ವಿಜಯಪುರ |ಅನುದಾನಿತ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

Date:

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ವಿಜಯಪುರಕ್ಕೆ ಆಗಮಿಸಿದ್ದ ಸಚಿವರನ್ನು ಭೇಟಿಯಾದ ಅನುದಾನಿತ ನೌಕರರ ಸಂಘದ ರಾಜ್ಯ ಘಟಕದ ಪದಾಧಿಕಾರಿಗಳು, ಅನುದಾನಿತ ನೌಕರರ ಸಮಸ್ಯೆಗಳ ಕುರಿತು ಗಮನ ಸೆಳೆದರು. ವಿಶೇಷವಾಗಿ ಶಿಕ್ಷಣ ಸಂಸ್ಥೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಬೇಕು ಹಾಗೂ ಮಾನ್ಯತೆ ನವೀಕರಣದ ಪ್ರಕ್ರಿಯೆ ವಿಳಂಬವಾಗುವ ಕಾರಣಕ್ಕೆ ನೌಕರರ ವೇತನವನ್ನು ತಡೆಹಿಡಿಯಬಾರದು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

ಡಿ.ಡಿ. ಕೋಸಾಂಬಿ | ಜ್ಞಾನದ ಹಲವು ಜಗತ್ತುಗಳನ್ನು ಶೋಧಿಸಿದ...

ಡಿ.ಡಿ. ಕೋಸಾಂಬಿಯವರ ಬದುಕು ಕೇವಲ ಯಶಸ್ಸಿನ ಕಥೆಯಷ್ಟೇ ಅಲ್ಲ; ಅದು ಅಸಾಧಾರಣ ಪ್ರತಿಭೆ ಹಾಗೂ ಮನುಷ್ಯ ಸಹಜ ಭಾವನೆಗಳ ನಡುವಿನ ಸುಂದರ ಪಯಣ. ತಮಿಳು ಇತಿಹಾಸಕಾರ ಎ.ಆರ್. ವೆಂಕಟಾಚಲಪತಿ ಅವರಂತಹ ವಿಮರ್ಶಕರು ಈ...

ಒಂದು ಬದಿ ಅಧಿಕಾರ ನಿರಾಕರಣೆ, ಮತ್ತೊಂದು ಬದಿ ಕರ್ತವ್ಯದ...

ಸೋನಿಯಾ ಗಾಂಧಿ ಅವರ ಈ ಆತ್ಮಕಥೆಯ ಆಯ್ದ ಭಾಗಗಳು ಕೇವಲ ರಾಜಕೀಯ ಇತಿಹಾಸದ ದಾಖಲೆಯಷ್ಟೇ ಅಲ್ಲ, ಬದಲಿಗೆ ಮನುಷ್ಯನ ಮನಸ್ಸಿನ ಆಳದ ಸಂವೇದನೆಗಳ ಕನ್ನಡಿ. ಅಧಿಕಾರ ಸಿಕ್ಕ ಕೂಡಲೇ ಅದನ್ನು ಬಾಚಿಕೊಳ್ಳಲು ಹಾತೊರೆಯುವ...

ನೌಕರರ ಸಮಸ್ಯೆಗಳನ್ನು ಆಲಿಸಿದ ಸಚಿವ ಮಧು ಬಂಗಾರಪ್ಪ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ಧಾರವಾಡ ವಿಭಾಗದ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರಿಗೂ ರಾಜ್ಯ ಘಟಕದ ವತಿಯಿಂದ ಅನುದಾನಿತ ನೌಕರರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ಹಿರೇಕುರಬರ, ರಾಜ್ಯ ಸಂಘಟನಾ ಕಾರ್ಯದರ್ಶಿ ವಿಜಯಕುಮಾರ ವಪ್ಪಾರಿ, ಜಿಲ್ಲಾಧ್ಯಕ್ಷ ಗಿರೀಶ್ ಬಿರಾದಾರ, ತಾಲೂಕು ಅಧ್ಯಕ್ಷರು, ರಾಜ್ಯ ಸಂಘಟನಾ ಕಾರ್ಯದರ್ಶಿ ಆನಂದ ಕುಲಕರ್ಣಿ, ಎಸ್‌ಸಿಎಸ್‌ಟಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಎಚ್. ನಡಗಿರಿ, ಜಗಜ್ಯೋತಿ ಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಲ್.ಬಿ. ಪಾಟೀಲ, ತಾಲೂಕು ಪ್ರಧಾನ ಕಾರ್ಯದರ್ಶಿ ಬಿ.ಎನ್. ಕಾಳಿ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಸಿಯೂಟಕ್ಕೂ ಖಾಸಗೀಕರಣದ ಬಿಸಿ! ಕೆಲಸ ಕಸಿಯುವ ಹುನ್ನಾರ ವಿರೋಧಿಸಿ ಪ್ರತಿಭಟನೆ

ಬಿಸಿಯೂಟ ತಯಾರಕ ಮಹಿಳೆಯರನ್ನು ಕೆಲಸದಿಂದ ವಜಾಗೊಳಿಸಿ, ಎನ್‌ಜಿಓ ಖಾಸಗಿ ಸಂಘ ಸಂಸ್ಥೆಗಳಿಗೆ...

ಧಾರವಾಡ | ಮಹನೀಯರ ಆದರ್ಶಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು: ಡಾ. ಬಿ.ಎಸ್. ಮಾಳವಾಡ

"ಕೆಎಲ್ಇ ಸಂಸ್ಥೆಯನ್ನು ಕಟ್ಟಿ ಬೆಳೆಸಲು ಅನೇಕ ಮಹನೀಯರು ಶ್ರಮಿಸಿದ್ದಾರೆ. ಅಂತಹ ಮಹನೀಯರ...

ಧಾರವಾಡ | ತಂದೆ-ತಾಯಿ, ಶಿಕ್ಷಕರನ್ನು ಗೌರವದಿಂದ ಕಾಣಬೇಕು: ಅಧ್ಯಕ್ಷ ಗೋಪಾಲ್ ದೊಡ್ಡಮನಿ

"ಮಕ್ಕಳಾದವರು ತಂದೆ-ತಾಯಿ ಹಾಗೂ ಶಿಕ್ಷಕರನ್ನು ಗೌರವದಿಂದ ಕಾಣಬೇಕು. ಉತ್ತಮ ಶಿಕ್ಷಣ ಪಡೆದು...

ರಾಯಚೂರು | ದೇವಸುಗೂರಿನಲ್ಲಿ ಶಾಸಕ ಬಸನಗೌಡ ದದ್ದಲ್ ನೇತೃತ್ವದಲ್ಲಿ ಪ್ರಜಾ ಸೇವೆ ಕಾರ್ಯಕ್ರಮ

ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರ ನೇತೃತ್ವದಲ್ಲಿ ಜನರ ಮನೆಬಾಗಿಲಿಗೆ ಆಡಳಿತವನ್ನು...