ವಿಜಯಪುರ | ಖರ್ಗೆ ಭಾಷಣ ಮಾಡಿದ ಸ್ಥಳ ಸ್ವಚ್ಛಗೊಳಿಸಿದವರ ಗಡಿಪಾರು ಮಾಡಿ: ದಸಂಸ ಆಗ್ರಹ

Date:

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಿದ ಸ್ಥಳವನ್ನು ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಕಾರ್ಯಕರ್ತರು ಸ್ವಚ್ಛಗೊಳಿಸಿದ್ದಾರೆ ಎನ್ನಲಾದ ಘಟನೆ ಖಂಡಿಸಿ, ಕಿಡಿಗೇಡಿಗಳನ್ನು ಕೂಡಲೇ ದೇಶದಿಂದ ಗಡಿಪಾರು ಮಾಡಬೇಕು ಎಂದು ವಿಜಕಯಪುರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಆಗ್ರಹಿಸಿದೆ.

- Advertisement -

ಈ ಕುರಿತು ಸಂಘಟನೆಯ ವಿಜಯಪುರ ಜಿಲ್ಲಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಬೆಳಗಾವಿ ವಿಭಾಗೀಯ ಸಂಚಾಲಕ ಸಂಜು ವೈ. ಕಂಬಾಗಿ ಮಾತನಾಡಿ, “ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಸ್ಥಳವನ್ನು ರಾಜಕೀಯ ಕಾರಣಕ್ಕಾಗಿ ಸ್ವಚ್ಛಗೊಳಿಸಿರುವುದು ಖಂಡನೀಯ. ಇದು ಸಂವಿಧಾನ ನೀಡಿರುವ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳಿಗೆ ಧಕ್ಕೆ ತರುವಂತಹ ಕೃತ್ಯವಾಗಿದೆ” ಎಂದು ಆರೋಪಿಸಿದರು.

“ಡಾ. ಬಿ.ಆರ್ ಅಂಬೇಡ್ಕರ್ ಮನುವಾದಿ ವ್ಯವಸ್ಥೆಯ ವಿರುದ್ಧ ಹೋರಾಡಿ, ಸಮಾನತೆ ಮತ್ತು ಮಾನವ ಘನತೆಯ ಸಂದೇಶ ಸಾರಿದರು. ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಿದ್ದಾರೆ. ಇಂತಹ ಸಂದರ್ಭದಲ್ಲಿ ದೇಶದ ಪ್ರಮುಖ ರಾಜಕೀಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮಾತನಾಡಿದ ಸ್ಥಳವನ್ನು ಅವಮಾನಿಸುವ ರೀತಿಯಲ್ಲಿ ವರ್ತಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದರು.

“ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಸಂವಿಧಾನಬದ್ಧ ಹುದ್ದೆ ಹಾಗೂ ವ್ಯಕ್ತಿಯ ಘನತೆಗೆ ಗೌರವ ನೀಡಬೇಕು. ಇಂತಹ ಕೃತ್ಯಗಳು ಸಮಾಜದಲ್ಲಿ ವೈಷಮ್ಯಕ್ಕೆ ಕಾರಣವಾಗದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆಗೆ ಕಾರಣರಾದವರನ್ನು ಗುರುತಿಸಿ ಕಾನೂನು ಕ್ರಮ ಜರುಗಿಸುವುದರ ಜತೆಗೆ, ಅವರನ್ನು ದೇಶದಿಂದ ಗಡಿಪಾರು ಮಾಡಬೇಕು” ಎಂದು ಅವರು ಒತ್ತಾಯಿಸಿದರು.

ಜಿಲ್ಲಾ ಸಂಚಾಲಕರಾದ ಶಿವು ಮೇಲಿಮನಿ, ಸವಿತಾ ವಗ್ಗರ, ಚೇತನ ತೊರವಿ, ಮಹಾಂತೇಶ ರಾಠೋಡ, ಸಂಗಮೇಶ ಇರಸೂರ, ಶಶಿಧರ ನಾಲ್ನೋಡಿ, ಬಸೀರ ತಾಂಬೋಳಿ, ರಾಜು ಮೇತ್ರಿ, ಸುಭಾಸ ಹೊನ್ನಕಂಠಿ, ಸಿದ್ದು ಕಾಂಬಳೆ, ಸುನಂದಾ ದೊಡ್ಡಮನಿ, ಸಾಯಬಣ್ಣ ದಳಪತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...