ವಿಜಯಪುರ | ಸರ್ಕಾರ ವಿದ್ಯುತ್ ಖಾಸಗೀಕರಣ ಹಿಂಪಡೆಯುಂತೆ ರೈತ ಸಂಘದ ಖಡಕ್ ಎಚ್ಚರಿಕೆ

Date:

ಹೆಸ್ಕಾಂ ವಿದ್ಯುತ್ ವಿತರಣಾ ಸಂಸ್ಥೆಯನ್ನು ಖಾಸಗೀಕರಣಗೊಳಿಸಿ ಟಾಪ್ ಕವರ್ ಕಂಪೆನಿ ಲಿಮಿಟೆಡ್‌ಗೆ ಹಸ್ತಾಂತರಿಸುವ ಪ್ರಸ್ತಾವವನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿಜಯಪುರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಬಬಲೇಶ್ವರದ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ಬಬಲೇಶ್ವರ ತಹಶೀಲ್ದಾರ್ ಹಾಗೂ ಹೆಸ್ಕಾಂ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ, ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ರಾಜ್ಯದ 15 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಯ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು. ಸರ್ಕಾರ ತನ್ನ ನಿಲುವು ಬದಲಿಸದಿದ್ದಲ್ಲಿ ರಾಜ್ಯಾದ್ಯಂತ ಹೆದ್ದಾರಿ ತಡೆ ಸೇರಿದಂತೆ ತೀವ್ರ ಹೋರಾಟಗಳನ್ನು ಸಂಘಟಿಸುವ ಅನಿವಾರ್ಯತೆ ಎದುರಾಗಲಿದೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ತಾಲೂಕ ಘಟಕದ ಅಧ್ಯಕ್ಷ ಸುರೇಶ ಕಿರಸೂರ ಮಾತನಾಡಿ, “ರಾಜ್ಯದ ರೈತರು ಮೊದಲೇ ಲಾಭವಿಲ್ಲದ ಕೃಷಿಯ ಜತೆಗೆ ಬದುಕು ಸಾಗಿಸುತಿದ್ದೇವೆ. ಆದರೆ ಲಾಭದಾಯಕ ಬೆಲೆ ಸಿಕ್ಕಿಲ್ಲ. ಇನ್ನು ವಿದ್ಯುತ್ ಖಾಸಗೀಕರಣ ಮಾಡಿದರೆ ಎಲ್ಲರೂ ಕೃಷಿ ಮಾಡುವುದನ್ನು ಬಿಡಬೇಕಾಗುತ್ತದೆ. ಇದರಿಂದ ಮುಂದಿನ ದಿನ ತುತ್ತು ಅನ್ನಕ್ಕೂ ಪರಿತಪಿಸಬೇಕಾಗುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಾಡಬಾರದು. ಈ ಹೋರಾಟಕ್ಕೆ ನಾಡಿನ ಸಮಸ್ತ ರೈತರ ಬೆಂಬಲವಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿರಲಿ; ಅಕ್ರಮ ಹೆಸರು ಸೇರ್ಪಡೆ ತಡೆಯಿರಿ: ಕಾಂಗ್ರೆಸ್ ಒತ್ತಾಯ

Advertisements

ರೈತ ಮುಖಂಡರಾದ ಸುರೇಶ ಶಿರಬೋರ, ಬಸವಂತ ಕಾಂಬಳೆ, ಪುಟ್ಟು ಗಡದನವರ, ರಾಜು ನದಾಫ್, ಮಹಾದೇವ ಬನಸೋಡೆ, ರಾಮನಗೌಡ ಪಾಟೀಲ, ಸಂಗೀತ ರಾಠೋಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ರಾಯಚೂರು | ಕೆವೈಸಿಗಾಗಿ ರಾತ್ರಿ ಸರತಿ ಸಾಲು: ಜನರ ಪರದಾಟ

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಜನರು ಇಡೀ ರಾತ್ರಿ ನ್ಯಾಯಬೆಲೆ ಅಂಗಡಿ...

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...