ವಿಜಯಪುರ | ವಿಧಾನ ಪರಿಷತ್ತಿನಲ್ಲಿ ಮುಸ್ಲಿಮರಿಗೆ ಅವಕಾಶ ನೀಡಿ: ಎಸ್ ಎಂ ಪಾಟೀಲ ಗಣಿಹಾರ

Date:

ವಿಧಾನ ಪರಿಷತ್ತಿನಲ್ಲಿ ವಿಜಯಪುರ ಮುಸ್ಲಿಮರಿಗೆ ಅವಕಾಶ ನೀಡಬೇಕೆಂದು ದಶಕದಿಂದ ಕೇಳುತ್ತಿದ್ದೇವೆ. ಆದರೂ ಈವರೆಗೂ ನೀಡಿಲ್ಲ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನವು ಇಲ್ಲ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತಿಯಲ್ಲೂ ಯಾವುದೇ ಸ್ಥಾನಮಾನ ಇಲ್ಲ. ಪಾಟೀಲರು, ಗೌಡರು ಆರಿಸಿ ಬರಲು ಮುಸ್ಲಿಮರು ಬೇಕು. ಆದರೆ, ಅಧಿಕಾರ ಮಾತ್ರ ಮುಸ್ಲಿಮರಿಗಿಲ್ಲ ಎಂಬಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಎಸ್ ಎಂ ಪಾಟೀಲ ಗಣಿಹಾರ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಅಧಿಕಾರ ಮತ್ತು ರಾಜಕೀಯ ಸ್ಥಾನಮಾನಗಳಿಂದ ವಂಚಿತರಾಗಿರುವ ವಿಜಯಪುರ ಮುಸ್ಲಿಮರಿಗೆ ವಿಧಾನ ಪರಿಷತ್ತಿಗೆ ನಾಮಕರಣ ಮಾಡುವ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ‌ ಕೆ ಹರಿಪ್ರಸಾದ್ ಹಾಗೂ ಜಿಲ್ಲೆಯ ಸಚಿವರು, ಶಾಸಕರು ಈ ಅನ್ಯಾಯವನ್ನು ಸರಿಪಡಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಮುಂಬರುವ ವಿಧಾನ ಪರಿಷತ್ತಿನ ಐದು ಸ್ಥಾನಗಳಿಗೆ ಸರ್ಕಾರ ನಾಮನಿರ್ದೇಶನ ಮಾಡುವಾಗ ವಿಜಯಪುರ ಜಿಲ್ಲೆಯ ಮುಸ್ಲಿಮರಿಗೂ ಖಾತೆ ನೀಡಬೇಕು. ಈಗಿನ ಮತ್ತು ಇಂದಿನ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿ ರಾಜ್ಯಸಭೆ, ವಿಧಾನಪರಿಷತ್, ಅಧ್ಯಕ್ಷ, ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲೆಡೆ ಬೆಂಗಳೂರು, ಮೈಸೂರು, ದಾವಣಗೆರೆ ಭಾಗದ ಮುಸ್ಲಿಮರಿಗೆ ಪ್ರಾತಿನಿಧ್ಯ ನೀಡಲಾಗುತ್ತಿದ್ದು, ವಿಜಯಪುರ ಜಿಲ್ಲೆಯ ಮುಸ್ಲಿಮರನ್ನು ಕಡೆಗಣನೆಗೆ ಒಳಗಾಗಿದ್ದೇವೆ” ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

“ಹಲವು ವರ್ಷಗಳಿಂದ ಪಕ್ಷಕ್ಕೆ ಸೇವೆ ಸಲ್ಲಿಸುತ್ತ ಬಂದಿದ್ದೇನೆ. ವಿಧಾನ ಪರಿಷತ್ತಿಗೆ ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ನನಗೂ ಅರ್ಹತೆ ಇದೆ. ಇದನ್ನು ಸಚಿವರು, ಶಾಸಕರು ಪರಿಗಣಿಸಬೇಕು” ಎಂದು ಮನವಿ ಮಾಡಿದರು.

“ಕೆಪಿಸಿಸಿ ಸುತ್ತಮುತ್ತ ಇರುವ ಮುಸ್ಲಿಮರಷ್ಟೇ ಪಕ್ಷದ ವರಿಷ್ಠರಿಗೆ ಕಾಣಿಸುತ್ತಿದ್ದಾರೆ. ಉಳಿದಂತೆ ಉತ್ತರ ಕರ್ನಾಟಕ ಭಾಗದ ಮುಸ್ಲಿಮರ ಬಗ್ಗೆ ಗಮನ ಹರಿಸುತ್ತಿಲ್ಲ. ಕೆಪಿಸಿಸಿ ಪಟ್ಟಿಯಲ್ಲಿ ವಿಜಯಪುರ ಮುಸ್ಲಿಮರು ಇದ್ದಾರೋ, ಇಲ್ಲವೋ ಎಂಬ ಸಂಶಯ ಕಾಡುತ್ತಿದೆ” ಎಂದು ಹೇಳಿದರು.

“ಬೇರೆ ಜಿಲ್ಲೆಗಳಲ್ಲಿ ಮುಸ್ಲಿಮರಿಗೆ ಸಿಗಬೇಕಾದ ಅಧಿಕಾರ, ಸ್ಥಾನಮಾನಗಳನ್ನು ಅಲ್ಲಿಯ ಸಚಿವರು, ಶಾಸಕರು ಸಿಗುವಂತೆ ಮಾಡುತ್ತಿದ್ದಾರೆ. ಆದರೆ, ವಿಜಯಪುರ ಜಿಲ್ಲೆಯ ಸಚಿವರು, ಶಾಸಕರು ಜಿಲ್ಲೆಯ ಮುಸ್ಲಿಮರಿಗೆ ಸೂಕ್ತ ಸ್ಥಾನಮಾನ ಕೊಡಿಸಲು ಕಾಲೇಜು ವಹಿಸದೆ ಅನ್ಯಾಯ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ವಿಜಯಪುರದ ಕಾಂಗ್ರೆಸ್ ಸಚಿವರು, ಶಾಸಕರಿಗೆ ಪ್ರತಿ ಚುನಾವಣೆಯಲ್ಲಿ ಮತ ಹಾಕುವುದಕ್ಕೆ, ಮತ ಹಾಕಿಸುವುದಕ್ಕೆ ಮಾತ್ರ ಮುಸ್ಲಿಮರನ್ನು ಸೀಮಿತ ಮಾಡಬೇಡಿ, ಇನ್ನು ಮುಂದಾದರೂ ಜಿಲ್ಲೆಯ ಸಚಿವರು, ಶಾಸಕರು ಒಂದುಗೂಡಿ ಸರ್ಕಾರ, ಹೈಕಮಾಂಡ್ ಮಟ್ಟದಲ್ಲಿ ವಿಜಯಪುರ ಜಿಲ್ಲೆಯ ಮುಸ್ಲಿಮರಿಗೆ ಅವಕಾಶ ಕಲ್ಪಿಸಿಕೊಡಲು ಆದ್ಯತೆ ನೀಡಬೇಕು” ಎಂದು ಒತ್ತಾಯಿಸಿದರು.

“ಶಾಸಕರಿಗೆ ನಮ್ಮ ಸಮಾಜದ ಮತ ಹಾಕಿಸುವುದು, ಬೆಂಬಲಿಸುವುದು, ಅವರು ಆಯ್ಕೆಯಾದ ಮೇಲೆ ಕುಣಿದು ಕುಪ್ಪಳಿಸುವುದು, ಅವರು ಮಂತ್ರಿಯಾದ ಬಳಿಕ ಸಂಭ್ರಮಿಸುವುದಕ್ಕೆ ಸೀಮಿತ ಮಾಡಿದ್ದಾರೆ. ಹಾಗಾದರೆ, ನಮ್ಮಿಂದ ಪಕ್ಷಕ್ಕೆ ಏನಾದರೂ ತಪ್ಪಾಗಿದೆಯಾ ಅಥವಾ ನಾವು ಪಕ್ಷಕ್ಕೆ ದುಡಿದಿಲ್ಲವೇ ಎಂಬ ಅನುಮಾನ ನಮಗೆ ಕಾಡತೊಡಗಿದೆ” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ತಾಳಿಕೋಟೆ | ವಿಕಲಚೇತನ ಯುವಕನ ಮೇಲೆ ಹಲ್ಲೆ ಮಾಡಿದವನ ಬಂಧನ: ಉಳಿದವರ ಬಂಧನಕ್ಕೂ ಆಗ್ರಹ

“ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ, ನಗರ ಮತ್ತು ಸ್ಥಳೀಯ ಸಂಸ್ಥೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಮುಸ್ಲಿಮರು ಅತಿಯಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತ ಬಂದಿರುವುದರಿಂದ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದೇವೆ. ಇಷ್ಟಾದರೂ ಕಾಂಗ್ರೆಸ್ಸಿನವರು ಕಾಳಜಿ ವಹಿಸುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ ಸಿ ಮುಲ್ಲಾ, ಫಯಾಜ್ ಕಲಾದಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...