ವಿಜಯಪುರ | ರಾಜ್ಯಾದ್ಯಂತ 10 ಸಾವಿರ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ

Date:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭಾರತ್ ಜೋಡೋ ಯುವ ಸಂಘಗಳನ್ನು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ಥಾಪಿಸುವ ಮೂಲಕ ಯುವಜನರಲ್ಲಿ ಕ್ರೀಡೆ, ಫಿಟ್‌ನೆಸ್, ಆರೋಗ್ಯಕರ ಜೀವನಶೈಲಿ ಹಾಗೂ ನಾಯಕತ್ವದ ಅವಕಾಶಗಳನ್ನು ಉತ್ತೇಜಿಸುವ ಉದ್ದೇಶ ಹೊಂದಲಾಗಿದೆ.

- Advertisement -

ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 6,000 ಜನಸಂಖ್ಯೆಗೆ ಒಂದು ಸಂಘ, ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಸರಾಸರಿ 4,000 ಜನಸಂಖ್ಯೆಗೆ ಒಂದು ಸಂಘ ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ, ಪ್ರತಿ ಪಟ್ಟಣ ಪಂಚಾಯಿತಿ (ಟಿ.ಪಿ.) ವ್ಯಾಪ್ತಿಯಲ್ಲಿ ಸರಾಸರಿ 4,000 ಜನಸಂಖ್ಯೆಗೆ, ಪಟ್ಟಣ ಪುರಸಭೆ (ಟಿ.ಎಂ.ಸಿ.) ವ್ಯಾಪ್ತಿಯಲ್ಲಿ 6,000 ಜನಸಂಖ್ಯೆಗೆ, ನಗರಸಭೆ (ಸಿ.ಎಂ.ಸಿ.) ವ್ಯಾಪ್ತಿಯಲ್ಲಿ 8,000 ಜನಸಂಖ್ಯೆಗೆ ಹಾಗೂ ಮಹಾನಗರ ಪಾಲಿಕೆ ಮತ್ತು ಜಿ.ಬಿ.ಎ. ವ್ಯಾಪ್ತಿಯಲ್ಲಿ ಸರಾಸರಿ 10,000 ಜನಸಂಖ್ಯೆಗೆ ಒಂದು ಭಾರತ್ ಜೋಡೋ ಯುವ ಸಂಘ ಸ್ಥಾಪಿಸಲು ಅವಕಾಶವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜಿಲ್ಲೆಯಾದ್ಯಂತ ಒಟ್ಟು 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದ್ದು, ಈ ಸಂಘಗಳ ಮೂಲಕ 50 ಲಕ್ಷಕ್ಕೂ ಅಧಿಕ ಯುವಜನರನ್ನು ಸಂಘಟಿಸುವ ಉದ್ದೇಶ ಹೊಂದಲಾಗಿದೆ. ಯುವಜನರಲ್ಲಿ ಕ್ರೀಡಾಸಕ್ತಿ ಬೆಳೆಸುವುದು, ದೈಹಿಕ ಕ್ಷಮತೆ ಹಾಗೂ ಆರೋಗ್ಯಕರ ಜೀವನಶೈಲಿಗೆ ಉತ್ತೇಜನ ನೀಡುವುದು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಲು ಸೂಕ್ತ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶಗಳಾಗಿವೆ.

ಪ್ರತಿ ಭಾರತ್ ಜೋಡೋ ಯುವ ಸಂಘಕ್ಕೆ ರೂ. 10 ಲಕ್ಷಗಳ ಅನುದಾನ ಒದಗಿಸಲಾಗುವುದು. 16ರಿಂದ 35 ವರ್ಷದೊಳಗಿನ ಆಸಕ್ತ ಯುವಕ-ಯುವತಿಯರು ಸಂಘದ ಸದಸ್ಯತ್ವ ಪಡೆಯಬಹುದಾಗಿದೆ. ಸದಸ್ಯತ್ವ ಪಡೆಯಲು ಆಸಕ್ತರು bjys.karnataka.gov.in ಪೋರ್ಟಲ್ ಮೂಲಕ ಆಧಾರ್ ಕಾರ್ಡ್‌ನೊಂದಿಗೆ ಮೊಬೈಲ್ ಆ್ಯಪ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಮುಖ್ಯಾಧಿಕಾರಿಗಳು, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು/ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ಇವರನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...