ವಿಜಯಪುರ | ಎಸ್ಸಿ–ಎಸ್ಟಿ ಮಹಿಳೆಯರಿಗೆ ಧ್ವಜಾರೋಹಣದ ಅವಕಾಶ ನೀಡಿ: ಪ್ರದೀಪ್‌ ಪಾಟೀಲ್‌

Date:

ರಾಜ್ಯದ 6,000 ಗ್ರಾಮ ಪಂಚಾಯಿತಿಗಳಲ್ಲಿ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸರ್ಕಾರದ ನೋಡಲ್ ಅಧಿಕಾರಿ ಅಥವಾ ಪಿಡಿಒಗಳ ಬದಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಧ್ವಜಾರೋಹಣದ ಅವಕಾಶ ನೀಡಬೇಕು ಎಂದು ಗ್ರಾಮ ಸ್ವರಾಜ್ಯ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಪ್ರದೀಪ ಪಾಟೀಲ್‌ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಪಂಚಾಯತ್ ರಾಜ್ ಸಚಿವರು ಹಾಗೂ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿರುವ ಅವರು, “ರಾಜ್ಯದ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳೊಂದಿಗೆ ಸರ್ಕಾರ ನಿಂತಿದೆ ಎಂಬುದನ್ನು ಈ ಮೂಲಕ ಖಾತ್ರಿಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸ್ವಾತಂತ್ರ್ಯೋತ್ಸವದಂತಹ ಮಹತ್ವದ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಸಮಾಜದ ಕಟ್ಟಕಡೆಯ ವರ್ಗದ ಮಹಿಳೆಯರಿಗೆ ಗೌರವ ನೀಡುವ ಮೂಲಕ ಸಾಮಾಜಿಕ ನ್ಯಾಯದ ಸಂದೇಶ ಸಾರಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಅವರ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸುವುದು ಸಮಾನತೆ ಮತ್ತು ಪ್ರಜಾಪ್ರಭುತ್ವದ ಆಶಯವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಕೂಡಲೇ ದಿನಾಂಕ ನಿಗದಿಪಡಿಸಿ, ಚುನಾಯಿತ ಪ್ರತಿನಿಧಿಗಳ ಮೂಲಕ ಗ್ರಾಮೀಣ ಆಡಳಿತ ವ್ಯವಸ್ಥೆ ಪರಿಣಾಮಕಾರಿಯಾಗಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರದೀಪ ಪಾಟೀಲ್‌ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...