ವಿಜಯಪುರ | ಕೆಇಎ ಪರೀಕ್ಷೆಯಿಂದ ವಂಚಿತ ಅಭ್ಯರ್ಥಿಗಳಿಗೆ ಮರುಪರೀಕ್ಷೆಗೆ DYFI ಆಗ್ರಹ

Date:

ವಿಜಯಪುರ ಯಶವಂತಪುರ ರೈಲಿನ ಎಂಜಿನ್‌ನಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ತಲುಪಲಾಗದೆ ಪರೀಕ್ಷೆಯಿಂದ ವಂಚಿತರಾದ ಎಲ್ಲ ಅಭ್ಯರ್ಥಿಗಳಿಗೆ ವಿಶೇಷ ಮರುಪರೀಕ್ಷೆ ನಡೆಸಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ವಿಜಯಪುರ ಜಿಲ್ಲಾ ಸಮಿತಿ ಆಗ್ರಹಿಸಿದೆ.

- Advertisement -

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ನೇಮಕಾತಿಗಾಗಿ ಪರೀಕ್ಷೆ ಆಯೋಜಿಸಲಾಗಿತ್ತು. ವಿಜಯಪುರದಿಂದ ಯಶವಂತಪುರಕ್ಕೆ ತೆರಳುತ್ತಿದ್ದ ವಿಜಯಪುರ–ಯಶವಂತಪುರ (16548) ರೈಲಿನ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ ನಾಲ್ಕು ಗಂಟೆಗೂ ಅಧಿಕ ಕಾಲ ರೈಲು ವಿಳಂಬಗೊಂಡ ಪರಿಣಾಮ 500ಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ ಎಂದು ಡಿವೈಎಫ್‌ಐ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಪರೀಕ್ಷೆಗೆ ಹಾಜರಾಗಲು ವಿಜಯಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಭ್ಯರ್ಥಿಗಳು ತಮ್ಮ ಯಾವುದೇ ತಪ್ಪಿಲ್ಲದೆ ಪರೀಕ್ಷೆ ಬರೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ರೈಲ್ವೆ ಇಲಾಖೆಯ ತಾಂತ್ರಿಕ ದೋಷದಿಂದಾಗಿ ಪರೀಕ್ಷಾರ್ಥಿಗಳು ಅವಕಾಶ ಕಳೆದುಕೊಂಡಿದ್ದು, ಇದಕ್ಕೆ ಅವರನ್ನು ಹೊಣೆಗಾರರನ್ನಾಗಿ ಮಾಡಬಾರದು ಎಂದು ಸಂಘಟನೆ ಒತ್ತಾಯಿಸಿದೆ.

ವರ್ಷಗಟ್ಟಲೆ ಕಷ್ಟಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಅಭ್ಯರ್ಥಿಗಳಿಗೆ ಈ ಬೆಳವಣಿಗೆ ಆತಂಕ ಹಾಗೂ ಹತಾಶೆ ಮೂಡಿಸಿದೆ. ಪರೀಕ್ಷಾ ಅವಕಾಶ ಕಳೆದುಕೊಂಡಿರುವುದು ಅವರ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದಾಗಿದ್ದು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಡಿವೈಎಫ್‌ಐ ಹೇಳಿದೆ.

ಈ ಹಿನ್ನೆಲೆಯಲ್ಲಿ ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳನ್ನು ಗುರುತಿಸಿ, ಅವರಿಗೆ ವಿಶೇಷ ಮರುಪರೀಕ್ಷೆ ನಡೆಸಬೇಕು. ಈಗಾಗಲೇ ಪರೀಕ್ಷಾ ಶುಲ್ಕ ಪಾವತಿಸಿರುವುದರಿಂದ ಮರುಪರೀಕ್ಷೆಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸಬಾರದು. ಮರುಪರೀಕ್ಷೆಯ ದಿನಾಂಕ, ಸಮಯ ಹಾಗೂ ಪರೀಕ್ಷಾ ಕೇಂದ್ರಗಳ ವಿವರಗಳನ್ನು ಕೆಇಎ ಕೂಡಲೇ ಪ್ರಕಟಿಸಬೇಕು ಎಂದು ಆಗ್ರಹಿಸಿದೆ.

ರೈಲು ವಿಳಂಬದ ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳು ರೈಲು ತಡೆದು ಪ್ರತಿಭಟನೆ ನಡೆಸಿರುವುದನ್ನೂ ಸಂಘಟನೆ ಉಲ್ಲೇಖಿಸಿದೆ. ರೈಲ್ವೆ ಇಲಾಖೆಯ ತಾಂತ್ರಿಕ ದೋಷ ಅಥವಾ ಕಾಮಗಾರಿಯಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ಅಭ್ಯರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುವ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ರೈಲು ಹಾಗೂ ಬಸ್ ಸೇವೆಗಳನ್ನು ಕಲ್ಪಿಸಬೇಕು. ರೈಲುಗಳ ಸಮಯಪಾಲನೆ, ಸಂಪರ್ಕ ವ್ಯವಸ್ಥೆ ಹಾಗೂ ತುರ್ತು ದುರಸ್ತಿ ಕಾರ್ಯಗಳಿಂದ ಈ ಹಿಂದೆ ಕೂಡ ಅಭ್ಯರ್ಥಿಗಳು ಪರೀಕ್ಷೆಯಿಂದ ವಂಚಿತರಾದ ಘಟನೆಗಳು ನಡೆದಿವೆ. ಇಂತಹ ಸಂದರ್ಭಗಳಲ್ಲಿ ಪರ್ಯಾಯ ಸಾರಿಗೆ ವ್ಯವಸ್ಥೆ ಕಲ್ಪಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಡಿವೈಎಫ್‌ಐ ಆರೋಪಿಸಿದೆ.

ರೈಲು ಸಂಚಾರದಲ್ಲಿ ವ್ಯತ್ಯಯಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಯುವಜನರ ಭವಿಷ್ಯದೊಂದಿಗೆ ನಿರ್ಲಕ್ಷ್ಯ ವಹಿಸಬಾರದು. ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಇಎಗೆ ಸೂಕ್ತ ನಿರ್ದೇಶನ ನೀಡಿ ಮರುಪರೀಕ್ಷೆಗೆ ಅವಕಾಶ ಕಲ್ಪಿಸಬೇಕು ಎಂದು ಡಿವೈಎಫ್‌ಐ ವಿಜಯಪುರ ಜಿಲ್ಲಾ ಸಮಿತಿ ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...