ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಡಿಪಿಆರ್‌ ಮಂಜೂರಾತಿ, ನೋಂದಣಿ ಪೂರ್ಣ

Date:

ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆದ 116 ದಿನಗಳ ಪಕ್ಷಾತೀತ ಹೋರಾಟಕ್ಕೆ ಮಹತ್ವದ ಫಲ ದೊರೆತಿದೆ. ಕಾಲೇಜಿನ ವಿಸ್ತೃತ ಯೋಜನಾ ವರದಿ (DPR) ಸಿದ್ಧಗೊಂಡು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮಂಜೂರಾತಿ ದೊರೆತಿದೆ. ಕಾಲೇಜಿನ ಅಧಿಕೃತ ನೋಂದಣಿ ಪ್ರಕ್ರಿಯೆಯೂ ಪೂರ್ಣಗೊಂಡಿದೆ ಎಂದು ವಿಶೇಷ ಅಧಿಕಾರಿ ಡಾ. ಜಾನಕಿ ತೊರವಿ ತಿಳಿಸಿದ್ದಾರೆ.

- Advertisement -

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ಸದಸ್ಯರು ಡಾ. ಜಾನಕಿ ತೊರವಿ ಅವರನ್ನು ಭೇಟಿ ಮಾಡಿ ಕಾಲೇಜು ಸ್ಥಾಪನೆ ಹಾಗೂ ಡಿಪಿಆರ್‌ನ ಪ್ರಸ್ತುತ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಹಿರಿಯ ಸದಸ್ಯ ಡಾ.ಬಿ ಭಗವಾನ್ ರೆಡ್ಡಿ, “ಮುಂಬರುವ ಶೈಕ್ಷಣಿಕ ವರ್ಷದಲ್ಲೇ ವಿದ್ಯಾರ್ಥಿಗಳ ಪ್ರವೇಶ ಆರಂಭವಾಗುವಂತೆ ಮುಂದಿನ ಎಲ್ಲ ಪ್ರಕ್ರಿಯೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು” ಎಂದು ಒತ್ತಾಯಿಸಿದರು.

ಕಾಲೇಜು ವಿಜಯಪುರ ಜಿಲ್ಲೆಯ ಜನರ ಅರ್ಧ ಶತಮಾನಕ್ಕೂ ಹೆಚ್ಚಿನ ಕಾಲದ ಕನಸಾಗಿದ್ದು, ಇದೀಗ ಡಿಪಿಆರ್ ಮಂಜೂರಾತಿ ಹಾಗೂ ನೋಂದಣಿ ಪೂರ್ಣಗೊಂಡಿರುವುದು ಸಂತಸದ ಸಂಗತಿ. ಕಟ್ಟಡ ನಿರ್ಮಾಣ ಸೇರಿದಂತೆ ಮುಂದಿನ ಕಾಮಗಾರಿಗಳನ್ನು ವೇಗಗೊಳಿಸಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದು ಹೋರಾಟ ಸಮಿತಿ ಸರ್ಕಾರವನ್ನು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ಸದಸ್ಯರಾದ- ಅಕ್ರಮ್ ಮಾಶಾಳ್ಕರ್, ನೀಲಂಬಿಕಾ ಬಿರಾದಾರ್, ಭೋಗೇಶ್ ಸೋಲಾಪುರ್, ಲಕ್ಷ್ಮಣ್ ಹಂದರಾಳ್, ಗಿರೀಶ್ ಕಲಘಟಗಿ, ಜಗದೇವ್ ಸೂರ್ಯವಂಶಿ, ಬಾಳು ಜೇವೂರ್, ಬಿ.ಎಸ್.ಬೀರಕಬ್ಬಿ, ಮಲ್ಲಿಕಾರ್ಜುನ್ ಎಚ್.ಟಿ, ಶ್ರೀನಾಥ್ ಪೂಜಾರಿ, ಡಾ.ಎಂ.ಆರ್.ಗುರಿಕಾರ್, ಸಿದ್ದರಾಮ್ ಹಳ್ಳೂರ್, ಸುರೇಶ್ ಜಿ.ಬಿ., ಸುರೇಶ್ ಬಿಜಾಪುರ, ಲಲಿತಾ ಬಿಜ್ಜರಗಿ, ಲಕ್ಷ್ಮಣ್ ಕಂಬಾಗಿ, ಲಿಂಗರಾಜ್ ಬಿದರಕುಂದಿ, ಸಂತೋಷ್ ನಾಯಕ್, ಬಾಬಾಸಾಹೇಬ್ ಹತ್ತರಕಿಹಾಳ್, ಜ್ಯೋತಿ ಮಿಣಜಿಗಿ, ಸುಶೀಲಾ ಮಿಣಜಿಗಿ, ಭಾಗ್ಯ ಗಡದಿನ್ನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...

ಬೀದರ್‌ | ಚಾಕುವಿನಿಂದ ಇರಿದು ಮಾವನನ್ನೆ ಕೊಂದ ಅಳಿಯ

ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ,...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...