ವಿಜಯಪುರ | ಓದುವುದರ ಜತೆಗೆ ಸಂಪಾದನೆ: ಮಹಿಳಾ ವಿವಿಯ ವಿನೂತನ ಯೋಜನೆ

Date:

ಮುಂಬರುವ ದಿನಗಳಲ್ಲಿ ವಿಜಯಪುರದ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ʼಓದುತ್ತಿರುವಾಗಲೇ ಗಳಿಕೆʼ ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿನಿಯರಿಗೆ ಬಯೊಡೀಸೆಲ್ ಘಟಕ, ಕಾಗದ ಮರುಬಳಕೆ ಘಟಕ, ಅನನ್ಯ ಆಹಾರ ಸಂಸ್ಕರಣಾ ಕೇಂದ್ರ ಮತ್ತು ಗ್ರೀನ್‌ಹೌಸ್‌ಗಳಲ್ಲಿ ವಿವಿಧ ಕೌಶಲಗಳನ್ನು ಕಲಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಘೋಷಿಸಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿವಿಯ ಪ್ರಗತಿ ವರದಿ ಮಂಡಿಸಿದ ಅವರು, “ಕೌಶಲ್ಯ ಮಹಿಳಾ ತಂತ್ರಜ್ಞಾನ ಪಾರ್ಕ್ ಮೂಲಕ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಹಾಗೂ ಗ್ರಾಮೀಣ ಮಹಿಳೆಯರಿಗೆ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ವಿದೇಶಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ವಾರಕ್ಕೆ 20 ಗಂಟೆಗಳ ಕಾಲ ಪಾರ್ಟ್ ಟೈಂ ಕೆಲಸ ಮಾಡುವ ಪದ್ಧತಿ ವ್ಯಾಪಕವಾಗಿ ಬಳಕೆಯಲ್ಲಿದೆ. ಅದೇ ಮಾದರಿಯಲ್ಲಿ ಮಹಿಳಾ ವಿವಿಯಲ್ಲಿ ಓದುವ ವಿದ್ಯಾರ್ಥಿನಿಯರು ತಮ್ಮ ಬಿಡುವಿನ ವೇಳೆಯಲ್ಲಿ ಪಾರ್ಟ್ ಟೈಂ ಕೆಲಸ ಮಾಡುವ ಮೂಲಕ ವಿವಿಧ ಕೌಶಲಗಳನ್ನು ಕಲಿಯುವುದರ ಜತೆಗೆ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುವಾಗಲೇ ಒಂದಷ್ಟು ದುಡ್ಡು ಸಂಪಾದಿಸುವ ಅವಕಾಶಗಳನ್ನು ಸೃಷ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿನಿಯರ ಪಾಲಕರ ಆರ್ಥಿಕ ಹೊರೆಯನ್ನು ಒಂದಷ್ಟು ಕಡಿಮೆ ಮಾಡಬಹುದಾಗಿದೆ” ಎಂದು ವಿವರಿಸಿದರು.

“ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕುಲಪತಿಗಳ ಸಮಾವೇಶದಲ್ಲಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ದೂರಶಿಕ್ಷಣ ಪುನರಾಂಭಿಸುವ ಬಗೆಗೆ ವಿಸ್ತೃತ ಚರ್ಚೆಗಳನ್ನು ನಡೆಸಿದ್ದು, ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆ” ಎಂದು ಹೇಳಿದರು.

“ಉನ್ನತ ಶಿಕ್ಷಣದ ಅಭಿವೃದ್ಧಿಯಲ್ಲಿ ಮೂಲಸೌಕರ್ಯದ ಮಹತ್ವವನ್ನು ಅರಿತು, ನಮ್ಮ ವಿಶ್ವವಿದ್ಯಾಲಯವು ಕ್ಯಾಂಪಸ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಕೊಂಡಿದೆ. 2025-26 ನೇ ಶೈಕ್ಷಣಿಕ ವರ್ಷದಲ್ಲಿ ದಶಮಾನೋತ್ಸವದ ಮೊದಲ ಮಹಡಿಯಲ್ಲಿ 3.53 ಕೋಟಿ ರೂ. ಅನುದಾನದಲ್ಲಿ ಸ್ನಾತಕ ಕೋರ್ಸ್‌ಗಳನ್ನು ನಡೆಸುವ ಸಲುವಾಗಿ ತರಗತಿ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಕೇಂದ್ರ ಸರ್ಕಾರದ ʼಪಿಎಂ ಉಷಾʼ ಯೋಜನೆಯಡಿ 9.07 ಕೋಟಿ ಮೊತ್ತದ ಅನುದಾನದಲ್ಲಿ ʼಮಹಿಳಾ ಕ್ಷೇಮಾಭಿವೃದ್ಧಿ ಕೇಂದ್ರʼ ಹಾಗೂ ಮಹಿಳಾ ಶೌಚಾಲಯಗಳ ನವೀಕರಣ ಕಟ್ಟಡ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿದೆ” ಎಂದು ಹೇಳಿದರು.

ಇದನ್ನೂ ಓದಿ ವಿಜಯಪುರ | ನಟ ಡಾ. ರಾಜಕುಮಾರ್ ಜನ್ಮದಿನ ಆಚರಿಸಲು ಜಿಲ್ಲಾಡಳಿತ ನಿರ್ಧಾರ

“ವಿವಿಯ ಜ್ಞಾನಶಕ್ತಿ ಕ್ಯಾಂಪಸ್‌ನಲ್ಲಿ ನಾಲ್ಕು ಸ್ನಾತಕೋತ್ತರ ವಿದ್ಯಾರ್ಥಿನಿಯರ ವಸತಿ ನಿಲಯಗಳು ಇವೆ. ಇದಲ್ಲದೆ, ಸ್ನಾತಕ ವಿದ್ಯಾರ್ಥಿನಿಯರಿಗಾಗಿ ಎರಡು ವಸತಿ ಸೌಲಭ್ಯಗಳನ್ನು ಒದಗಿಸಲಾಗಿದೆ. ವಿಶ್ವವಿದ್ಯಾಲಯವು ವಿದ್ಯಾರ್ಥಿನಿಯರಿಗೆ 500 ಲೀಟರ್ ಸಾಮರ್ಥ್ಯದ ಆರ್ ಒ ನೀರು ಶುದ್ಧೀಕರಣ ಯಂತ್ರ, ಗೀಸರ್‌ಗಳು, ಸೌರ ಹೀಟರ್‌ಗಳು, ಸೌರ ದೀಪಗಳು ಮತ್ತು ವಸತಿ ನಿಲಯಗಳ ಸುತ್ತಲೂ ಸೌರ ರಸ್ತೆ ದೀಪಗಳಂತಹ ಸೌಲಭ್ಯಗಳನ್ನು ಒದಗಿಸುತ್ತದೆ. ವಿದ್ಯಾರ್ಥಿನಿಯರ ಭದ್ರತೆಯನ್ನು ಖಚಿತಪಡಿಸಲು 24 ಗಂಟೆಗಳ ಭದ್ರತಾ ವ್ಯವಸ್ಥೆ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿನಿಯರ ಕಲ್ಯಾಣಕ್ಕಾಗಿ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ನರ್ಸ್ ನೇಮಕವಾಗಿದ್ದು, ಆರೋಗ್ಯ ಕೇಂದ್ರದಲ್ಲಿ ದಿನದ ಇಪ್ಪತ್ತನಾಲ್ಕು ಗಂಟೆಯೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲು ಆ್ಯಂಬುಲೆನ್ಸ್‌ ಸೇವೆಯೂ ಲಭ್ಯವಿದೆ” ಎಂದು ಕುಲಪತಿಗಳು ವಿವರಿಸಿದರು.

ವೇದಿಕೆಯ ಮೇಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯ ಅತಿಥಿ ಮುಂಬೈನ ಎಸ್‌ ಎನ್‌ ಡಿ ಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಉಜ್ವಲಾ ಚಕ್ರದೇವ್, ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಪಾರ್ವತೆವ್ವ ಸಿದ್ದಪ್ಪ ಹೊಂಗಲ್, ಡಾ.ಸಂಗೀತಾ ಎನ್ ಕಟ್ಟಿಮನಿ ಮತ್ತು ಆಶಾದೇವಿ ಜಗದೀಶ ಗುಡಗುಂಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣವರ, ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ, ಸಿಂಡಿಕೇಟ್, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ: ಪ್ರೇಮ ವಿವಾಹದ ದ್ವೇಷಕ್ಕೆ ಯುವಕನ ಕುಟುಂಬದ ಮೇಲೆ ಮಾರಣಾಂತಿಕ ದಾಳಿ

ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಯುವಕನ ಕುಟುಂಬದ ಮೇಲೆ ಯುವತಿಯ ಕಡೆಯವರು ಮಾರಕಾಸ್ತ್ರಗಳಿಂದ...

ದಾಖಲೆಯ ರನ್ ಬೆನ್ನತ್ತಿದ ಭಾರತಕ್ಕೆ ಜಯ: ನ್ಯೂಜಿಲೆಂಡ್ ವಿರುದ್ಧ ಮಿಂಚಿದ ಸಂಜು ಸ್ಯಾಮ್ಸನ್

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು ಇಳಿಕೆ: ಯಾವೆಲ್ಲ ಔಷಧಿ ಅಗ್ಗ? ಪಡೆಯುವ ವಿಧಾನ ಹೇಗೆ?

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ...

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...