ಳಿಮನಿ ಈ ಮೂವರು ಹಾಲುಮತ ಸಮಾಜದ ಮಹಿಳೆಯರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಲು ಎಂ.ಬಿ. ಪಾಟೀಲರ ಪಾತ್ರವಿದೆ. ನಾಡಗೌಡರು ಯಾರನ್ನು ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಸಚಿವ ಸ್ಥಾನದ ಬೇಡಿಕೆ ಇಡುವುದು ಹಿರಿಯ ಶಾಸಕರಾದ ನಾಡಗೌಡರ ಹಕ್ಕು. ಅದಕ್ಕಾಗಿ ಹೈಕಮಾಂಡ್‌ನೊಂದಿಗೆ ಚರ್ಚಿಸಬೇಕು. ಅದನ್ನು ಬಿಟ್ಟು ಹಾಲುಮತ ಸಮಾಜವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನದ ವಿಚಾರಕ್ಕೆ ಎಳೆದು ತರುವುದು ಅಪ್ರಸ್ತುತ ಎಂದು ಹೇಳಿದರು.

ಗೋವಾ ಕನ್ನಡಿಗರ ಸಂಘದ ಅಧ್ಯಕ್ಷ ಸಿದ್ದಣ್ಣ ಮೇಟಿ ಮಾತನಾಡಿ, ಮುದ್ದೇಬಿಹಾಳ ಹಾಗೂ ದೇವರಹಿಪ್ಪರಗಿ ತಾಲೂಕುಗಳಲ್ಲಿ ಹಾಲುಮತ ಸಮಾಜದ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಮುಂದಿನ ದಿನಗಳಲ್ಲಿ ನಮ್ಮ ಸಮುದಾಯಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು ಎಂದು ಎಲ್ಲರೂ ಸೇರಿ ಒತ್ತಾಯಿಸುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಬೀದರ್‌ | ಎಚ್‌ಐವಿ ಬಾಧಿತರು ಆತಂಕಕ್ಕೊಳಗಾಗದೆ ನಿಯಮಿತ ಔಷಧಿ ಸೇವಿಸಿ

ಎಚ್‌ಐವಿ ಬಾಧಿತರು ಯಾವುದೇ ರೀತಿಯ ಭಯ, ಆತಂಕಕ್ಕೆ ಒಳಗಾಗದೆ ವೈದ್ಯರ ಸಲಹೆಯಂತೆ...

ಬೀದರ್‌ | ಗಾಂಧೀ ಜಯಂತಿ : ಪೌರಕಾರ್ಮಿಕರಿಗೆ ಉಪಹಾರ ವಿತರಣೆ

ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಆಮ್ ಆದ್ಮಿ ಪಕ್ಷದ ಇಂಜಿನಿಯರಿಂಗ್ ವಿಂಗ್...