ವಿಜಯಪುರ | ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ಸೆ.23ರೊಳಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ

Date:

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–2026(ಎಸ್‌ಐಆರ್) ಹಿನ್ನೆಲೆಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿರುವ ಅರ್ಹ ಮತದಾರರು ಹಾಗೂ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅರ್ಹರಾಗಿರುವವರು ಸೆಪ್ಟೆಂಬರ್ 23ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆನಂದ ಕೆ ತಿಳಿಸಿದ್ದಾರೆ.

- Advertisement -

ಸೆ.19, 20ರಂದು ವಿಶೇಷ ಆಂದೋಲನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ಕುರಿತು ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಪ್ರಕಟಣೆ ಹೊರಡಿಸಿದ್ದು, “ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿರುವ ಅರ್ಹ ಮತದಾರರು ಮತ್ತು 2026ರ ಅಕ್ಟೋಬರ್ 1ಕ್ಕೆ 18 ವರ್ಷ ಪೂರ್ಣಗೊಳಿಸುವ ಯುವ ಮತದಾರರಿಗೆ ಅನುಕೂಲವಾಗುವಂತೆ ಸೆಪ್ಟೆಂಬರ್ 19, 20ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ವಿಶೇಷ ಆಂದೋಲನ ಆಯೋಜಿಸಲಾಗಿದೆ. ಈ ಎರಡು ದಿನಗಳಲ್ಲಿ ಸಂಬಂಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳು(ಬಿಎಲ್‌ಒ) ಬೆಳಿಗ್ಗಿನಿಂದಲೇ ಮತಗಟ್ಟೆಗಳಲ್ಲಿ ಲಭ್ಯವಿರಲಿದ್ದು, ಸಾರ್ವಜನಿಕರು ನೇರವಾಗಿ ಬಿಎಲ್‌ಒಗಳನ್ನು ಸಂಪರ್ಕಿಸಿ ಹೆಸರು ಸೇರ್ಪಡೆ, ತಿದ್ದುಪಡಿ ಸೇರಿದಂತೆ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ” ಎಂದು ಹೇಳಿದರು.

ನೋಟಿಸ್ ಪಡೆದವರು ವಿಚಾರಣೆಗೆ ಹಾಜರಾಗಬೇಕು

ಎಸ್‌ಐಆರ್ ಪ್ರಕ್ರಿಯೆಯಲ್ಲಿ ನೋಟಿಸ್ ಪಡೆದಿರುವ ಮತದಾರರು ನೋಟಿಸ್‌ನಲ್ಲಿ ನಮೂದಿಸಿರುವ ದಿನಾಂಕ ಮತ್ತು ವಿಚಾರಣಾ ಸ್ಥಳಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ವಿಚಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಯಾವ ನಮೂನೆ ಯಾರಿಗೆ?

ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ನಮೂನೆ–6, ಅನಿವಾಸಿ ಭಾರತೀಯರಿಗಾಗಿ ನಮೂನೆ–6ಎ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅಥವಾ ಆಕ್ಷೇಪಣೆ ಸಲ್ಲಿಸಲು ನಮೂನೆ–7, ವಿಳಾಸ ಬದಲಾವಣೆ, ಹೆಸರು ತಿದ್ದುಪಡಿ ಹಾಗೂ ಮತದಾರರ ಗುರುತಿನ ಚೀಟಿಯಲ್ಲಿ ಬದಲಾವಣೆ ಮಾಡಲು ನಮೂನೆ–8ರಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಸಂಬಂಧಿಸಿದ ಕಚೇರಿಗಳಲ್ಲಿ ನೇರವಾಗಿ ಸಲ್ಲಿಸಲು ಅವಕಾಶವಿದೆ.

24,524 ಮತದಾರರಿಗೆ ವಿಚಾರಣೆ

“ಎಸ್‌ಐಆರ್‌ ಪ್ರಕ್ರಿಯೆಯ ಮಾಹಿತಿಯಲ್ಲಿ ತಾರ್ಕಿಕ ಹೊಂದಾಣಿಕೆ ಕಂಡುಬರದ ಹಾಗೂ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದ ಜಿಲ್ಲೆಯ 24,524 ಮತದಾರರ ವಿಚಾರಣೆ ಪ್ರಕ್ರಿಯೆಯನ್ನು ಮತದಾರರ ನೋಂದಣಾಧಿಕಾರಿಗಳು ನಡೆಸುತ್ತಿದ್ದಾರೆ. ಈ ಮತದಾರರಿಗೆ ಈಗಾಗಲೇ ನೋಟಿಸ್‌ಗಳನ್ನು ನೀಡಲಾಗಿದ್ದು, ನೋಟಿಸ್‌ನಲ್ಲಿಯೇ ವಿಚಾರಣೆಯ ದಿನಾಂಕ ಹಾಗೂ ಸ್ಥಳದ ಮಾಹಿತಿಯನ್ನು ನಮೂದಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಔರಾದ್‌ | ಶಿಕ್ಷಕರ ದಿನಾಚರಣೆ: ಸಸಿ ನೆಟ್ಟು ಶಿಕ್ಷಕರಿಗೆ ಸನ್ಮಾನ

“ವಿಶೇಷ ಆಂದೋಲನದ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿಯೂ ಸಾರ್ವಜನಿಕರು ಸಂಬಂಧಿಸಿದ ತಹಶೀಲ್ದಾರ್ ಕಚೇರಿ ಅಥವಾ ಮತದಾರರ ನೋಂದಣಾಧಿಕಾರಿ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ, ಭಾರತೀಯ ಚುನಾವಣಾ ಆಯೋಗದ ವೋಟರ್ ಸರ್ವಿಸ್ ಪೋರ್ಟಲ್ ಮೂಲಕವೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲ ಅರ್ಹ ನಾಗರಿಕರು ಹಾಗೂ ಯುವ ಮತದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಸೇರಿ ಎಲ್ಲಾ ಉತ್ಸವಗಳಲ್ಲಿ ಆನೆಗಳ ಬಳಕೆ ನಿಷೇಧಿಸಿ, ರೋಬೋಟಿಕ್ ಆನೆ ಬಳಸಿ: ಅರಣ್ಯ ಸಚಿವರಿಗೆ ಮನವಿ

ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ...

ಔರಾದ(ಬಿ) ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆ

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...