ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

Date:

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್ ಸಬ್ಸಿಡಿ ಮೊತ್ತ ನೀಡಲು ಮುಂದಾಗಿರುವ ಸರ್ಕಾರದ ನಿಲುವನ್ನು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘ ಗುರುವಾರ ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆಸಿತು.

- Advertisement -

ಸರ್ಕಾರವೇ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಸಂದೇಶ ಸಾರಲು ಖಾಲಿ ಕೊಡ ಹಿಡಿದು ನಗರದ ಮಾರುಕಟ್ಟೆಗಳಲ್ಲಿ ದೇಣಿಗೆ ಸಂಗ್ರಹಿಸಿದ ಸಂಘಟನೆ, ಬಳಿಕ ಸಂಗ್ರಹವಾದ ಹಣವನ್ನು ಸರ್ಕಾರಕ್ಕೆ ಕಳುಹಿಸುವ ಮೂಲಕ ಪ್ರತಿಭಟನೆಯ ಸ್ವರೂಪ ಎಲ್ಲರ ಗಮನ ಸೆಳೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ದೇಣಿಗೆ ಸಂಗ್ರಹ ಅಭಿಯಾನ ಎಲ್‌ಬಿಎಸ್ ಮಾರ್ಕೆಟ್, ನೆಹರು ಮಾರ್ಕೆಟ್, ಗಾಂಧಿ ಚೌಕ್, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮೂಲಕ ಸಾಗಿತು. ವ್ಯಾಪಾರಿಗಳು, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿದ ರೈತ ಮುಖಂಡರು ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇದೇ ವೇಳೆ ₹4,025 ಮೊತ್ತದ ಡಿಡಿಯನ್ನು ಸರ್ಕಾರಕ್ಕೆ ಕಳುಹಿಸಿದರು.

ರೈತರ ಸಂಕಷ್ಟ ಪರಿಹರಿಸಲು ₹2,500 ಸಾಲದು…

ಈ ಸಂದರ್ಭದಲ್ಲಿ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಬರದಿಂದ ಬೆಳೆ ಕಳೆದುಕೊಂಡಿರುವ ರೈತರ ಸಂಕಷ್ಟಕ್ಕೆ ₹2,500 ಪರಿಹಾರ ನೀಡಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಆಕ್ಷೇಪಿಸಿದರು.

ರೈತರ ಕೃಷಿ ವೆಚ್ಚವನ್ನು ವಾಸ್ತವಿಕವಾಗಿ ಪರಿಗಣಿಸಿ ಪರಿಹಾರ ನಿಗದಿಪಡಿಸಬೇಕು. ಭೂಮಿ ಸಿದ್ಧಪಡಿಸುವುದರಿಂದ ಹಿಡಿದು ಬೀಜ, ರಸಗೊಬ್ಬರ, ಬಿತ್ತನೆ ಹಾಗೂ ಕೂಲಿ ಕಾರ್ಮಿಕರ ವೆಚ್ಚದವರೆಗೆ ಪ್ರತಿಯೊಂದು ಖರ್ಚನ್ನೂ ಲೆಕ್ಕಕ್ಕೆ ತೆಗೆದುಕೊಂಡು ಪ್ರತಿ ಎಕರೆಗೆ ಆಗಿರುವ ನಷ್ಟದ ಆಧಾರದ ಮೇಲೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

‘ಸರ್ಕಾರದ ಬಳಿ ಹಣವಿಲ್ಲದಿದ್ದರೆ ರೈತರಿಗೆ ಪರಿಹಾರ ನೀಡುವುದನ್ನು ನಿಲ್ಲಿಸಲಿ. ಆದರೆ ಅಲ್ಪ ಮೊತ್ತದ ಪರಿಹಾರ ಘೋಷಿಸಿ ರೈತರ ಸಂಕಷ್ಟವನ್ನು ಹಗುರವಾಗಿ ಪರಿಗಣಿಸುವುದು ಸರಿಯಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಹಣಕಾಸಿನ ಸ್ಥಿತಿಗೆ ಶ್ವೇತಪತ್ರಕ್ಕೆ ಆಗ್ರಹ…

ರೈತರ ಸಂಕಷ್ಟಕ್ಕೆ ಸೂಕ್ತ ಪರಿಹಾರ ನೀಡಲು ಸಾಧ್ಯವಾಗದ ಪರಿಸ್ಥಿತಿ ಇದ್ದರೆ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಅರವಿಂದ ಕುಲಕರ್ಣಿ ಆಗ್ರಹಿಸಿದರು.

ರೈತರಿಗೆ ನೀಡುತ್ತಿರುವ ಪರಿಹಾರದ ಮೊತ್ತದ ಕುರಿತು ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ರಾಜ್ಯದ ಹಣಕಾಸಿನ ಪರಿಸ್ಥಿತಿ ನಿಜವಾಗಿಯೂ ಸಂಕಷ್ಟದಲ್ಲಿದ್ದರೆ ಅದರ ಸಂಪೂರ್ಣ ವಿವರವನ್ನು ಒಳಗೊಂಡ ಶ್ವೇತಪತ್ರವನ್ನು ಸರ್ಕಾರ ಹೊರಡಿಸಬೇಕು ಎಂದು ಒತ್ತಾಯಿಸಿದರು.

‘ರೈತರು ದಾನ ಕೇಳುತ್ತಿಲ್ಲ; ತಮ್ಮ ಬೆಳೆ ನಷ್ಟಕ್ಕೆ ನ್ಯಾಯಯುತ ಪರಿಹಾರ ಕೇಳುತ್ತಿದ್ದಾರೆ. ಕೃಷಿ ವೆಚ್ಚಕ್ಕೆ ಹೋಲಿಸಿದರೆ ₹2,500 ಪರಿಹಾರ ಯಾವುದಕ್ಕೂ ಸಾಲದು’ ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ, ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠಲ ಬಿರಾದಾರ, ರಾಮನಗೌಡ ಹಾದಿಮನಿ, ಗುರುಲಿಂಗಪ್ಪ ಪಡಸಲಗಿ, ಹೊರಕೆರಪ್ಪ ತೆಲಗಿ, ಶೆಟ್ಟಪ್ಪ ಲಮಾಣಿ, ಬಸವರಾಜ ಹೊಸಳ್ಳಿ, ಮಲ್ಲಿಕಾರ್ಜುನ ಬಟಗಿ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...