ವಿಜಯಪುರ | ವೈದ್ಯರು ಪ್ರೀತಿ, ಸಮಾಧಾನದಿಂದ ಮಾತನಾಡಿದರೆ ರೋಗಿಗಳು ಅರ್ಧ ಗುಣವಾಗುತ್ತಾರೆ: ಡಾ. ಸಿದ್ದನಗೌಡ ಎ ಪಾಟೀಲ

Date:

ಯುವ ವೈದ್ಯರು ಪ್ರೀತಿ ಮತ್ತು ಸಮಾಧಾನದಿಂದ ಮಾತನಾಡಿದರೆ ರೋಗಿಗಳು ಅರ್ಧ ಗುಣಮುಖರಾಗುತ್ತಾರೆ ಎಂದು ವಿಜಯಪುರ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಸ್ನಾತಕೋತ್ತರ ವಿಭಾಗದ ಅಧ್ಯಕ್ಷ ಡಾ. ಸಿದ್ದನಗೌಡ ಎ ಪಾಟೀಲ ಹೇಳಿದರು.

- Advertisement -

ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ನಡೆದ ಪ್ರಸಕ್ತ ವರ್ಷದ ಪದವಿ ಪ್ರದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ವಾಗ್ಭಟ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವೈದ್ಯ ವೃತ್ತಿಯು ಅತ್ಯಂತ ಪವಿತ್ರವಾಗಿದೆ. ರೋಗಿಗಳೊಂದಿಗೆ ಪ್ರೀತಿ ಮತ್ತು ಸಮಾಧಾನದಿಂದ ಮಾತನಾಡಿಸಿದರೆ ಅವರ ಅರ್ಧ ರೋಗ ಗುಣವಾಗುತ್ತದೆ. ಯುವ ವೈದ್ಯರು ಆರೋಗ್ಯ, ಸಮಯ ಹಾಗೂ ಅನುಭವಕ್ಕೆ ಯಾವಾಗಲು ಮಹತ್ವ ನೀಡಬೇಕು. ಈಗ ಪದವಿ ಪಡೆದಿರುವ ಯುವ ವೈದ್ಯರು ಸನ್ಮಾರ್ಗದಲ್ಲಿ ನಡೆಯುತ್ತ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿದ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ರೆಜಿಸ್ಟ್ರಾರ್ ಡಾ. ರಾಘವೇಂದ್ರ ವಿ ಕುಲಕರ್ಣಿ ಮಾತನಾಡಿ, “ವೈದ್ಯ ವಿದ್ಯಾರ್ಥಿಗಳು ತಾವು ಕಲಿತ ಆಯುರ್ವೇದ ವೈದ್ಯ ಪದ್ಧತಿಯನ್ನೇ ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಂಡು ಮಾತೃ ವಿದ್ಯೆ ಮತ್ತು ಸಮಾಜಕ್ಕೆ ನ್ಯಾಯ ಒದಗಿಸಬೇಕು” ಎಂದು ಕರೆ ನೀಡಿದರು.

“ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಪದವಿ ಪ್ರದಾನ ಸ್ವೀಕರಿಸಿದ ವೈದ್ಯರಿಗೆ ಚರಕ ಪ್ರತಿಜ್ಞಾವಿಧಿ ಬೋಧಿಸಿ ಅದನ್ನು ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಉಪಪ್ರಾಚಾರ್ಯ ಡಾ. ಶಶಿಧರ ನಾಯಕ, ಶೈಕ್ಷಣಿಕ ಸಂಯೋಜಕಿ ಡಾ. ಕಸ್ತೂರಿ ಪಾಟೀಲ, ಕಾಲೇಜಿನ ಬೋಧಕ, ಬೋಧಕರ ಹೊರತಾದ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

ಇದೇ ವೇಳೆ ಗಣ್ಯರು ಮಹಾವಿದ್ಯಾಲಯದ ನಾನಾ ವಿಭಾಗಗಳ ಮುಂದಿನ ಐದು ವರ್ಷಗಳ ಗುರಿ ಸಾಧನೆಯ ಪಕ್ಷಿನೋಟದ ಕೈಪಿಡಿ ಗಮ್ಯ 2030 ಮತ್ತು ವಿದ್ಯಾಲಯದ 2026ರ ಕಾರ್ಯಪಟ್ಟಿಯನ್ನು ಬಿಡುಗಡೆ ಮಾಡಿದರು. ಅಲ್ಲದೇ, ಅಧ್ಯಾಪಕರ ಬಳಗವು ಬರೆದ ನಾನಾ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಪಿಎಚ್‌ಡಿ ಪದವಿ ಪಡೆದ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಒಂದು ಮುಕ್ಕಾಲು ಕೋಟಿ ಜನರಿಗೆ ಕನಿಷ್ಟ ಕೂಲಿ ಸಿಗುವುದೇ ನಿಜವಾದ ನವೆಂಬರ್ ಕ್ರಾಂತಿ:‌ ಮೀನಾಕ್ಷಿ ಸುಂದರಂ

ಈ ಸಮಾರಂಭದಲ್ಲಿ ಒಟ್ಟು 55 ಪದವಿ, ಐದು ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಯಿತು. ಬಿಎಎಂಎಸ್ ಅಂತಿಮ ವರ್ಷದ ಪದವಿ ಪರೀಕ್ಷೆಯಲ್ಲಿ ಡಾ. ಮೋಸಮಿ ಸಾಮಂತ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಡಾ. ಪೂರ್ಣಿಮಾ ಪಾಟೀಲ ಇವರಿಗೆ ನಗದು ಪುರಸ್ಕಾರ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಪ್ರಾಚಾರ್ಯ ಡಾ. ಅಶೋಕ ಪಾಟೀಲ ಸ್ವಾಗತಿಸಿದರು. ಡಾ. ಮಾನಸಾ, ಡಾ. ಅನೀಸ್ ಮದನಿ ಹಾಗೂ ಡಾ. ಅನೀಸ್ ಮದನಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...