ಪ್ರತಿನಿತ್ಯ ಸಮಯಕ್ಕೆ ಸರಿಯಾಗಿ ವಿದ್ಯುತ್ ಬಾರದೇ ರೈತರು ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ರಾತ್ರಿ ವೇಳೆಯೂ ಜಮೀನಿನಲ್ಲಿ ನೀರು ಹಾಯಿಸಲು ಹೋಗುವುದರಿಂದ, ಹಾವು-ಚೇಳುಗಳ ಭಯವೂ ಕಾಡುತ್ತಿದೆ. ಹೀಗಾಗಿ, ಬೆಳಗಿನ ವೇಳೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ರೈತಸಂಘ ಒತ್ತಾಯಿಸಿದೆ.
ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ ಕುಬಕಡ್ಡಿ ಹಾಗೂ ಕಾರ್ಯಕರ್ತರು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹಕ್ಕೊತ್ತಾಯ ಸಲ್ಲಿಸಿದ್ದಾರೆ. “ಪ್ರತಿದಿನ 7 ಗಂಟೆಗಳ ಕಾಲ 3 ಫೆಸ್ ಹಾಗೂ ತೋಟದ ಮನೆಗಳಿಗೆ ರಾತ್ರಿ 1 ಪೇಸ್ ವಿದ್ಯುತ್ ಪೂರೈಸಬೇಕು” ಎಂದು ಒತ್ತಾಯಿಸಿದರು.
ಕೋಲಾರ ತಾಲೂಕು ಅಧ್ಯಕ್ಷ ಸೋಮು ಬಿರಾದಾರ ಮಾತನಾಡಿ, “ವಿಜಯಪುರ ಜಿಲ್ಲೆಯಲ್ಲಿ ಸಮಯಕ್ಕೆ ಸರಿಯಾಗಿ ವಿದ್ಯುತ್ ಕೊಡದೇ ಮನಸಿಗೆ ಬಂದ ಹಾಗೆ ಮಾಡುತ್ತಿದ್ದಾರೆ. ಅನ್ನದಾತರ ಜೀವನದ ಜೊತೆ ಚಲ್ಲಾಟ ಆಡುತ್ತಿದ್ದಾರೆ. ವಿದ್ಯುತ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಕೊಳ್ಳಬೇಕು” ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರೇಖಾ ಪಾಟೀಲ, ವಿಜಯಲಕ್ಷ್ಮಿ ಗಾಯಕವಾಡ, ಶಶಿಕಾಂತ ಬಿರಾದಾರ, ಸಿದ್ದು ನ್ಯಾಮಗೊಂಡ, ಕಲ್ಲಪ್ಪ ಪಾರಶೆಟ್ಟಿ, ರಾಮನಗೌಡ ಪಾಟೀಲ, ಶಾನೂರ ನಂದರಗಿ, ಮಹಾದೇವಪ್ಪ ತೇಲಿ, ಅರುಣಗೌಡ ತೇರದಾಳ, ನಜೀರ ನಂದರಗಿ, ಸಂಗು ಹುಣಸಗಿ, ಹಣಮಂತ ಬ್ಯಾಡಗಿ, ಸತ್ಯಪ್ಪ ಕುಳ್ಳೊಳ್ಳಿ, ಸುಭಾಸ ಸಜ್ಜನ, ಸಂಗಪ್ಪ ಠಕ್ಕೆ ಹಾಗೂ ರೈತರು ಉಪಸ್ಥಿತರಿದ್ದರು.