ವಿಜಯಪುರ |ಹಾಲು ಉತ್ಪಾದಕರಿಗೆ ಆರ್ಥಿಕ ಬಲ: ಪ್ರತಿ ಲೀಟರ್‌ಗೆ ₹7 ಹೆಚ್ಚುವರಿ ಪ್ರೋತ್ಸಾಹಧನ

Date:

ಬರಗಾಲದ ಸಂಕಷ್ಟ, ಪಶು ಆಹಾರದ ಬೆಲೆ ಏರಿಕೆ, ಹಸಿರು ಮೇವಿನ ಕೊರತೆ ಸೇರಿದಂತೆ ಹೈನುಗಾರಿಕೆ ಕ್ಷೇತ್ರ ಎದುರಿಸುತ್ತಿರುವ ಹಲವು ಸವಾಲುಗಳ ನಡುವೆ ರಾಜ್ಯ ಸರ್ಕಾರ ಹಾಲು ಉತ್ಪಾದಕ ರೈತರ ನೆರವಿಗೆ ಮುಂದಾಗಿದೆ.

- Advertisement -

ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧೀನದ ಜಿಲ್ಲಾ ಹಾಲು ಒಕ್ಕೂಟಗಳಿಗೆ ಗುಣಮಟ್ಟದ ಹಾಲು ಪೂರೈಸುವ ರೈತರಿಗೆ ಅಕ್ಟೋಬರ್ 1ರಿಂದ ಪ್ರತಿ ಲೀಟರ್‌ಗೆ ಹೆಚ್ಚುವರಿಯಾಗಿ ₹7 ಪ್ರೋತ್ಸಾಹಧನ ನೀಡುವ ನಿರ್ಧಾರ ಕೈಗೊಂಡಿರುವುದು ಹೈನುಗಾರರಲ್ಲಿ ಸಂತಸ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಇತ್ತೀಚಿನ ವರ್ಷಗಳಲ್ಲಿ ಬರಗಾಲದ ಪರಿಣಾಮ ಗ್ರಾಮೀಣ ಪ್ರದೇಶಗಳಲ್ಲಿ ಹಸಿರು ಮೇವಿನ ಲಭ್ಯತೆ ಕುಸಿದಿದೆ. ಮತ್ತೊಂದೆಡೆ ಪಶು ಆಹಾರ ಸೇರಿದಂತೆ ಹೈನುಗಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ನಿರ್ವಹಣಾ ವೆಚ್ಚ ಹೆಚ್ಚಾದ ಹಿನ್ನೆಲೆಯಲ್ಲಿ ಅನೇಕ ರೈತರು ಹೈನುಗಾರಿಕೆಯನ್ನು ಮುಂದುವರಿಸಲು ಸಾಧ್ಯವಾಗದೆ ಜಾನುವಾರುಗಳನ್ನು ಮಾರಾಟ ಮಾಡುವ ಪರಿಸ್ಥಿತಿಯನ್ನೂ ಎದುರಿಸುತ್ತಿದ್ದಾರೆ.ಇಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ಹೆಚ್ಚುವರಿ ಪ್ರೋತ್ಸಾಹಧನದ ನಿರ್ಧಾರ ರೈತರಿಗೆ ಆರ್ಥಿಕ ಆಸರೆಯಾಗಲಿದೆ. ಹಾಲು ಉತ್ಪಾದನೆಯ ಮೂಲಕ ಕುಟುಂಬದ ಆದಾಯ ಹೆಚ್ಚಿಸಿಕೊಳ್ಳಲು, ಹೈನುಗಾರಿಕೆಯನ್ನು ಮತ್ತಷ್ಟು ವಿಸ್ತರಿಸಲು ಹಾಗೂ ಕೃಷಿಯ ಜೊತೆಗೆ ಪಶುಸಂಗೋಪನೆಯನ್ನು ಉಪಕಸುಬಾಗಿ ಬೆಳೆಸಿಕೊಳ್ಳಲು ಈ ನೆರವು ಉತ್ತೇಜನ ನೀಡಲಿದೆ.

ಗ್ರಾಮೀಣ ಭಾಗದ ರೈತರು ಉದ್ಯೋಗ ಅರಸಿ ನಗರ ಹಾಗೂ ಇತರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯುವಲ್ಲಿಯೂ ಇಂತಹ ಕ್ರಮಗಳು ಸಹಕಾರಿಯಾಗಲಿವೆ. ಹೈನುಗಾರಿಕೆ ಕೇವಲ ಹಾಲು ಉತ್ಪಾದನೆಯ ಚಟುವಟಿಕೆಯಾಗಿರದೆ, ಗ್ರಾಮೀಣ ಆರ್ಥಿಕತೆಯ ಪ್ರಮುಖ ಆಧಾರವಾಗಿರುವುದರಿಂದ ಸರ್ಕಾರದ ಈ ನಿರ್ಧಾರ ಮಹತ್ವ ಪಡೆದಿದೆ.ಹಾಲಿನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆದು ಸೂಕ್ತ ಮನವಿ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಂಬಂಧಿಸಿದ ಸಚಿವರು, ವಿಜಯಪುರ-ಬಾಗಲಕೋಟೆ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರ ಪ್ರಯತ್ನವನ್ನು ಜಿಲ್ಲೆಯ ಹಾಲು ಉತ್ಪಾದಕ ರೈತರು ಅಭಿನಂದಿಸಿದ್ದಾರೆ.

ಸರ್ಕಾರದ ಈ ನಿರ್ಧಾರದಿಂದ ಹೈನುಗಾರಿಕೆ ಕ್ಷೇತ್ರಕ್ಕೆ ಹೊಸ ಚೈತನ್ಯ ದೊರೆಯಲಿದ್ದು, ರೈತರ ಆರ್ಥಿಕ ಸ್ವಾವಲಂಬನೆಗೆ ಮತ್ತಷ್ಟು ಬಲ ಸಿಗಲಿದೆ ಎಂಬ ಆಶಯವನ್ನು ಕನ್ನೂರ ಭಾಗದ ಹಾಲು ಸಂಗ್ರಹಕಾರ ಸಿದ್ದು ಬೆಳ್ಳುಂಡಗಿ ಸೇರಿದಂತೆ ಜಿಲ್ಲೆಯ ಹಾಲು ಉತ್ಪಾದಕರು ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಶಿಕ್ಷಕರು ಮಕ್ಕಳ ಪ್ರತಿಭೆ ಗುರುತಿಸಿ : ಸಭಿಯಾ ಪಟೇಲ್

ಹುಲಸೂರ ಪಟ್ಟಣದ ಇಕ್ಬಾಲ್‌ ಪಟೇಲ್‌ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ...

ವಿಜಯಪುರ | ಹಾಲುಮತ ಸಮಾಜದ ಭಂಡಾರದಲ್ಲಿ ಶಕ್ತಿ, ಭಕ್ತಿ ಇದೆ: ಎಂ.ಬಿ.ಪಾಟೀಲ

ಹಾಲುಮತ ಸಮಾಜ ಸ್ವಚ್ಛ ಹಾಗೂ ಶ್ರೇಷ್ಠ ಸಮುದಾಯವಾಗಿದ್ದು, ಅದರ ಭಂಡಾರದಲ್ಲಿ ಶಕ್ತಿ...

ಉತ್ತರ ಪ್ರದೇಶ SIR | ಮತಪಟ್ಟಿಯಿಂದ 1.27 ಕೋಟಿ ಹೆಸರುಗಳು ಡಿಲೀಟ್‌; ಹಲವರ ಮರುಸೇರ್ಪಡೆಗೆ ಬಿಜೆಪಿ ತಂತ್ರ

ಉತ್ತರ ಪ್ರದೇಶದಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬರೋಬ್ಬರಿ 1.27 ಕೋಟಿ ಮತದಾರರ...

ಭಾರತದ ಸರಕುಗಳಿಗೆ ಅಮೆರಿಕ ಮಾರುಕಟ್ಟೆಯಲ್ಲಿ ಆದ್ಯತೆ; ಸುಂಕ ಕಡಿತದ ಒಪ್ಪಂದಕ್ಕೆ ಒಪ್ಪಿಗೆ

ಅಮೆರಿಕದ ಮಾರುಕಟ್ಟೆಯಲ್ಲಿ ಭಾರತದ ಸರಕುಗಳಿಗೆ ಆದ್ಯತೆ ನೀಡಿ, ಬೇರೆ ರಾಷ್ಟ್ರಗಳ ಸರಕುಗಳಿಗೆ...