ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

Date:

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಅಧೀನದಲ್ಲಿರುವ ಜಿಲ್ಲಾ ಪಂಚಾಯಿತಿ ಮುದ್ರಣಾಲಯದ ವತಿಯಿಂದ 2026-27ನೇ ಸಾಲಿಗೆ ಒಂದು ತಿಂಗಳ ಅವಧಿಯ ಉಚಿತ ಕಂಪ್ಯೂಟರ್ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ತರಬೇತಿಗೆ ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ₹1,500 ಸಹಾಯಧನ ನೀಡಲಾಗುತ್ತದೆ. ಕಂಪ್ಯೂಟರ್ ಕೌಶಲ ಬೆಳೆಸುವ ಮೂಲಕ ಅಭ್ಯರ್ಥಿಗಳು ಸ್ವಂತ ಉದ್ಯೋಗ ಆರಂಭಿಸಲು ಅಗತ್ಯವಾದ ಪ್ರಾಥಮಿಕ ತರಬೇತಿ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿದಾರರು ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು. ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿದೆ.

ಅ.30 ಕೊನೆಯ ದಿನ

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವಿಜಯಪುರ ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 30ರಂದು ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಅರ್ಜಿಗಳನ್ನು ಉಪನಿರ್ದೇಶಕರು (ಗ್ರಾ.ಕೈ), ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿ ಆವರಣ, ಸ್ಟೇಷನ್ ಬ್ಯಾಕ್ ರೋಡ್, ಶಿಕಾರಖಾನೆ, ವಿಜಯಪುರ ವಿಳಾಸಕ್ಕೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ*ತರಬೇತಿ ಹಾಗೂ ಅರ್ಜಿ ಸಲ್ಲಿಕೆ ಕುರಿತು ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಮೊಬೈಲ್ ಸಂಖ್ಯೆ 9972162222 ಅಥವಾ 9448644220 ಸಂಪರ್ಕಿಸಬಹುದು ಎಂದು ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ನಾಗರಿಕ ಸಭ್ಯತೆ, ಹೊಣೆಗಾರಿಕೆ ಮತ್ತು ಸಾಮಾಜಿಕ ಮಾಧ್ಯಮಗಳು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ...

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...