ವಿಜಯಪುರ | ಪುನಃ 123 ಕೆರೆಗಳಿಗೆ ನೀರು ಭರ್ತಿ ಮಾಡಲು ರೈತ ಸಂಘ ಆಗ್ರಹ

Date:

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಜಿಲ್ಲೆಯಲ್ಲಿರುವ 124 ಕೆರೆಗಳಿಗೆ ಮತ್ತೊಮ್ಮೆ ನೀರು ಭರ್ತಿ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಜಂಟಿಯಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತೆ ಎ.ಎಂ ಜಾನಕಿ ಅವರಿಗೆ ಮನವಿ ಸಲ್ಲಿಸಿದರು.

- Advertisement -

“ಏಪ್ರಿಲ್ 28 ರವರೆಗೂ ಎಲ್ಲ ಕಾಲುವೆಗಳಿಗೆ ನೀರು ಹರಿಸಿದರೂ ಕೂಡ ಕೇವಲ ಶೇ.30ರಷ್ಟು ಮಾತ್ರ ನೀರನ್ನು ಕೆರೆಗಳಿಗೆ ಬಿಡಲಾಗಿದೆ. ಆದರೆ, ಕೆಬಿಜೆಎನ್ಎಎಲ್ ಅಧಿಕಾರಿಗಳು ಕೆರೆಗಳಿಗೆ ಶೇ.70ರಷ್ಟು ನೀರು ತುಂಬಿಸಿದ್ದೇವೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ಈ ಮಾತು ಸತ್ಯಕ್ಕೆ ದೊರವಾಗಿದೆ” ಎಂದು ಆರೋಪಿಸಿ ಇದೇ ತಿಂಗಳು 5 ರಂದು ಆಲಮಟ್ಟಿಯ ಕೆಬಿಜೆಎನ್ಎಎಲ್ ಮುಖ್ಯ ಅಭಿಯಂತರರ ಕಚೇರಿ ಮುಂದೆ ಪ್ರತಿಭಟಿಸಿ, ಜಂಟಿ ಸಂಘಟನೆಯಿಂದ ಧರಣಿ ನಡೆಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಮುಖ್ಯ ಅಭಿಯಂತರರಾದ ಡಿ.ಬಸವರಾಜ ಅವರು ಮನವಿ ಸ್ವೀಕರಿಸಿ, ಮತ್ತೆ ಕಾಲುವೆಗಳಿಗೆ ನೀರು ಹರಿಸಿ ಕೆರೆಗಳನ್ನು ಭರ್ತಿ ಮಾಡಲು ಪ್ರಾದೇಶಿಕ ಆಯುಕ್ತರ ಅನುಮತಿಗೆ ಪತ್ರ ಬರೆದಿದ್ದಾರೆ. ಆದ್ದರಿಂದ ಕೂಡಲೇ ಕಾಲುವೆಗಳಿಗೆ ನೀರು ಹರಿಸಲು ಅನುಮತಿ ನೀಡಬೇಕು” ಎಂದು ಮನವಿ ಮಾಡಿದರು.

“ಜಿಲ್ಲೆಯ ಕೆಲವೊಂದು ಭಾಗದ ಕೆರೆಗಳಿಗೆ ನೀರು ಹರಿದಿಲ್ಲ, ಈ ಬಾರಿ ಬಿಸಿಲಿನ ಪ್ರಖರತೆ ಅತಿಯಾಗಿದ್ದು, ಹಿಂದೆಂದೂ ಇಂತಹ ಬಿಸಿಲು ಕಂಡಿಲ್ಲ. ಈಗ ಕೆರೆಗಳಿಗೆ ಹರಿಸಿದ ನೀರು ಬಾಷ್ಪೀಕರಣವಾಗಿ ಬೇಗನೆ ಬರಿದಾಗುತ್ತದೆ. ಇನ್ನೂ ಒಂದು ತಿಂಗಳು ಬೇಸಿಗೆ ಇದ್ದು ಅಲ್ಲಿಯವರಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತತ್ವಾರ ಎದುರಾಗುತ್ತದೆ. ಆದ್ದರಿಂದ ತಕ್ಷಣ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಶೇ.75 ರಿಂದ 80ರಷ್ಟು ಕೆರೆಗಳನ್ನು ಭರ್ತಿ ಮಾಡಿ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಸೌಕರ್ಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ರೈತರ ಮನವಿಗೆ ಸ್ಪಂದಿಸಿದ ಪ್ರಾದೇಶಿಕ ಆಯುಕ್ತರು “ಶೀಘ್ರವೇ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು, ನೀರು ಹರಿಸಲು ಅನುಮತಿ ನೀಡಲಾಗುತ್ತದೆ” ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಜಮೀನಿಗೆ ಹೋಗುವ ರಸ್ತೆ ಸಮಸ್ಯೆ ಕುರಿತು ಮನವಿ ಸಲ್ಲಿಸಿ ಕಾನೂನು ತಿದ್ದುಪಡಿ ಮಾಡಿ ತಹಶೀಲ್ದಾರರಿಗೆ ಪೂರ್ಣ ಅಧಿಕಾರ ನೀಡಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ರೈತ ಮುಖಂಡರಾದ ಸೀತಪ್ಪ ಗಣಿ, ಶಶಿಕಾಂತ ದೇಸಾಯಿ, ಫೀರಸಾಬ ನದಾಫ್, ವೆಂಕಟೇಶ ವಡ್ಡರ, ಸಾಯಿಬಣ್ಣ ಅಂಗಡಿ, ಇಬ್ರಾಹಿಂ ವಾಲಿಕಾರ, ಲಂಕೇಶ ತಳವಾರ, ನಾಗಪ್ಪ ಬೂಧಗೋಳಿ, ಮಂಜು ಛಲವಾದಿ, ಬಸವರಾಜ ಬೋಳಿ, ಚಂದಪ್ಪ ಬೊಮ್ಮನಗಿ, ಹೊನ್ನಪ್ಪ ಕೆಂಗುತ್ತಿ, ಅರವಿಂದ ಕುಲಕರ್ಣಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಾಟಾ ಸಮೂಹ ನಾಶಕ್ಕೆ ಯತ್ನ; ಉದ್ಯಮಿಗಳ ಮೌನದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಟಾಟಾ ಸಮೂಹದಲ್ಲಿ ನಡೆಯುತ್ತಿರುವ ಆಂತರಿಕ ಬಿಕ್ಕಟ್ಟಿನ ಬೆನ್ನಲ್ಲೇ, ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ...

ನ.20ರಿಂದ ದೆಹಲಿಯಲ್ಲಿ SCO ಸಭೆ; ಹದಗೆಟ್ಟಿರುವ ಸಂಬಂಧದ ನಡುವೆಯೇ ಪಾಕ್‌ ಸಚಿವರಿಗೆ ಭಾರತದ ಆಹ್ವಾನ

ಆಪರೇಷನ್ ಸಿಂಧೂರ್ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ...

ಗದಗ | ಕೆಲಸಕ್ಕೆ ಸಿದ್ಧರಿರುವ ಕೂಲಿಕಾರರಿಗೆ ಎರಡು ದಿನದಲ್ಲಿ ಉದ್ಯೋಗ ಕಲ್ಪಿಸಿ: ಸಿಇಒ ಮುಕುಲ್ ಜೈನ್

ಗ್ರಾಮೀಣ ಭಾಗದಲ್ಲಿ ಮಾನವ ದಿನಗಳ ಸೃಜನೆ ಹೆಚ್ಚಿಸಲು ವಿಬಿ-ಜಿ ರಾಮ್-ಜಿ ಯೋಜನೆಯಡಿ...