ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳನ್ನು ಪ್ರೋತ್ಸಾಹಿಸುವುದಕ್ಕಾಗಿ 2026-27ನೇ ಸಾಲಿನ ಶೈಕ್ಷಣಿಕ ಧನಸಹಾಯಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಡಿಸೆಂಬರ್ 31ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆ.
ಕಾರ್ಮಿಕ ಇಲಾಖೆ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದು, “ಪ್ರಸ್ತುತ ಸ್ನಾತಕೋತ್ತರ, ಪದವಿ, ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿರುವ ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಈ ಯೋಜನೆಯಡಿ ಸೌಲಭ್ಯ ಪಡೆಯಲು ಕೆಲವು ಪ್ರಮುಖ ಆರ್ಹತೆಗಳನ್ನು ನಿಗದಿಪಡಿಸಲಾಗಿದ್ದು, ಅರ್ಜಿ ಸಲ್ಲಿಸುವ ಕಾರ್ಮಿಕ ಪೋಷಕರ ಮಾಸಿಕ ವೇತನವು 35,000 ರೂ. ಮೀರಿರಬಾರದು. ಇದರೊಂದಿಗೆ ಒಂದೇ ಕುಟುಂಬದ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಶೈಕ್ಷಣಿಕ ಧನಸಹಾಯ ಲಭ್ಯವಿರಲಿದ್ದು, ಸಾಮಾನ್ಯ ವರ್ಗದ ವಿದ್ಯಾರ್ಥಿ ಶೇ.50ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಾಗಿದ್ದರೆ ಶೇ.45ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರುವುದು ಕಡ್ಡಾಯವಾಗಿದೆ” ಎಂದು ತಿಳಿಸಿದ್ದಾರೆ.
ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ www.klwbapps.ka rnataka.gov.in ಮೂಲಕ ಆನ್‌ಲೈನ್‌ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯುವಜನರಿಗಾಗಿ ನಾಯಕತ್ವ ಮತ್ತು ಸಾಮಾಜಿಕ ನ್ಯಾಯ ಕುರಿತ ಕಾರ್ಯಾಗಾರ
ಈ ಪ್ರೋತ್ಸಾಹ ಧನ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಬೆಂಗಳೂರಿನ ಯಶವಂತಪುರದ ಮತ್ತಿಕೆರೆ ಮುಖ್ಯರಸ್ತೆಯಲ್ಲಿರುವ ಕಾರ್ಮಿಕ ಕಲ್ಯಾಣ ಭವನದ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಕಚೇರಿಗೆ ಖುದ್ದಾಗಿ ಭೇಟಿ ನೀಡಬಹುದು. ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆಗಳಾದ 080-23475188, 8277291175, 8277120505, 9141585402 5 9141602562ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ಕೋರಿದ್ದಾರೆ.




