ವಿಜಯಪುರ | ವೃತ್ತಿಪರ ಕ್ರೀಡಾಪಟುಗಳಾಗಲು ಯುವಕರಿಗೆ ಪ್ರೋತ್ಸಾಹ: ಸುನಿಲ್‌ ಗೌಡ ಪಾಟೀಲ

Date:

ವೃತ್ತಿಪರ ಕ್ರೀಡಾಪಟುಗಳಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಯುವಕರಿಗೆ ಅಗತ್ಯ ಪ್ರೋತ್ಸಾಹ ಮತ್ತು ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನಿಲ್ ಗೌಡ ಪಾಟೀಲ ಹೇಳಿದರು.

- Advertisement -

ಬಬಲೇಶ್ವರದಲ್ಲಿ ದಿ. ಬಿ.ಎಂ ಪಾಟೀಲ ಸ್ಮರಣಾರ್ಥ ಶಾಂತವೀರ ಕ್ರಿಕೆಟ್ ಕ್ಲಬ್ ಹಾಗೂ ಸುನಿಲ್ ಗೌಡ ಪಾಟೀಲ್ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಬಬಲೇಶ್ವರ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-2 ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಯುವಕರು ದೇಶದ ಅಮೂಲ್ಯ ಸಂಪತ್ತಾಗಿದ್ದು, ಅವರನ್ನು ದೈಹಿಕ ಹಾಗೂ ಮಾನಸಿಕವಾಗಿ ಸದೃಢರನ್ನಾಗಿ ರೂಪಿಸುವಲ್ಲಿ ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಬಬಲೇಶ್ವರ ಪ್ರೀಮಿಯರ್ ಲೀಗ್ ಸೇರಿದಂತೆ ವಿವಿಧ ಕ್ರೀಡಾಕೂಟಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ. ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಮೂಲಕ ಬಾಲ್ಯದಿಂದಲೇ ಕ್ರಿಕೆಟ್, ಫುಟ್ಬಾಲ್, ಹಾಕಿ, ಬಾಸ್ಕೆಟ್‌ಬಾಲ್, ಟೆನಿಕಾಯ್ಟ್, ಬ್ಯಾಡ್ಮಿಂಟನ್, ಟೆನಿಸ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಗುಣಮಟ್ಟದ ತರಬೇತಿ ನೀಡಲಾಗುತ್ತಿದ್ದು, ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವ ಕಾರ್ಯ ನಡೆಯುತ್ತಿದೆ ಎಂದರು.

ಸಚಿವ ಎಂ.ಬಿ. ಪಾಟೀಲ ಅವರ ನೀರಾವರಿ ಯೋಜನೆಗಳಿಂದ ಕೃಷಿ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಿದ್ದು, ಯುವಕರು ತೋಟಗಾರಿಕೆ, ಹೈನುಗಾರಿಕೆ ಸೇರಿದಂತೆ ವಿವಿಧ ಸ್ವಯಂ ಉದ್ಯೋಗಗಳಲ್ಲಿ ತೊಡಗಿ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಯುವಶಕ್ತಿಯನ್ನು ಇನ್ನಷ್ಟು ಸಂಘಟಿಸುವ ಉದ್ದೇಶದಿಂದ ಹೊಸ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

ಜಿ.ಪಂ ಮಾಜಿ ಅಧ್ಯಕ್ಷ ಎಸ್.ವಿ. ಪಾಟೀಲ ಮಾತನಾಡಿ, “ಯುವಕರು ವ್ಯಸನಮುಕ್ತರಾಗಿ ಆರೋಗ್ಯವಂತ ಜೀವನ ನಡೆಸುವಂತೆ ಸುನಿಲ್ ಗೌಡ ಪಾಟೀಲ ನಿರಂತರವಾಗಿ ಪ್ರೋತ್ಸಾಹಿಸುತ್ತಿದ್ದು, ಸಮಾಜಮುಖಿ ಚಟುವಟಿಕೆಗಳತ್ತ ಯುವಕರನ್ನು ಸೆಳೆಯುವ ಕಾರ್ಯ ಮಾಡುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರುದ್ರಯ್ಯ ನಂದಿಕೋಲಮಠ ಸ್ವಾಮೀಜಿ, ಈರನಗೌಡ ಬಿರಾದಾರ, ಸಚಿನ್‌ ಕಲಾವಂತ, ಡಾ. ಮಹಾಂತೇಶ ಕನ್ನೂರ್, ಪ್ರಕಾಶ ಜಾಲಗೇರಿ, ಚನ್ನಬಸಪ್ಪ ಕೋಟ್ಯಾಳ, ಸಿದರಾಯ ಆಡಿನ್, ಪರಶುರಾಮ ಪಡಗಾರ, ಹಣಮಂತ ಬಡಚಿ, ರಾಜಗುರು ಉಳ್ಳಾಗಡ್ಡಿ, ಸಂತೋಷ ರಾಂಪುರ, ರಾಜೇಶ ತಂಬಾಕೆ, ಸುನಿಲ್‌ ಸಿಂಗಾಡೆ, ಅಕ್ಷಯ ಮೆಡೆಗಾತ, ಹೇಮಂತ ಭೋವಿ, ಸದ್ದಾಂ ಮುಜಾವರ, ನವೀನ ಇಮನದ, ಬಸವರಾಜ ಲೋಕುರಿ, ಸಿಪಿಐ ರಮೇಶ ಅವಜಿ, ಪಿಎಸ್‌ಐ ಬಸವರಾಜ ಬಿ. ಮಳೆಪ್ಪನವರ, ವಿವಿಧ ತಂಡಗಳ ಆಟಗಾರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂದ್ಯಾವಳಿ ಫಲಿತಾಂಶ

ಬಬಲೇಶ್ವರ ಪ್ರೀಮಿಯರ್ ಲೀಗ್ ಸೀಸನ್-2ರಲ್ಲಿ ಗೇಮ್ ಚೇಂಜರ್ ಜೈನಾಪುರ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಶಾಂತವೀರ ಕ್ರಿಕೆಟ್ ಕ್ಲಬ್, ಬಬಲೇಶ್ವರ ರನ್ನರ್-ಅಪ್ ಪ್ರಶಸ್ತಿ ಪಡೆದುಕೊಂಡರೆ, ಪಾಟೀಲ ಪ್ಯಾಂಥರ್ಸ್ ಹಳ್ಳಿ ತೃತೀಯ ಹಾಗೂ ಮಂಗಳೂರು ಟೈಟನ್ಸ್ ನಾಲ್ಕನೇ ಸ್ಥಾನ ಪಡೆದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...