ವಿಜಯಪುರ | ಭೋವಿ ಸಮುದಾಯಕ್ಕೆ ಸರ್ಕಾರಿ ಯೋಜನೆಗಳ ಸೌಲಭ್ಯ ಸಕಾಲಕ್ಕೆ ತಲುಪಿಸಿ: ಡಾ. ರಾಮಪ್ಪ ಎಂ

Date:

ಭೋವಿ ಜನರ ಅಭ್ಯುದಯ ಹಾಗೂ ಅನುಕೂಲಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ದೊರಕಿಸಿಕೊಡಬೇಕು ಎಂದು ವಿಜಯಪುರ ಜಿಲ್ಲೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಮಪ್ಪ ಎಂ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿ, “ಅಧಿಕೃತ ದಾಖಲೆಗಳ ಆಧಾರದ ಮೇಲೆ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಅಧಿಕಾರಿಗಳು ಸೂಕ್ತ ಗಮನಹರಿಸಬೇಕು. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಭೋವಿ ಸಮುದಾಯದ ಜನರಿಗೆ ಸ್ವಯಂ ಉದ್ಯೋಗ ನೇರ ಸಾಲ, ಕುರಿ-ಮೇಕೆ ಸಾಕಾಣಿಕೆ, ಉದ್ಯಮಶೀಲತಾ ಅಭಿವೃದ್ಧಿ, ಹೈನುಗಾರಿಕೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಕಿರುಸಾಲ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸಬೇಕು. ಯಾವುದೇ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮಾಡದೆ ನಿಗದಿತ ಅವಧಿಯಲ್ಲಿಯೇ ಭೌತಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.

“ಅರ್ಹ ಫಲಾನುಭವಿಗಳ ಸಾಲದ ಅರ್ಜಿಗಳನ್ನು ಬ್ಯಾಂಕ್‌ಗಳಲ್ಲಿ ಅನಗತ್ಯವಾಗಿ ಬಾಕಿ ಇರಿಸಿಕೊಳ್ಳಬಾರದು. ದಾಖಲೆಗಳನ್ನು ಪರಿಶೀಲಿಸಿ, ಸಿಬಿಲ್ ಸ್ಕೋರ್ ಹಾಗೂ ಶ್ಯೂರಿಟಿ ವಿಚಾರದಲ್ಲಿ ಅನಗತ್ಯ ತೊಂದರೆ ನೀಡದೆ ಅರ್ಹರಿಗೆ ಸಾಲ ಸೌಲಭ್ಯ ದೊರಕುವಂತೆ ಕ್ರಮವಹಿಸಬೇಕು. ಈ ಕುರಿತು ಲೀಡ್ ಬ್ಯಾಂಕ್ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು” ಎಂದು ಹೇಳಿದರು.

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸೌಲಭ್ಯ ದೊರಕಿಸಿಕೊಡಬೇಕು. ಭೋವಿ ಸಮುದಾಯದವರು ತಮ್ಮ ಕುಲ ಕಸುಬು ನಡೆಸುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯಿಂದ ಅನಗತ್ಯ ತೊಂದರೆ ಉಂಟಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಈ ರೀತಿಯ ಸಮಸ್ಯೆಗಳು ಎದುರಾಗದಂತೆ ಕ್ರಮವಹಿಸುವುದರ ಜೊತೆಗೆ ಪೊಲೀಸ್ ಇಲಾಖೆಯೂ ಅಗತ್ಯ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಭೋವಿ ಸಮುದಾಯವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಮುನ್ನಡೆಯಲು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸಮುದಾಯದ ಮಕ್ಕಳು ವಿದ್ಯಾವಂತರಾಗುವಂತೆ ಪಾಲಕರು ಪ್ರೋತ್ಸಾಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಸಂಗ್ರಹಿಸಿ, ಅವರು ಮತ್ತೆ ಶಿಕ್ಷಣ ಮುಂದುವರಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪಾಲಕರು ಕ್ರಮವಹಿಸಬೇಕು. ಯಾವುದೇ ಮಗು ಶಾಲೆಯಿಂದ ದೂರ ಉಳಿಯದಂತೆ ನೋಡಿಕೊಳ್ಳಬೇಕು ಎಂದು ಡಾ. ರಾಮಪ್ಪ ಎಂ. ಹೇಳಿದರು.

ಸಭೆಯಲ್ಲಿ ನಿಗಮದ ಅಧ್ಯಕ್ಷರು ಭೋವಿ ಸಮಾಜದ ಮುಖಂಡರು ಹಾಗೂ ಸಮುದಾಯದ ಜನರೊಂದಿಗೆ ಸಂವಾದ ನಡೆಸಿ, ಅವರ ಅಹವಾಲುಗಳನ್ನು ಆಲಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ, ಡಿವೈಎಸ್ಪಿ ನಾಗರಾಜ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ರಾಜ್ಯ ಕಚೇರಿಯ ಜಿಎಂ ಶಿವಸ್ವಾಮಿ, ಜಿಲ್ಲಾ ವ್ಯವಸ್ಥಾಪಕ ಸಂಗನಗೌಡ ಎಂ. ಪಾಟೀಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿನಾಥ ಕುಸನಾಳ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಚಂದ್ರಶೇಖರ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಬಿ. ಸಿದ್ದಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆ: ಜಿಲ್ಲೆಗಳಲ್ಲಿ  ಶೇ.75.62 ರಷ್ಟು ಮತದಾನ

"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು...

ಬೀದರ್ | ಅ.27, 28ರಂದು ಅಖಿಲ ಕರ್ನಾಟಕ 23ನೇ ಹಸ್ತಪ್ರತಿ ಸಮ್ಮೇಳನ

ಹಸ್ತಪ್ರತಿಶಾಸ್ತ್ರ ವಿಭಾಗ, ಕನ್ನಡ ವಿಶ್ವವಿದ್ಯಾಲಯ ಹಂಪಿ ಕರ್ನಾಟಕ ಕಲಾ, ವಿಜ್ಞಾನ ಮತ್ತು...

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...