ವಿಜಯಪುರ | ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಧೃಡಸಂಕಲ್ಪ ಅಗತ್ಯ: ಬಿ.ಕೆ ಸರೋಜಾ

Date:

ಮಾದಕ ವಸ್ತುಗಳ ಸೇವನೆಯಿಂದ ಯುವಜನತೆ ತಪ್ಪು ದಾರಿಗೆ ಸಾಗುತ್ತಿರುವುದು ಸಮಾಜಕ್ಕೆ ಗಂಭೀರ ಸವಾಲಾಗಿದ್ದು, ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ದೃಢಸಂಕಲ್ಪ ಅಗತ್ಯ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಸರೋಜಾ ಕರೆ ನೀಡಿದರು.

- Advertisement -

ವಿಜಯಪುರ ತಾಲೂಕಿನ ಕವಲಗಿ ಸಂಗನಬಸವ ಅಂತರರಾಷ್ಟ್ರೀಯ ಶಾಲೆಯಲ್ಲಿ ನಡೆದ ಸಂಗನಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಹಯೋಗದಲ್ಲಿ ‘ನಶೆ ಮುಕ್ತ ಭಾರತ ಅಭಿಯಾನ’ ಹಾಗೂ ‘ಮಿಷನ್ ಸ್ಪಂದನ’ ಅಡಿಯಲ್ಲಿ ಆಗಸ್ಟ್ 6ರಿಂದ 20ರವರೆಗೆ ದೇಶವ್ಯಾಪಿ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಈ ಅಭಿಯಾನದ ಮೂಲಕ ದೇಶದಾದ್ಯಂತ ಸುಮಾರು 10 ಕೋಟಿ ಜನರಿಗೆ ವ್ಯಸನ ಮುಕ್ತಿಯ ಸಂದೇಶ ತಲುಪಿಸುವ ಗುರಿ ಹೊಂದಲಾಗಿದೆ. ಯುವಜನತೆಯನ್ನು ದುಶ್ಚಟಗಳಿಂದ ದೂರವಿಟ್ಟು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು.

“ವಿಕಸಿತ ಭಾರತದತ್ತ ಒಂದು ಸಬಲ ಹೆಜ್ಜೆ” ಎಂಬ ಧ್ಯೇಯದೊಂದಿಗೆ ನಡೆಯಲಿರುವ ಈ ಅಭಿಯಾನದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದ ಅವರು, ಇದೇ ಸಂದರ್ಭದಲ್ಲಿ ಎಲ್ಲರಿಗೂ ವ್ಯಸನ ಮುಕ್ತ ಜೀವನ ನಡೆಸುವ ಪ್ರತಿಜ್ಞೆ ಬೋಧಿಸಿದರು.

ಕಾರ್ಯಕ್ರಮದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಶೈಲಜಾ ಪಾಟೀಲ ಯತ್ನಾಳ, ಸಿದ್ಧೇಶ್ವರ ಸಂಸ್ಥೆಯ ಅಧ್ಯಕ್ಷ ಬಸಯ್ಯ ಹಿರೇಮಠ, ಬ್ರಹ್ಮಕುಮಾರಿ ಸಂಸ್ಥೆಯ ಬಿ.ಕೆ. ಶೈಲಾ ಅಕ್ಕ, ಸುವರ್ಣ ಅಕ್ಕ, ಕಲ್ಮೇಶ್, ಹೃಷಿಕೇಶ್ ಹಿಪ್ಪರಗಿ, ಡಾ. ರವೀಂದ್ರ ಬೆಳ್ಳಿ, ಸಂಸ್ಥೆಯ ಪದಾಧಿಕಾರಿಗಳು, ಶಾಲೆಯ ವಿದ್ಯಾರ್ಥಿಗಳು, ಪಾಲಕರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಅ. 31ರಂದು ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ...

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...