ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಅತಿಥಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರ

Date:

ಋಣಾತ್ಮಕ ಚಿಂತನೆಗಳಿಂದ ದೂರವಿದ್ದು, ಧನಾತ್ಮಕ ಆಲೋಚನೆಗಳಿಂದ ಬದಕನ್ನು ಕಟ್ಟಿಕೊಳ್ಳಬೇಕು ವಿಜಯಪುರದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.

- Advertisement -

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚಿಗೆ ನಡೆದ ಅತಿಥಿ ಉಪನ್ಯಾಸಕರ ಪುನಶ್ಚೇತನ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಶಿಕ್ಷಣದ ಮಹತ್ವ, ಉಪನ್ಯಾಸಕರ ಜ್ಞಾನಶಕ್ತಿ ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಾತ್ರಗಳ ಕುರಿತು ವಿವರಿಸಿದರು. ಉಪನ್ಯಾಸಕರು ಅಪಾರ ಪರಿಶ್ರಮದೊಂದಿಗೆ ಆಧುನಿಕ ವಿಜ್ಞಾನ, ತಂತ್ರಜ್ಞಾನ ಹಾಗೂ ಅಂತರ್ಜಾಲವನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣವರ ಮಾತನಾಡಿ, “ಉಪನ್ಯಾಸಕರ ಜ್ಞಾನಾರ್ಜನೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅತ್ಯಂತ ಅವಶ್ಯಕವಾಗಿದೆ. ಶಿಕ್ಷಕರು ವಿದ್ಯಾರ್ಥಿಗಳ ಗಮನ ಹಾಗೂ ಅವಧಾನವನ್ನು ಕೇಂದ್ರೀಕರಿಸುವಂತೆ ಪರಿಣಾಮಕಾರಿ ಬೋಧನಾ ವಿಧಾನಗಳ ವಿವಿಧ ಮಾದರಿಗಳನ್ನು ಅಳವಡಿಸಿಕೊಳ್ಳಬೇಕು” ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಪಿ ಜಿ ತಡಸದ ಮಾತನಾಡಿ, “ಶಿಕ್ಷಕರು ಉತ್ತಮ ಮಾರ್ಗದರ್ಶಕರಾಗಿ ಪಾಠದ ಜತೆಗೆ ಮಾನವೀಯ ಮೌಲ್ಯಗಳು, ಶಿಸ್ತು ಮತ್ತು ಸಂಯಮವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು. ಉತ್ತಮ ಸಂವಹನ, ಸ್ನೇಹಪೂರ್ಣ ಮನೋಭಾವ, ಸೃಜನಶೀಲ ಬೋಧನೆ, ಪಾಠದ ಪೂರ್ವಸಿದ್ಧತೆ ಹಾಗೂ ವಿದ್ಯಾರ್ಥಿಗಳಿಗೆ ಪ್ರಶ್ನಿಸಲು ಅವಕಾಶ ನೀಡುವುದು ಅಗತ್ಯ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ನಾತಕ ಅಧ್ಯಯನ ವಿಭಾಗದ ವಿಶೇಷಾಧಿಕಾರಿ ಪ್ರೊ.ಸಕ್ಪಾಲ್ ಹೂವಣ್ಣ ಮಾತನಾಡಿ, “ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಕೇವಲ ಪಾಠ ಬೋಧಿಸುವವರಷ್ಟೇ ಅಲ್ಲ, ವಿದ್ಯಾರ್ಥಿಗಳ ವ್ಯಕ್ತಿತ್ವ, ನೈತಿಕ ಮೌಲ್ಯಗಳು, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಶಿಲ್ಪಿಗಳಾಗಿದ್ದಾರೆ. ಸಮಾಜಕ್ಕೆ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಮಾರ್ಗದರ್ಶನ ಅನಿವಾರ್ಯವಾಗಿದ್ದು, ಅವರ ಪ್ರೇರಣೆ ಮತ್ತು ಪರಿಶ್ರಮದಿಂದಲೇ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ದಾರಿಯನ್ನು ಹಿಡಿಯುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿ ಪರಿಷ್ಕರಣೆ, ಶೀಘ್ರವೇ ಅನುಷ್ಠಾನ: ಸಚಿವ ಶಿವಾನಂದ ಎಸ್

ಕಾರ್ಯಕ್ರಮದ ಸಂಯೋಜಕಿ ಡಾ. ಮೆಹರಾಜಬೇಗಂ ಸೈಯ್ಯದ, ಡಾ.ರೇಖಾ ಗಣಿಹಾರ, ಬೋಧಕರು ಮತ್ತು ಬೋಧಕೇತರರು ಇದ್ದರು. ಸಾವಿತ್ರಿ ಪ್ರಾರ್ಥಿಸಿದರು. ಜಗದೀಶ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಡಾ.ಚಲುವರಾಜು ವಂದಿಸಿದರು. ಡಾ. ಜಕ್ಕವ್ವ ವಠ್ಠಾರ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮರ ಕಡಿದಿದ್ದಕ್ಕೆ ಪ್ರಾಯಶ್ಚಿತ್ತ; 75 ಸಸಿ ನೆಟ್ಟು ಪೋಷಣೆಗೆ ಮುಂದಾದ ನಿವಾಸಿಗಳು

ಒಬ್ಬ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಗಳಿಸುವ ಸಂಪತ್ತು, ಆಸ್ತಿ-ಪಾಸ್ತಿಗಿಂತ ಒಂದು ಸಸಿಯನ್ನು...

ವಿಜಯಪುರ | ಗಣೇಶೋತ್ಸವದಲ್ಲಿ ಡಿಜೆ ಬಳಕೆ ನಿಯಂತ್ರಿಸಿ, ಸೌಹಾರ್ದತೆ ಕಾಪಾಡಿ: ಜಿಲ್ಲಾಧಿಕಾರಿ ಮನವಿ

ಗಣೇಶೋತ್ಸವ ಸಂದರ್ಭದಲ್ಲಿ ಡಿಜೆ ಹಾಗೂ ವಿದ್ಯುತ್ ಅವಘಡಗಳಿಂದ ಯಾವುದೇ ಅನಾಹುತ ಸಂಭವಿಸದಂತೆ...

ವಿಜಯಪುರ | 16ನೇ ಹಣಕಾಸು ಆಯೋಗದ ಅನುದಾನ ಸಮರ್ಥ ಬಳಕೆಗೆ ಆಗ್ರಹ

16ನೇ ಹಣಕಾಸು ಆಯೋಗದ ಅನುದಾನವನ್ನು ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜನರ...

ವಿಜಯಪುರ | ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಇಂದಿನಿಂದ ಅಗ್ನಿವೀರ ನೇಮಕಾತಿ ರ್ಯಾಲಿ

ಮಂಗಳೂರು ಸೇನಾ ನೇಮಕಾತಿ ಕಚೇರಿ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ನಗರದ...