ವಿಜಯಪುರ | ಮೇಲ್ಛಾವಣಿ ಕುಸಿದು ನಾಲ್ವರು ಸಾವು: ಮೃತರ ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಣೆ

Date:

ವಿಜಯಪುರ ಜಿಲ್ಲೆಯ ಆಲಮೇಲ‌ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ನಾಲ್ವರು ಸಾವಿಗೀಡಾದ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ‌ ಅವರು ₹20 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

- Advertisement -

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಅವರು, ಜಿಲ್ಲಾಧಿಕಾರಿ ಡಾ. ಆನಂದ ಕೆ, ಎಸ್‌ಪಿ ಲಕ್ಷ್ಮಣ ನಿಂಬರಗಿ ಹಾಗೂ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರಿಂದ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ‌‌ ಅವಘಡದಲ್ಲಿ ದಂಪತಿಯಾದ ಗುರುನಾಥ ಬಡಿಗೇರ(35), ಜ್ಯೋತಿ ಬಡಿಗೇರ(28) ಮತ್ತು ಅವರ ಮಕ್ಕಳಾದ ಕಾಳಮ್ಮ ಬಡಿಗೇರ(13) ಹಾಗೂ ಕೀರ್ತಿ ಬಡಿಗೇರ(9) ಸಾವಿಗೀಡಾಗಿದ್ದಾರೆ.

ಗುರುನಾಥ ಬಡಿಗೇರ ತಾಯಿ ಶಾಂತಾಬಾಯಿ ಮತ್ತು ಮಗ ವೀರೇಶ(10) ಮತ್ತೊಂದು ಮನೆಯಲ್ಲಿ ಮಲಗಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮಾಹಿತಿ ತಿಳಿದುಕೊಂಡ ಬಳಿಕ ಸಚಿವರು, ಬಡಿಗೇರ ಗುರುನಾಥ ಅವರ ತಾಯಿ ಶಾಂತಾಬಾಯಿ ಮತ್ತು ಪುತ್ರ ವೀರೇಶ ಹಾಗೂ ಕುಟುಂಬ ಸದಸ್ಯರಿಗೆ ಸಾಂತ್ವನ‌ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, “ಈ ದುರ್ಘಟನೆ ನಡೆಯಬಾರದಿತ್ತು. ಗುರುನಾಥ ಬಡಿಗೇರ ದಂಪತಿ ತಮ್ಮ ಮನೆಯ ದುರಸ್ತಿ ಹಿನ್ನೆಲೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ತಮ್ಮ ಮನೆಗೆ ಮರಳುವವರಿದ್ದರು. ಆದರೆ ವಿಧಿಯಾಟಕ್ಕೆ ಬಲಿಯಾಗಿದ್ದಾರೆ. ಸಾವಿಗೀಡಾದ ನಾಲ್ಕು ಜನರ ಕುಟುಂಬಕ್ಕೆ ತಲಾ ₹5 ಲಕ್ಷದಂತೆ ಒಟ್ಟು ₹20 ಲಕ್ಷ ಪರಿಹಾರ ನೀಡಲಾಗುವುದು ಮತ್ತು ಬದುಕುಳಿದಿರುವ ಬಾಲಕ ವೀರೇಶ ಬಡಿಗೇರ ವಿದ್ಯಾಭ್ಯಾಸಕ್ಕೆ ನೆರವಾಗಲಿದೆ. ಪರಿಹಾರದ ಹಣವನ್ನು ಬಾಲಕನ ಹೆಸರಿನಲ್ಲಿ ಬ್ಯಾಂಕಿನಲ್ಲಿ ಠೇವಣಿ ಇಡಲಾಗುವುದು. ಸಾವಿಗೀಡಾದವರ ಶವಪರೀಕ್ಷೆ ಮೊರಟಗಿಯಲ್ಲಿಯೇ ನಡೆಯಲಿದೆ” ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ? ವಿಜಯಪುರ | ಭಾರೀ ಮಳೆಗೆ ಮೇಲ್ಛಾವಣಿ ಕುಸಿತ: ಒಂದೇ ಮನೆಯ ನಾಲ್ವರು ಸಾವು

ಸಿಂಧಗಿ‌ ಶಾಸಕ ಅಶೋಕ ಮನಗೂಳಿ, ಮಾಜಿ ಶಾಸಕ ರಮೇಶ ಭೂಸನೂರ, ಜಿ. ಪಂ. ಮಾಜಿ ಸದಸ್ಯ ನರಸಿಂಗಸಾ ತಿವಾರಿ, ಮುಖಂಡ ಅಶೋಕ ವಾರದ, ಜಿಲ್ಲಾ ಆರೋಗ್ಯಾಧಿಕಾರಿ ಸಂಪತಕುಮಾರ ಗುಣಾರಿ, ಕಂದಾಯ, ಆರೋಗ್ಯ, ಜಿ.ಪಂ, ಪೊಲೀಸ್, ಅಗ್ನಿಶಾಮಕ ದಳ ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ಬೀದರ್‌ | ಲೇಖಕರಿಂದ ಗಟ್ಟಿ ಸಾಹಿತ್ಯ ಹೊರಬರಲಿ: ವಿಜಯಕುಮಾರ ಸೋನಾರೆ

ಪುಸ್ತಕಗಳ ನಿರಂತರ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಬೀದರ್ ಜಿಲ್ಲೆಯಲ್ಲಿರುವ ಪ್ರತಿಭಾನ್ವಿತ...

ಪಾಕಿಸ್ತಾನಿ ಜಾಲದ ಹನಿಟ್ರ್ಯಾಪ್‌ಗೆ ಬಿದ್ದ ಭಾರತೀಯ ನೌಕಾಪಡೆ ಸೈನಿಕನಿಂದ ಗೌಪ್ಯ ಮಾಹಿತಿ ಸೋರಿಕೆ; ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಭಾರತೀಯ ನೌಕಾಪಡೆಯ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...