ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ Gen Z ಪೀಳಿಗೆ ತನ್ನ ಶಕ್ತಿ ಪ್ರದರ್ಶಿಸಬೇಕು: ಪ್ರದೀಪ್ ಪಾಟೀಲ್

Date:

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ರಾಜ್ಯದ ರಾಜಕೀಯ ದಿಕ್ಕನ್ನು ಬದಲಿಸುವ ವೇದಿಕೆಗಳಾಗಬೇಕು. ಈ ಚುನಾವಣೆಗಳಲ್ಲಿ Gen Z ಯುವಪೀಳಿಗೆ ತನ್ನ ಶಕ್ತಿಯನ್ನು ಪ್ರದರ್ಶಿಸುವುದರ ಜೊತೆಗೆ ಪ್ರಾಮಾಣಿಕರು, ವಿದ್ಯಾವಂತರು ಹಾಗೂ ಸೇವಾ ಮನೋಭಾವದವರು ರಾಜಕೀಯಕ್ಕೆ ಧುಮುಕಬೇಕು ಎಂದು ಗ್ರಾಮ ಸ್ವರಾಜ್ಯ ಕರ್ನಾಟಕದ ರಾಜ್ಯ ಉಪಾಧ್ಯಕ್ಷ ಪ್ರದೀಪ್ ಪಾಟೀಲ್ (ನಾಗರದಿನ್ನಿ) ಕರೆ ನೀಡಿದ್ದಾರೆ.

- Advertisement -

ಪ್ರಾಮಾಣಿಕ ಸಮಾಜ ಸೇವಕರು, ವೈದ್ಯರು, ಶಿಕ್ಷಣ ತಜ್ಞರು, ಕ್ರೀಡಾಪಟುಗಳು ಹಾಗೂ ವಿವಿಧ ಕ್ಷೇತ್ರಗಳ ತಜ್ಞರು ರಾಜಕೀಯ ಪ್ರವೇಶಿಸಬೇಕು. ರಾಜಕೀಯವನ್ನು ದೂರದಿಂದ ನಿಂತು ಟೀಕಿಸುವುದರಿಂದ ಮಾತ್ರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ. ಬದಲಾಗಿ, ವ್ಯವಸ್ಥೆಯ ಭಾಗವಾಗಿ ಅದರಲ್ಲಿರುವ ಲೋಪದೋಷಗಳನ್ನು ಸರಿಪಡಿಸುವ ಜವಾಬ್ದಾರಿಯನ್ನು ವಿದ್ಯಾವಂತರು ಮತ್ತು ಜನಪರ ಕಾಳಜಿಯುಳ್ಳ ನಾಗರಿಕರು ವಹಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಹೋರಾಟದ ಜತೆಗೆ ಅಧಿಕಾರದಲ್ಲೂ ಜನಪರ ಧ್ವನಿ ಇರಲಿ:

ಬೀದಿಗಿಳಿದು ಎಷ್ಟೇ ಹೋರಾಟ ನಡೆಸಿದರೂ ರೈತರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಿರೀಕ್ಷಿತ ಕಾಳಜಿ ತೋರುತ್ತಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸುವವರು ಅಧಿಕಾರದ ಕೇಂದ್ರದಲ್ಲಿದ್ದಾಗ ಮಾತ್ರ ಪರಿಣಾಮಕಾರಿ ಬದಲಾವಣೆ ಸಾಧ್ಯ. ಹೀಗಾಗಿ ಜನಪರ ಧ್ವನಿಗಳು ಆಡಳಿತ ವ್ಯವಸ್ಥೆಯ ಭಾಗವಾಗುವುದು ಇಂದಿನ ಅನಿವಾರ್ಯತೆಯಾಗಿದೆ ಎಂದು ಪ್ರದೀಪ್ ಪಾಟೀಲ್ ಹೇಳಿದ್ದಾರೆ.

ಕರ್ನಾಟಕದ ಹಿತ ಕಾಯಲು ಪರ್ಯಾಯ ರಾಜಕೀಯ ಶಕ್ತಿ ಅಗತ್ಯ

ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯುವ ಉದ್ದೇಶದಿಂದ ಕರ್ನಾಟಕದ ಸ್ಥಳೀಯ ರಾಜಕೀಯ ಪಕ್ಷಗಳು ಒಗ್ಗಟ್ಟಾಗಬೇಕು. ರಾಷ್ಟ್ರೀಯ ಪಕ್ಷಗಳ ರಾಜಕೀಯ ಪ್ರಾಬಲ್ಯಕ್ಕೆ ಸವಾಲೊಡ್ಡುವಂತಹ ಸ್ಪಷ್ಟ ಸಂದೇಶ ನೀಡುವ ಕಾಲ ಸನ್ನಿಹಿತವಾಗಿದೆ. ಕನ್ನಡಿಗರ ಹಿತಾಸಕ್ತಿಗಳನ್ನು ಕಾಪಾಡಲು ಕರ್ನಾಟಕದ ನೆಲದಿಂದಲೇ ಬೆಳೆದ ನಾಯಕತ್ವ ಹಾಗೂ ಪರ್ಯಾಯ ರಾಜಕೀಯ ಶಕ್ತಿ ರೂಪುಗೊಳ್ಳಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

*ಉಚಿತ ಕೊಡುಗೆಗಳಲ್ಲ, ಜನರ ತೆರಿಗೆ ಹಣದ ಲೆಕ್ಕ ಕೇಳಿ:

ಉಚಿತ ಕೊಡುಗೆಗಳನ್ನು ನೀಡುವುದಾಗಿ ಭರವಸೆ ನೀಡುವ ರಾಜಕಾರಣಿಗಳು ಸರ್ಕಾರ ನಡೆಯುವುದು ಜನರು ಪಾವತಿಸುವ ತೆರಿಗೆ ಹಣದಿಂದ ಎಂಬುದನ್ನು ಮರೆಯಬಾರದು. ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಸಮಾಜದ ಆಶಯ ಹಾಗೂ ನಜೀರ್ ಸಾಬ್ ಅವರ ಅಧಿಕಾರ ಜನರ ಕೈಗೆ ಎಂಬ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದ್ದಾರೆ.

ಮತ ಕೇಳಲು ಬರುವ ಅಭ್ಯರ್ಥಿಗಳ ಹಿಂದಿನ ಸಾಧನೆಗಳೇನು? ಗ್ರಾಮ ಮತ್ತು ವಾರ್ಡ್‌ಗಳ ಅಭಿವೃದ್ಧಿಗೆ ಅವರ ಯೋಜನೆಗಳೇನು? ಜನರಿಗೆ ನೀಡಿದ ಭರವಸೆಗಳನ್ನು ಎಷ್ಟರಮಟ್ಟಿಗೆ ಈಡೇರಿಸಿದ್ದಾರೆ? ಸಾರ್ವಜನಿಕ ಹಣದ ಬಳಕೆಯಲ್ಲಿ ಅವರ ಹೊಣೆಗಾರಿಕೆ ಏನು? ಎಂಬ ಪ್ರಶ್ನೆಗಳನ್ನು ಮತದಾರರು ಕೇಳಬೇಕು. ಅಭ್ಯರ್ಥಿಗಳ ಭರವಸೆಗಳಿಗೆ ಮರುಳಾಗದೆ ಅವರ ಕಾರ್ಯಕ್ಷಮತೆ ಮತ್ತು ಜನಪರ ಬದ್ಧತೆಯನ್ನು ಪರಿಶೀಲಿಸಿ ಮತ ಚಲಾಯಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಮತದಾರರು ಈಗಲೂ ರಾಜಕಾರಣಿಗಳನ್ನು ಪ್ರಶ್ನಿಸದೆ ಹೋದರೆ ಮುಂದಿನ ಪೀಳಿಗೆಯ ಭವಿಷ್ಯ ಆತಂಕಕ್ಕೆ ಸಿಲುಕುವ ಸಾಧ್ಯತೆಯಿದೆ. ಇಂದಿನ ರಾಜಕೀಯ ವ್ಯವಸ್ಥೆಯಲ್ಲಿನ ಬೆಳವಣಿಗೆಗಳು ಈ ಬಗ್ಗೆ ಎಚ್ಚರಿಕೆ ನೀಡುತ್ತಿವೆ ಎಂದು ಪ್ರದೀಪ್ ಪಾಟೀಲ್ ತಿಳಿಸಿದ್ದಾರೆ.

ಮತದಾರರಾಗುವುದಷ್ಟೇ ಅಲ್ಲ, ಅಭ್ಯರ್ಥಿಗಳಾಗಿಯೂ ಮುಂದೆ ಬನ್ನಿ

Gen Z ಯುವಕರು ಮತ್ತು ಯುವತಿಯರು ಕೇವಲ ಮತದಾರರಾಗಿ ಉಳಿಯದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಿಯೂ ಸ್ಪರ್ಧಿಸಲು ಮುಂದೆ ಬರಬೇಕು. ಪಾರದರ್ಶಕ, ಭ್ರಷ್ಟಾಚಾರರಹಿತ ಹಾಗೂ ಜನಸ್ನೇಹಿ ಆಡಳಿತವನ್ನು ಸ್ಥಾಪಿಸಲು ಯುವಶಕ್ತಿ ಸಂಘಟಿತವಾಗಬೇಕು. ಸ್ಥಳೀಯ ಆಡಳಿತದಲ್ಲಿ ಯುವಜನರ ಪಾಲ್ಗೊಳ್ಳುವಿಕೆ ಹೆಚ್ಚಾದಾಗ ಮಾತ್ರ ಜನರ ಸಮಸ್ಯೆಗಳಿಗೆ ಆದ್ಯತೆ ನೀಡುವ ಹಾಗೂ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸುವ ವ್ಯವಸ್ಥೆ ನಿರ್ಮಿಸಲು ಸಾಧ್ಯ ಎಂದು ಅವರು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಾಟಾ ಸಮೂಹ ನಾಶಕ್ಕೆ ಯತ್ನ; ಉದ್ಯಮಿಗಳ ಮೌನದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಟಾಟಾ ಸಮೂಹದಲ್ಲಿ ನಡೆಯುತ್ತಿರುವ ಆಂತರಿಕ ಬಿಕ್ಕಟ್ಟಿನ ಬೆನ್ನಲ್ಲೇ, ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ...

ಕಳೆಗುಂದಿದ ದರಿಯಾ ದೌಲತ್: ಟಿಪ್ಪು ಅರಮನೆಯ ಮೂಲ ಸೌಂದರ್ಯ ಉಳಿಸುವ ಹೊಣೆ ಯಾರದ್ದು?

ನೂರಾರು ವರ್ಷಗಳ ಇತಿಹಾಸವನ್ನು ತನ್ನೊಳಗೆ ಹುದುಗಿಸಿಕೊಂಡಿರುವ ಐತಿಹಾಸಿಕ ಸ್ಮಾರಕವೊಂದು ಮೂಲ ಸೌಂದರ್ಯವನ್ನು...

ನ.20ರಿಂದ ದೆಹಲಿಯಲ್ಲಿ SCO ಸಭೆ; ಹದಗೆಟ್ಟಿರುವ ಸಂಬಂಧದ ನಡುವೆಯೇ ಪಾಕ್‌ ಸಚಿವರಿಗೆ ಭಾರತದ ಆಹ್ವಾನ

ಆಪರೇಷನ್ ಸಿಂಧೂರ್ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ...