ವಿಜಯಪುರ | ಬಸ್ ನಿಲ್ದಾಣಗಳ ಸಾರ್ವಜನಿಕ ಶೌಚಾಲಯದಲ್ಲಿ ಸುಲಿಗೆ: ಕ್ರಮಕ್ಕೆ ಕರವೇ ಆಗ್ರಹ

Date:

ವಿಜಯಪುರ ವಿಭಾಗದ ಕೇಂದ್ರ ಮತ್ತು ತಾಲೂಕು ಬಸ್ ನಿಲ್ದಾಣಗಳ ಸಾರ್ವಜನಿಕ ಶೌಚಾಲಯ ಹಾಗೂ ಮೂತ್ರಾಲಯಗಳಲ್ಲಿ ಸಾರ್ವಜನಿಕರಿಂದ ನಿಗದಿತ ದರಕ್ಕಿಂತ ಹೆಚ್ಚಿನ ಹಣ ಸುಲಿಗೆ ಮಾಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಬಸವರಾಜ ತಾಳಿಕೋಟಿ ಮಾತನಾಡಿ, “ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ಜಿಲ್ಲೆ ಮತ್ತು ತಾಲೂಕಾದ್ಯಂತ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಶೌಚಾಲಯಗಳಲ್ಲಿ ಗುತ್ತಿಗೆದಾರರು ನಿಗದಿತ ದರಕ್ಕಿಂತ ಹೆಚ್ಚಿನ ಹಣ ಸುಲಿಗೆ ಮಾಡುತ್ತಿರುವ ಕುರಿತು ವಿಭಾಗಿಯ ಕಚೇರಿಯಲ್ಲಿ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಅಲ್ಲದೆ ಘಟಕಗಳಿಗೂ ಕೂಡ ಲಿಖಿತವಾಗಿ ತಿಳಿಸಲಾಗಿತ್ತು. ಸಾಕಷ್ಟು ಮಾಧ್ಯಮ ಪತ್ರಿಕೆಗಳಲ್ಲಿ ಸುದ್ದಿಯಾಗಿದ್ದರೂ ಮೇಲಾಧಿಕಾರಿಗಳ ಗಮನಕ್ಕೆ ಈ ವಿಷಯದ ಕುರಿತು ಮಾಹಿತಿ ಇದ್ದರೂ ಕೂಡ ನಿರಂತರವಾಗಿ ಸಾರ್ವಜನಿಕರಿಂದ ಶೌಚಾಲಯ ಮತ್ತು ಮೂತ್ರಾಲಯಗಳಲ್ಲಿ ಗುತ್ತಿಗೆದಾರರು ಹೆಚ್ಚಿನ ಹಣ ಸುಲಿಗೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಮೌಖಿಕವಾಗಿಯೂ ಮತ್ತು ಲಿಖಿತವಾಗಿಯೂ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದರೂ ಕೂಡ ಮೇಲಧಿಕಾರಿಗಳ ಕುಮ್ಮಕ್ಕಿನಿಂದ ಗುತ್ತಿಗೆದಾರರು ಹೆಚ್ಚಿನ ಹಣ ಅಂದರೆ ತಲಾ ಒಬ್ಬರಿಗೆ ಶೌಚಕ್ಕೆ ₹10 ಮತ್ತು ಮೂತ್ರಕ್ಕೆ ಮಹಿಳೆಯರಿಂದ ₹10 ಸುಲಿಗೆ ಮಾಡುತ್ತಿರುತ್ತಾರೆ. ಸಂಸ್ಥೆಗಳ ನಿಯಮಾನುಸಾರ ಪ್ರಕಾರ ಶೌಚಕ್ಕೆ ₹2 ಮತ್ತು ಮೂತ್ರಕ್ಕೆ ಉಚಿತವಾಗಿರುತ್ತದೆಂದು ಕರಾರು ಒಪ್ಪಂದವಿರುತ್ತದೆ. ಶೌಚಾಲಯ ಮತ್ತು ಮೂತ್ರಾಲಯಗಳ ಕಟ್ಟಡ ಮುಂಭಾಗ ದರ ನಾಮಫಲಕಗಳನ್ನೂ ಕೂಡ ಅಳವಡಿಸಿರುವುದಿಲ್ಲ. ಒಂದು ವೇಳೆ ಇದ್ದರೆ ಸಾರ್ವಜನಿಕರಿಗೆ ಕಾಣದಂತೆ ಮುಚ್ಚಲ್ಪಟ್ಟಿರುತ್ತವೆ. ಇದರಿಂದಾಗಿ ಹಿರಿಯ ನಾಗರಿಕರಿಗೆ ಮತ್ತು ಹೆಚ್ಚಿನ ಪ್ರಮಾಣದಲಿ ಮಹಿಳೆಯರ ಪ್ರಯಾಣ ಬೆಳೆಸುವುದರಿಂದ ಶೌಚಾಲಯ ಮತ್ತು ಮೂತ್ರಾಲಯಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಹಣ ಸುಲಿಗೆ ಮಾಡುವುದರಿಂದ ಸಾರ್ವಜನಿಕರಿಗೆ ತುಂಬಾ ಅನಾನುಕೂಲವಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜ್ಞಾನ ಸಂಪಾದನೆ, ಇತಿಹಾಸ ಪ್ರಜ್ಞೆ ಇರಬೇಕೆಂದರೆ ಹೆಚ್ಚೆಚ್ಚು ಓದಬೇಕು: ಚಿಂತಕ ಡಾ. ಜೆ ಎಸ್ ಪಾಟೀಲ್

ಈ ವೇಳೆ ಕಾರ್ಯಕರ್ತರಾದ ಯಲ್ಲಲಿಂಗ ಉಮರಾಣಿ, ಪರಶುರಾಮ ಸತಿಹಾಳ, ಶಶಿಕಾಂತ ಹಡಪದ, ಮಹೇಶ, ಮಯೂರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬೋಧಕರ ಕೊರತೆ: ಪಿಎಚ್‌ಡಿ ವಿದ್ಯಾರ್ಥಿನಿಯರಿಂದಲೇ ಪಿಜಿ ಪಾಠ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ (ಪಿಜಿ) ತರಗತಿಗಳಿಗೆ...

ವಿಜಯಪುರ | ಸಮಾನತೆ ಮಾತು, ಘೋಷಣೆಗೆ ಸೀಮಿತವಾಗದಿರಲಿ: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ

ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ....

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು...

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ...