ವಿಜಯಪುರ | ನಿಸ್ವಾರ್ಥ ಸತ್ಕಾರ್ಯಗಳು ಆಪತ್ಕಾಲದಲ್ಲಿ ನಮ್ಮನ್ನು ಕಾಪಾಡುತ್ತವೆ: ಡಾ. ಗೀತಾ ಶೆಟ್ಟಿ

Date:

ನಾವು ಮಾಡಿದ ನಿಷ್ಠೆ, ಪ್ರಾಮಾಣಿಕತೆ, ನಿಸ್ವಾರ್ಥ ಸತ್ಕಾರ್ಯಗಳು ಆಪತ್ಕಾಲದಲ್ಲಿ ನಮ್ಮನ್ನು ಕಾಪಾಡುತ್ತವೆ ಎಂದು ಇಂಗ್ಲೆಂಡಿನ ಎಡ್ವಿನ್‌ಬರ್ಗ್ ವಿಶ್ವವಿದ್ಯಾಲಯದ ವೈದ್ಯೆ ಡಾ. ಗೀತಾ ಶೆಟ್ಟಿ ಹೇಳಿದರು.

- Advertisement -

ವಿಜಯಪುರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ʼಕ್ಯಾನ್ಸರ್‌ನೊಂದಿಗೆ ಹೋರಾಟ‌ʼ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ತಮ್ಮ ಸ್ವಂತ ಅನುಭವ ಹಂಚಿಕೊಂಡ ಅವರು, “ಮೂರು ವರ್ಷಗಳ ಹಿಂದೆ ಸಾಮಾನ್ಯ ಬೇಧಿ, ಅತಿಸಾರದಿಂದ ಶುರುವಾದ ಕಾಯಿಲೆ ಉಲ್ಬಣಗೊಳ್ಳುತ್ತ, ಲಿವರ್ ವೈಫಲ್ಯ ಹಂತ ತಲುಪಿತ್ತು. ಎಷ್ಟೇ ನವೀನ ಮಾದರಿಯ ರೋಗ ಪತ್ತೆಯ ವಿಧಾನಗಳಿಂದಲೂ ಪ್ರಾಥಮಿಕ ಕಾರಣ ತಿಳಿಯಲು ತಿಂಗಳುಗಳೇ ಬೇಕಾದವು. ಅತೀ ವಿರಳವಾದ ಲಿವರ್ ಮೆಟಾಸ್ಟಾಟಿಕ್ ಕಾರ್ಸಿನಾಯ್ಡ ಟ್ಯುಮರ್ ನಿಂದ ಬಳಲುತ್ತಿದ್ದೆ. ಈ ಸಂದರ್ಭದಲ್ಲಿ ನನ್ನ ಪತಿ, ಪರಿವಾರ, ಸ್ನೇಹಬಳಗ ನೀಡಿದ ಬೆಂಬಲ, ಸಹಕಾರಗಳು ನನ್ನ ಕಷ್ಟ ಕಾಲದಲ್ಲಿ ಅನನ್ಯವಾಗಿದ್ದವು. ಲಿವರ್ ಕಸಿ ಮತ್ತು ಇತರ ಚಿಕಿತ್ಸೆಗಳನ್ನು ಭಾರತದಲ್ಲಿಯೇ ಪಡೆದೆ. ಭಾರತೀಯ ವೈದ್ಯಕೀಯ ಚಿಕಿತ್ಸೆ ವಿಶ್ವದಲ್ಲೇ ಶ್ರೇಷ್ಠವಾಗಿದೆ” ಎಂದು ತಿಳಿಸಿದರು.

ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ. ಕೋಟೆಣ್ಣವರ ಪ್ರಾಸ್ತಾವಿಕವಾಗಿ‌ ಮಾತನಾಡಿ, “ಡಾ. ಗೀತಾ ಶೆಟ್ಟಿ ಅವರು ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಎಂದೆಂದಿಗೂ ನಮಗೆ ಮಾದರಿಯಾಗಿದ್ದಾರೆ” ಎಂದು ಹೇಳಿದರು.

ಪ್ರಾಧ್ಯಾಪಕಿ ಡಾ.ವಿಜಯಾ ಪಾಟೀಲ ಮಾತನಾಡಿ, “ಡಾ. ಗೀತಾ ಶೆಟ್ಟಿ ಅವರು ಮಾದರಿ ವೈದ್ಯೆ ಮತ್ತು ಮಾದರಿ ರೋಗಿಯೂ ಆಗಿದ್ದಾರೆ. ಅವರ ಧೈರ್ಯ, ಇಚ್ಛಾಶಕ್ತಿ ಮತ್ತು ಸೇವಾ ಉತ್ಸುಕತೆಗಳು ಮೆಚ್ಚುವಂಥವು. ಎರಡು ವರ್ಷ ಕ್ಯಾನ್ಸರ್ ರೋಗದೊಂದಿಗೆ ಹೋರಾಡಿ ಜಯಿಸಿದ ಅವರು ವಿಶ್ವವಿಖ್ಯಾತ ಸ್ತನ ಶಸ್ತ್ರಚಿಕಿತ್ಸಕರಾಗಿದ್ದು, ಅವರು ವಿಜಯಪುರದ ಹೆಮ್ಮೆಯ ಸುಪುತ್ರಿ” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಏ.20ರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ಮಾಡಿದರೆ ಜೈಲು; ಜಿಲ್ಲಾಡಳಿತ ಖಡಕ್‌ ಎಚ್ಚರಿಕೆ

ಬಿ.ಎಲ್.ಡಿ.ಇ ಮೆಡಿಕಲ್ ಕಾಲೇಜಿನ ವೈಜ್ಞಾನಿಕ ಶೈಕ್ಷಣಿಕ ಮತ್ತು ಸಂಶೋಧನೆ ಸಮಿತಿ(SARS) ಹಾಗೂ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ತೇಜಸ್ವಿನಿ, ಹಿರಿಯ ಉಪ ಪ್ರಾಚಾರ್ಯ ಡಾ. ವಿಜಯಕುಮಾರ ಟಿ. ಕಲ್ಯಾಣಪ್ಪಗೋಳ, ವೈದ್ಯಕೀಯ ಅಧೀಕ್ಷಕ ಡಾ. ಸಂಜೀವ.ಬೆಂಟೂರ, ಆರ್ ಆ್ಯಂಡ್ ಡಿ ವಿಭಾಗದ ಡೀನ್ ಡಾ. ಎಂ. ಎಂ. ಪಾಟೀಲ, ಎಸ್. ಎ. ಆರ್. ಎಸ್ ಚೇರಮನ್ ಡಾ. ಲತಾದೇವಿ ಎಚ್. ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಜಿಲ್ಲಾಸ್ಪತ್ರೆಯ ಹಿರಿಯ ಶಸ್ತ್ರ ಚಿಕಿತ್ಸಕ ಡಾ. ಆನಂದ ಝಳಕಿ, ಡಾ. ವಿಜಯ ಕಟ್ಟಿ, ಡಾ. ಗಿರೀಶ ಕುಲ್ಲೊಳ್ಳಿ, ಡಾ. ವಿಕ್ರಂ ಸಿಂದಗಿಕರ, ಡಾ. ದೀಪಕ ಚವ್ಹಾಣ, ಸ್ನಾತಕ‌ ಹಾಗೂ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸ್ವಾತಂತ್ರ್ಯ ಹೋರಾಟ ಹಿನ್ನೆಲೆಯುಳ್ಳ BSP ನಾಯಕ ಸುಧೀಂದ್ರ ಭದೋರಿಯಾ ಕುಟುಂಬದ ಹೆಸರುಗಳು ಡಿಲೀಟ್‌

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಬಿಎಸ್‌ಪಿ ಹಿರಿಯ ನಾಯಕ, ಮಾಜಿ...

ಕಲಬುರಗಿ ಜಿಲ್ಲೆಗೆ 6 ಟಿಎಂಸಿ ನೀರು ಕಾಯ್ದಿರಿಸಲು ಪ್ರಸ್ತಾವನೆ : ಡಿಸಿ ಇಕ್ರಮ್ ಶರೀಫ್

ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ...

ರಾಜ್ಯದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದರೂ, ಹಿಂಗಾರು ಮಳೆಯ ಅಬ್ಬರ...