ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಅಧೀನದಲ್ಲಿರುವ ಜಿಲ್ಲಾ ಪಂಚಾಯಿತಿ ಮುದ್ರಣಾಲಯದ ವತಿಯಿಂದ 2026-27ನೇ ಸಾಲಿಗೆ ಒಂದು ತಿಂಗಳ ಅವಧಿಯ ಉಚಿತ ಕಂಪ್ಯೂಟರ್ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗೆ ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ₹1,500 ಸಹಾಯಧನ ನೀಡಲಾಗುತ್ತದೆ. ಕಂಪ್ಯೂಟರ್ ಕೌಶಲ ಬೆಳೆಸುವ ಮೂಲಕ ಅಭ್ಯರ್ಥಿಗಳು ಸ್ವಂತ ಉದ್ಯೋಗ ಆರಂಭಿಸಲು ಅಗತ್ಯವಾದ ಪ್ರಾಥಮಿಕ ತರಬೇತಿ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.
**ಯಾರೆಲ್ಲ ಅರ್ಜಿ ಸಲ್ಲಿಸಬಹುದು?*
ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿದಾರರು ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು. ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿದೆ.
**ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನ*
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವಿಜಯಪುರ ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 30ರಂದು ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.ಅರ್ಜಿಗಳನ್ನು ಉಪನಿರ್ದೇಶಕರು (ಗ್ರಾ.ಕೈ), ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿ ಆವರಣ, ಸ್ಟೇಷನ್ ಬ್ಯಾಕ್ ರೋಡ್, ಶಿಕಾರಖಾನೆ, ವಿಜಯಪುರ ವಿಳಾಸಕ್ಕೆ ಸಲ್ಲಿಸಬೇಕು.**ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ*ತರಬೇತಿ ಹಾಗೂ ಅರ್ಜಿ ಸಲ್ಲಿಕೆ ಕುರಿತು ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಮೊಬೈಲ್ ಸಂಖ್ಯೆ 9972162222 ಅಥವಾ 9448644220 ಸಂಪರ್ಕಿಸಬಹುದು ಎಂದು ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






