ವಿಜಯಪುರ | ಪಾರ್ಶ್ವವಾಯು ಸಂಭವಿಸಿದರೆ ಪ್ರತಿ ನಿಮಿಷವೂ ಅಮೂಲ್ಯ: ತಕ್ಷಣ ಚಿಕಿತ್ಸೆ ಪಡೆಯಲು ಡಾ. ಶಿವಾನಂದ ಮಾಸ್ತಿಹೋಳಿ ಸಲಹೆ

Date:

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸುವುದರಿಂದ ಸಂಭವನೀಯ ಅಂಗವೈಕಲ್ಯ ಹಾಗೂ ಜೀವಹಾನಿಯನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೋಳಿ ಹೇಳಿದರು.

- Advertisement -

ವಿಜಯಪುರ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರ ಕಾರ್ಯಾಲಯದ ವತಿಯಿಂದ ಶುಕ್ರವಾರ ‘ಪ್ರತಿ ನಿಮಿಷವೂ ಅತ್ಯಮೂಲ್ಯ’ ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಿದ್ದ ವಿಶ್ವ ಪಾರ್ಶ್ವವಾಯು ದಿನಾಚರಣೆ ಹಾಗೂ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಪ್ರತಿ ವರ್ಷ ಅಕ್ಟೋಬರ್ 29ರಂದು ವಿಶ್ವ ಪಾರ್ಶ್ವವಾಯು ದಿನ ಆಚರಿಸುವ ಮೂಲಕ ಮೆದುಳಿನ ಆಘಾತದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಪಾರ್ಶ್ವವಾಯು ಯಾರಿಗಾದರೂ, ಯಾವುದೇ ಸಮಯದಲ್ಲಿ ಸಂಭವಿಸಬಹುದು. ಆದರೆ ಸೂಕ್ತ ಮುನ್ನೆಚ್ಚರಿಕೆ ಹಾಗೂ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವ ಮೂಲಕ ಇದರ ಅಪಾಯವನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದರು.

ವಿಶೇಷವಾಗಿ ಮಧುಮೇಹ, ಅಧಿಕ ರಕ್ತದೊತ್ತಡ ಹೊಂದಿರುವವರು ಹಾಗೂ ವೃದ್ಧರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ನಿಯಮಿತ ವ್ಯಾಯಾಮ, ಸಮತೋಲನ ಆಹಾರ ಸೇವನೆ ಹಾಗೂ ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಅರ್ಚನಾ ಕುಲಕರ್ಣಿ ಮಾತನಾಡಿ, ಮೆದುಳಿನ ಭಾಗಕ್ಕೆ ರಕ್ತದ ಮೂಲಕ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ ಉಂಟಾದಾಗ ಪಾರ್ಶ್ವವಾಯು ಸಂಭವಿಸುತ್ತದೆ. ಜಿಲ್ಲಾ ಆಸ್ಪತ್ರೆಯಲ್ಲಿ ಪಾರ್ಶ್ವವಾಯು ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆ ಸೌಲಭ್ಯ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ನರರೋಗ ತಜ್ಞ ಡಾ. ವಿರುಪಾಕ್ಷಪ್ಪ ಬಿರಾದಾರ ವಿಷಯ ಮಂಡಿಸಿ, ಜಾಗತಿಕವಾಗಿ ಸಾವಿಗೆ ಕಾರಣವಾಗುವ ಪ್ರಮುಖ ಕಾಯಿಲೆಗಳಲ್ಲಿ ಪಾರ್ಶ್ವವಾಯು ಕೂಡ ಒಂದಾಗಿದೆ. ಪಾರ್ಶ್ವವಾಯು ಸಂಭವಿಸಿದಾಗ ವಿಳಂಬ ಮಾಡದೆ ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವುದು ಅತ್ಯಗತ್ಯ. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆತರೆ ಗಂಭೀರ ಪರಿಣಾಮಗಳು ಹಾಗೂ ಅಂಗವೈಕಲ್ಯವನ್ನು ಕಡಿಮೆ ಮಾಡಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ. ಮಹೇಶ ಮೋರೆ, ರೇಡಿಯಾಲಜಿಸ್ಟ್ ಡಾ. ಪರಶುರಾಮ ದೇವಮಾನೆ, ಮನೋರೋಗ ತಜ್ಞ ಡಾ. ಮಂಜುನಾಥ ಮಸಳಿ, ಆಸ್ಪತ್ರೆಯ ವೈದ್ಯರು, ಶುಶ್ರೂಷಾಧೀಕ್ಷಕರು, ಬ್ರೈನ್ ಹೆಲ್ತ್ ಕ್ಲಿನಿಕ್ ಸಿಬ್ಬಂದಿ, ಐ.ಇ.ಸಿ. ವಿಭಾಗದ ಅಧಿಕಾರಿಗಳು ಹಾಗೂ ಶುಶ್ರೂಷಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಸಕಾಲಕ್ಕೆ ಸರ್ಕಾರಿ ಬಸ್ ಕಲ್ಪಿಸುವಂತೆ ಗ್ರಾಮಸ್ಥರ ಆಗ್ರಹ

ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸದೆ ಇರುವುದರಿಂದ ವಿದ್ಯಾರ್ಥಿಗಳು,...

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಕಬ್ಬು ಬೆಳೆಗಾರರು ಮುತ್ತಿಗೆ

ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ...

ಕೊಡಗು ಅಭಿವೃದ್ಧಿ ವಿಚಾರಗಳ ಕುರಿತು ಯುವ ಸಂಸತ್‌ನಲ್ಲಿ ಚರ್ಚೆ

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಕ್ಷೇತ್ರಕ್ಕೆ ಎದುರಾಗಿರುವ ಹಿನ್ನಡೆ, ಮಾನವ-ವನ್ಯಜೀವಿ...